ನಾಪೋಕ್ಲು ಸೆ.2 NEWS DESK : ಚೆಯ್ಯಂಡಾಣೆಯ ನರಿಯಂದಡ ಕೇಂದ್ರ ಪ್ರೌಢಶಾಲೆಯಲ್ಲಿ ನಾಪೋಕ್ಲು ವಲಯ ಮಟ್ಟದ ಪ್ರೌಢಶಾಲಾ ವಿಭಾಗ ಹಾಗೂ ಪ್ರಾಥಮಿಕ ಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಶ್ರೀ ರಾಮ ಟ್ರಸ್ಟ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ವಿವಿಧ ಹಲವು ಬಹುಮಾನವನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಾಲಕರ ವಿಭಾಗದ ಹಾಕಿ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ್ದು, ಬಾಲಕ ಮತ್ತು ಬಾಲಕಿಯರ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಹಾಗೂ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಗೆಲುವು ಸಾಧಿಸಿದ್ದಾರೆ. ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದು, ಬಾಲಕರ ವಿಭಾಗದ ವಾಲಿಬಾಲ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಚೆಸ್ ನಲ್ಲಿ ಮಿಶ ಬಾ ಮತ್ತು ಸಿಂಚನ ಪೂವಯ್ಯ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಅಥ್ಲೆಟಿಕ್ಸ್ ನಲ್ಲಿ ಕಿರೀತ್ ಸೋಮಯ್ಯ1500 ಮೀಟರ್ ದ್ವಿತೀಯ ಸ್ಥಾನ, ಜಾವೆಲಿನ್ತ್ರೋ ಪ್ರಥಮ ಸ್ಥಾನ, ತ್ರಿಪಲ್ ಜಂಪ್ ದ್ವಿತೀಯ ಸ್ಥಾನ ಪಡೆದಿದ್ದರೆ ಕೇತನ್ ಕರುಂಬಯ್ಯ 3000 ಮೀ.ಓಟದ ಸ್ಪರ್ಧೆಯಲ್ಲಿ ಪ್ರಥಮ, 100 ಮೀಟರ್ ದ್ವಿತೀಯ, ಹೈಜಂಪ್ ದ್ವಿತೀಯ ಸ್ಥಾನ ಪಡೆದಿದ್ದಾರೆ. ಕೆ.ಎ.ಆಕಾಶ್ 100 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ, 200 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ, ಲಾಂಗ್ ಜಂಪ್ ನಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಕೃಪಾ ಡಿ.ಪಿ 200 ಮೀಟರ್ ಪ್ರಥಮ, 400 ಮೀಟರ್ ದ್ವಿತೀಯ ಶಾಟ್ ಪುಟ್‍ನಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಬಿ.ಎಮ್.ಗಾನವಿ 100 ಮೀಟರ್ ಪ್ರಥಮ, ಲಾಂಗ್ ಜಂಪ್ ಪ್ರಥಮ, ಟ್ರಿಪಲ್ ಜಂಪ್ ಪ್ರಥಮ ಸ್ಥಾನ ಗಳಿಸಿದ್ದಾಳೆ. ಶ್ರೇಯ ಪೂವಮ್ಮ ಹೈಜಂಪ್ ನಲ್ಲಿ ಪ್ರಥಮ ಸ್ಥಾನವನ್ನು ಪಿ.ಎಂ.ದೇವಯ್ಯ ತೃತೀಯ ಸ್ಥಾನವನ್ನು ಪಡೆದಿದ್ದಾರೆ. ಬಾಲಕರ 4.100 ಮೀ ದ್ವಿತೀಯ ಸ್ಥಾನ ಬಾಲಕಿಯರ 4.100 ಮೀಟರ್ ರಿಲೇ ಪ್ರಥಮ ಸ್ಥಾನ ಗಳಿಸಿದ್ದಾರೆ. ಪ್ರಥಮ ಸ್ಥಾನ ಗಳಿಸಿದ ತಂಡಗಳು ಹಾಗೂ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಾಂಶುಪಾಲರಾದ ಶಾರದಾ ಬಿ.ಎಂ ,ದೈಹಿಕ ಶಿಕ್ಷಣ ಶಿಕ್ಷಕಿ ಕೆ.ಕೆ ಸರಿತ ತರಬೇತಿ ನೀಡಿದ್ದರು.
ವರದಿ : ದುಗ್ಗಳ ಸದಾನಂದ.