ವಿರಾಜಪೇಟೆ ಸೆ.2 NEWS DESK : ಪೊನ್ನಂಪೇಟೆ ಗ್ರಾ.ಪಂ ಯಲ್ಲಿ ಕಳೆದ ಏಳು ವರ್ಷಗಳಿಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ)ಯಾಗಿ ಕಾರ್ಯನಿರ್ವಹಿಸಿ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿದ ಕಾರಣ ವರ್ಗಾವಣೆಗೊಂಡ ಪುಟ್ಟರಾಜು ಹಾಗೂ ಕಳೆದ ಹತ್ತು ವರ್ಷಗಳಿಂದ ಪೊನ್ನಂಪೇಟೆ ಗ್ರಾ.ಪಂ ಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಕಾರ್ಯನಿರ್ವಹಿಸಿ ಇದೀಗ ವರ್ಗಾವಣೆಗೊಂಡಿರುವ ಸುರೇಶ್ ಅವರಿಗೆ ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ವತಿಯಿಂದ ಬೀಳ್ಕೊಡುಗೆ ನೀಡಲಾಯಿತು. ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಣ್ಣಿರ ಹರೀಶ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಿಡಿಒ ಪುಟ್ಟರಾಜು ದಂಪತಿಯನ್ನು ಮತ್ತು ಸುರೇಶ್ ಅವರನ್ನು ಸನ್ಮಾನಿಸಿ ಬೀಳ್ಕೊಡುಗೆ ನೀಡಲಾಯಿತು. ಈ ಸಂದರ್ಭ ಮಾತನಾಡಿದ ಅಣ್ಣಿರ ಹರೀಶ್ ಕಳೆದ 7 ವರ್ಷಗಳಿಂದ ಗ್ರಾಮ ಪಂಚಾಯಿತಿಯಲ್ಲಿ ಜನಸ್ನೇಹಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ಪುಟ್ಟರಾಜು ಅವರು ಬಡವರ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದ್ದರು. ವಿವಿಧ ಕೆಲಸ ಕಾರ್ಯಗಳಿಗಾಗಿ ಕಚೇರಿಗೆ ಬರುತ್ತಿದ್ದ ಅಸಹಾಯಕರಿಗೆ ಮೊದಲ ಆದ್ಯತೆ ನೀಡುತ್ತಿದ್ದ ಇವರು, ಪೊನ್ನಂಪೇಟೆ ಗ್ರಾ.ಪಂ ಯನ್ನು ಇಡೀ ಜಿಲ್ಲೆಯಲ್ಲಿ ಮಾದರಿ ಗ್ರಾ.ಪಂ ಯಾಗಿ ರೂಪಿಸುವಲ್ಲಿ ನಿರ್ವಹಿಸಿದ ಪಾತ್ರ ಸ್ಮರಣೀಯವಾದದ್ದು. ಜೊತೆಗೆ ಸುರೇಶ್ ಅವರ ಜನೋಪಯೋಗಿ ಸೇವೆಯನ್ನು ಮರೆಯಲು ಸಾಧ್ಯವಿಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಆಲೀರ ಎಂ.