ವಿರಾಜಪೇಟೆ NEWS DESK ಆ.31 : ಕೊಯಮತ್ತೂರಿನಲ್ಲಿ ನಡೆದ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ವಿರಾಜಪೇಟೆ ಕಾವೇರಿ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಅಪ್ಸರ ಜಯನ್ ಬಾಲಕಿಯರ ವಿಭಾಗದ ಕತಾದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನ ಗೆದ್ದಿದ್ದಾಳೆ. ಬಾಲಕಿಯರ 18 ವಯೋಮಾನದೊಳಗಿನ ವಿಭಾಗದ ಟೀಮ್ ಕತಾದಲ್ಲಿ ಎರಡನೇ ಸ್ಥಾನ ಪಡೆದು ಎರಡು ಬೆಳ್ಳಿ ಪದಕ ತಮ್ಮದಾಗಿಸಿಕೊಂಡು ಶಾಲೆಗೆ ಕೀರ್ತಿ ತಂದಿದ್ದಾಳೆ. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಸುದೇಶ್ ಬಿ.ಎಸ್, ಕಾರ್ಯದರ್ಶಿ ವಿನೋದ್ ಪಿ.ಎನ್, ಫ್ರೌಢಶಾಲಾ ಮುಖ್ಯ ಶಿಕ್ಷಕಿ ಜ್ಯೋತಿ ಬಿ.ಎಸ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಪರ‍್ವತಿ ಪಿ.ಯು, ಶಿಕ್ಷಕ ವೃಂದ ಹಾಗೂ ಪೋಷಕರು ಸಾಧಕಿ ಅಪ್ಸರ ಜಯನ್ ಗೆ ಅಭಿನಂದನೆ ಸಲ್ಲಿಸಿದ್ದಾರೆ.










