ಮಡಿಕೇರಿ ಸೆ.2 NEWS DESK : ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಮಡಿಕೇರಿ ರೋಟರಿ, ಕಡಗದಾಳು ಸರ್ಕಾರಿ ಪ್ರೌಢಶಾಲೆಯ ಸಂಯುಕ್ತಾಶ್ರಯದಲ್ಲಿ ಗಿಡನೆಡುವ ಕಾರ್ಯಕ್ರಮ ನಡೆಯಿತು. ಕಡಗದಾಳು ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶುಭ ಗಿಡ ನೆಟ್ಟು ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಆ ನಿಟ್ಟಿನಲ್ಲಿ ಮರ ಗಿಡಗಳನ್ನು ಬೆಳೆಸಿ ಉತ್ತಮ ಪರಿಸರವನ್ನು ಮುಂದಿನ ಪಿಳಿಗೆಗೆ ಕೊಡುಗೆಯಾಗಿ ನೀಡಬೇಕು ಎಂದು ಹೇಳಿದರು. ಬಾಲ್ಯ ವಿವಾಹವು ಸಾಮಾಜಿಕ ಪಿಡುಗಾಗಿದ್ದು, ಹೆಣ್ಣುಮಕ್ಕಳ ಭವಿಷ್ಯವನ್ನು ಕುಗ್ಗಿಸುತ್ತದೆ. ಪುರುಷ ಪ್ರಧಾನ ಸಮಾಜದಲ್ಲಿ ಹೆಣ್ಣನ್ನು ಕಡೆಗಣಿಸಿದಲ್ಲಿ ಸಮಾಜ ಅಧಃಪತನಕ್ಕೆ ಹೋಗುತ್ತದೆ. ಆದ್ದರಿಂದ ಪ್ರತಿಯೊಬ್ಬರನ್ನೂ ಹೆಣ್ಣನ್ನು ಗೌರವಿಸಬೇಕು. ಸಮಾನ ಅವಕಾಶಗಳು ಸಿಗುವಂತಾಗಬೇಕು ಎಂದು ಶುಭ ಹೇಳಿದರು. ಆಧುನಿಕತೆ ಬೆಳೆದಂತೆ ಅವಕಾಶಗಳು ಸಹ ವಿಫಲವಾಗಿವೆ. ಆ ನಿಟ್ಟಿನಲ್ಲಿ ವೃತ್ತಿ ಕೌಶಲ್ಯ ಬೆಳೆಸಿಕೊಂಡು ಲಭ್ಯವಿರುವ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಇದೇ ಸಂದರ್ಭದಲ್ಲಿ ಸಲಹೆ ಮಾಡಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು ಸಾರ್ವಜನಿಕರಿಗೆ ಕಾನೂನಾತ್ಮಕವಾಗಿ ಒಳಿತು ಮಾಡುವ ನಿಟ್ಟಿನಲ್ಲಿ ಸ್ಪಂದಿಸಲಿದೆ ಎಂದು ತಿಳಿಸಿದರು. ಮಡಿಕೇರಿ ರೋಟರಿ ಅಧ್ಯಕ್ಷ ಸುದೈ ನಾಣಯ್ಯ ಮಾತನಾಡಿ, ಹಿಂದೆ ಹಲವು ಕಾಡು ಹಣ್ಣುಗಳನ್ನು ನೋಡುತ್ತಿದ್ದೇವು. ಆದರೆ ಇಂದಿನ ಮಕ್ಕಳಿಗೆ ಕಾಡು ಹಣ್ಣುಗಳ ಬಗ್ಗೆ ಮಾಹಿತಿ ಇರುವುದಿಲ್ಲ. ಆದ್ದರಿಂದ ಕಾಡು ಹಣ್ಣು ಸೇರಿದಂತೆ ಹಣ್ಣಿನ ಗಿಡಗಳ ಬಗ್ಗೆ ಮಾಹಿತಿ ನೀಡುವಂತಾಗಬೇಕು ಎಂದರು. ವಿವಿಧ ರೀತಿಯ ಹಣ್ಣಿನ ಗಿಡಗಳು ಹಾಗೂ ಮರಗಳನ್ನು ಬೆಳೆಯಬೇಕು. ಇದರಿಂದ ಪರಿಸರ ರಕ್ಷಣೆ ಸಾಧ್ಯವಾಗಲಿದೆ ಎಂದರು. ರೋಟರಿ ಸಂಸ್ಥೆಯು ಪರಿಸರ ಸಂರಕ್ಷಣೆಗೆ ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. ಪ್ರಮುಖರಾದ ಕೆ.ಎಸ್.ತಮ್ಮಯ್ಯ ಮಾತನಾಡಿ ಜಲಸಿರಿ, ವನಸಿರಿ, ಆರೋಗ್ಯಸಿರಿ ಹಾಗೂ ವಿದ್ಯಾಸಿರಿ ಕಾರ್ಯಕ್ರಮಗಳು ಹೆಚ್ಚೆಚ್ಚು ನಡೆಯಬೇಕು. ಜೊತೆಗೆ ಯಶಸ್ವಿಯಾಗಿ ಅನುಷ್ಠಾನಗೊಳಿಸುವಂತಾಗಬೇಕು ಎಂದರು. ಕಡಗದಾಳು ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾದಾಯಿನಿ ಭಾರತಿ ಮಾತನಾಡಿ, ಸರ್ಕಾರದ ಎಲ್ಲಾ ಯೋಜನೆಗಳನ್ನು ಉಪಯೋಗಿಸಿಕೊಂಡು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಆ ನಿಟ್ಟಿನಲ್ಲಿ ಹಲವು ಸರ್ಕಾರೇತರ ಸಂಸ್ಥೆಗಳು ಸಹ ಕೈಜೋಡಿಸಿವೆ ಎಂದು ಅವರು ಹೇಳಿದರು. ಪ್ರಮುಖರಾದ ಸುರೇಶ್ ಚಂಗಪ್ಪ ಮಾತನಾಡಿ, ಜಿಲ್ಲೆಯಲ್ಲಿ ಪರಿಸರ ಪ್ರಜ್ಞೆ ಹೆಚ್ಚಿನದ್ದಾಗಿದೆ. ಪರಿಸರ ಜಾಗೃತಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಇದನ್ನು ಮುಂದುವರಿಸಿಕೊಂಡು ಹೋಗುವಂತಾಗಬೇಕು. ಪರಿಸರವನ್ನು ಮತ್ತಷ್ಟು ಸಂರಕ್ಷಿಸುವಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು. ರೋಟರಿ ಕಾರ್ಯದರ್ಶಿ ಪ್ರಿನ್ಸ್ ಪೊನ್ನಣ್ಣ, ಸದಸ್ಯರಾದ ಪಾರ್ವತಿ, ಮಲ್ಲಿಕಾ ಇತರರು ಇದ್ದರು. ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಬಿ.ಎಸ್.ಜಯಪ್ಪ ಸ್ವಾಗತಿಸಿದರು, ಆರತಿ ನಿರೂಪಿಸಿದರು. ಹರ್ಷಿತಾ ಪ್ರಾರ್ಥಿಸಿದರು. ವಿಮಲ ವಂದಿಸಿದರು.