ಸುಂಟಿಕೊಪ್ಪ NEWS DESK ಆ.31: ಗದ್ದೆಯಲ್ಲಿ ಮೇಯುತ್ತಿದ್ದ ಗಬ್ಬದ ಹಸುವೊಂದರ ಮೇಲೆ ಕಾಡಾನೆ ದಾಳಿ ಮಾಡಿ ಗಾಯಗೊಳಿಸಿದ ಘಟನೆ ಕೆದಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊರೂರು ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.
ಹೊರೂರು ಗ್ರಾಮದ ಕಾಫಿ ಬೆಳೆಗಾರರಾದ ದೇವಿ ಪ್ರಸಾದ್ ಕಾಯರ್ ಮಾರ್ ಅವರಿಗೆ ಸೇರಿದ ಹಸುವನ್ನು ಗದ್ದೆಯಲ್ಲಿ ಹುಲ್ಲು ಮೇಯಲು ಬಿಟ್ಟಿದ್ದರು. ಈ ಸಂದರ್ಭ ಹಸುವಿನ ಮೇಲೆ ಕಾಡಾನೆ ದಾಳಿ ಮಾಡಿದೆ. ಹಸು ಗಂಭೀರವಾಗಿ ಗಾಯಗೊಂಡಿದ್ದು, ತುರ್ತು ಚಿಕಿತ್ಸೆ ನೀಡಲಾಯಿತು. ಕಾಡಾನೆ ಉಪಟಳದಿಂದ ಗ್ರಾಮಸ್ಥರು ಆತಂಕಗೊಂಡಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.










