ಮಡಿಕೇರಿ ಸೆ.2 NEWS DESK : ಕಾವೇರಿ ಶಾಲೆಯ ಆಡಳಿತ ಮಂಡಳಿ ವತಿಯಿಂದ ಅಮ್ಮತ್ತಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2024-25ರ ಸಾಲಿನ ವಲಯ ಮಟ್ಟದ ಕ್ರೀಡಾಕೂಟ ನಡೆಯಿತು. ಕಾವೇರಿ ವಿದ್ಯಾ ಸಂಸ್ಥೆಯ ಮುಖ್ಯಸ್ಥೆ ಹಾಗೂ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಗಾಲ್ಫ್ ಕ್ರೀಡೆಯ ತೀರ್ಪುಗಾರರಾದ ಕಾವೇರಿ ಮುತ್ತಣ್ಣ ಕ್ರೀಡಾ ದ್ವಜಾರೋಹಣ ನೆರವೇರಿಸಿ, ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತಮ್ಮನ್ನು ತಾವು ಹೇಗೆ ತೊಡಗಿಸಿಕೊಳ್ಳಬೇಕು”ಎಂಬುದನ್ನು ತಿಳಿಸಿದರು. ಈ ಸಂದರ್ಭದಲ್ಲಿ ಅಮ್ಮತ್ತಿಯ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ರುಕ್ಮಿಣಿ, ಪ್ರವೀಣ್ ವಿರಾಜಪೇಟೆಯ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಸುಷಾ, ಪಾಲಿಬೆಟ್ಟ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಕರುಂಬಯ್ಯ, ಅಮ್ಮತ್ತಿ, ಸರಕಾರಿ ಮಾದರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ದೊಡ್ಡ ತಮ್ಮಯ್ಯ, ಅಮ್ಮತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೆಚ್.ಎಸ್.ಸೋಮಕ್ಕ, ಕಾವೇರಿ ಶಾಲೆ ಆಡಳಿತ ಮಂಡಳಿಯ ಅಧ್ಯಕ್ಷ ಬಿ.ಎಸ್.ಸುದೇಶ್, ಕಾರ್ಯದರ್ಶಿ ಪಿ.ಎನ್.ವಿನೋದ್, ಕಾವೇರಿ ಶಾಲೆಯ ಪ್ರೌಢ ವಿಭಾಗದ ಮುಖ್ಯ ಶಿಕ್ಷಕಿ ಬಿ.ಎಸ್.ಜ್ಯೋತಿ, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಪಿ.ಯು.ಪಾರ್ವತಿ, ಅಮ್ಮತ್ತಿ ವಲಯ ಮಟ್ಟದ ಶಾಲೆಯ ದೈಹಿಕ ಶಿಕ್ಷಕರು ಹಾಗೂ ಕಾವೇರಿ ಶಾಲೆಯ ಸಹಶಿಕ್ಷಕರು ಹಾಜರಿದ್ದರು. ಕಾವೇರಿ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಎಂ.ಎನ್.ನಿಶಾನ್ ಸ್ವಾಗತಿಸಿದರು, ಶಾಲೆಯ ಸಹ ಶಿಕ್ಷಕರಾದ ಟಿ.ಜಿ.ಕಲ್ಪ ಹಾಗೂ ಮಿಸ್ಬಾ ಫಾತಿಮಾ ನಿರೂಪಿಸಿದರು. ಕಾವೇರಿ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ಬಿ.ಎಸ್.ಸುದೇಶ್ ವಂದಿಸಿದರು.