ರಶೀದ್ ಮಾತನಾಡಿ, ಪಂಚಾಯಿತಿಯ ಎಲ್ಲಾ ಸದಸ್ಯರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದ ಪುಟ್ಟರಾಜು ಅವರು ಎಲ್ಲರೊಂದಿಗೆ ಸಮನ್ವಯ ಸಾಧಿಸಿ ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಗೊಳಿಸುತ್ತಿದ್ದ ರೀತಿ ಎಲ್ಲಾ ಅಧಿಕಾರಿಗಳಿಗೆ ಮಾದರಿಯಾಗಿದೆ. ವಿವಿಧ ಯೋಜನೆಗಳಡಿ ಸರಕಾರದಿಂದ ಬರುತ್ತಿದ್ದ ಅನುದಾನಗಳ ಹಂಚಿಕೆಯಲ್ಲೂ ಯಾರಿಗೂ ಅನ್ಯಾಯವಾಗದಂತೆ ನಡೆದುಕೊಳ್ಳುತ್ತಿದ್ದ ಪುಟ್ಟರಾಜು ಅವರ ಕಾರ್ಯವೈಖರಿ ಶ್ಲಾಘನೀಯವಾದದ್ದು. ಪೊನ್ನಂಪೇಟೆ ಪಟ್ಟಣದ ಅಭಿವೃದ್ಧಿಗಾಗಿ ಇವರು ನೀಡಿದ ಸೇವೆಯನ್ನು ಎಲ್ಲರೂ ಸ್ಮರಿಸಿಕೊಳ್ಳಬೇಕಿದೆ ಎಂದರಲ್ಲದೆ, ಗ್ರಾ.ಪಂ ಯಲ್ಲಿ ಎಸ್.ಡಿ.ಎ. ಆಗಿದ್ದ ಸುರೇಶ್ ಅವರ ಕರ್ತವ್ಯ ನಿಷ್ಠೆ ಗಮನಾರ್ಹವಾದುದ್ದು ಎಂದು ಗುಣಗಾನ ಮಾಡಿದರು. ಕಾರ್ಯಕ್ರಮದಲ್ಲಿ ಹಿಂದಿನ ಪೊನ್ನಂಪೇಟೆ ಗ್ರಾ.ಪಂ ಮಾಜಿ ಅಧ್ಯಕ್ಷೆ ಸುಮಿತಾ, ಗಿರಿಜಾ, ಮಾಜಿ ಉಪಾಧ್ಯಕ್ಷೆ ದಶಮಿ ಸೇರಿದಂತೆ ಹಾಲಿ ಪಟ್ಟಣ ಪಂಚಾಯಿತಿಯ ಎಲ್ಲಾ ಸದಸ್ಯರು ಪಾಲ್ಗೊಂಡಿದ್ದರು.
Breaking News
- *ವಿರಾಜಪೇಟೆಯಲ್ಲಿ ಎಂಡಿಎಂಎ ಮತ್ತು ಗಾಂಜಾ ಸಾಗಾಟ : ಐವರ ಬಂಧನ*
- *ಗುಡ್ಡೆಹೊಸೂರು : ರಾಷ್ಟ್ರೀಕೃತ ಬ್ಯಾಂಕ್ ಮಾದರಿಯ ಡಿಜಿಟಲೀಕರಣ ವ್ಯವಸ್ಥೆ ಸಹಕಾರಿ ಕ್ಷೇತ್ರದ ಬ್ಯಾಂಕಿಂಗ್ ನಲ್ಲೂ ಅತ್ಯಗತ್ಯ : ಎಂ.ಎಂ.ಶ್ಯಾಮಲ*
- *ರಾಷ್ಟ್ರೀಯ ಸಬ್ ಜೂನಿಯರ್ ಮಹಿಳಾ ಹಾಕಿ ತಂಡದ ಸೆಂಟರ್ ಫಾರ್ವರ್ಡ್ ಆಗಿ ಮಡಿಕೇರಿಯ ಅಕ್ಷರ*
- *ಸೋಮವಾರಪೇಟೆ : ಅಪ್ಪು ಅಭಿಮಾನಿಗಳ ಬಳಗದಿಂದ ಸಂಭ್ರಮದ ಮಕ್ಕಳ ದಿನಾಚರಣೆ : ಹಲವು ಸಾಧಕರಿಗೆ ಸನ್ಮಾನ*
- *ನಿಧನ ಸುದ್ದಿ*
- *ಮಡಿಕೇರಿ ಅಂಗನವಾಡಿಯಲ್ಲಿ ಬಾಲಮೇಳದಲ್ಲಿ ಮಿಂಚಿದ ಪುಟಾಣಿಗಳು*
- *ಮಡಿಕೇರಿಯ ಎಸ್ಎಸ್ ಆಸ್ಪತ್ರೆಯಿಂದ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ : ಕಲಾಪ್ರತಿಭೆಗೆ ಸಾಕ್ಷಿಯಾದ ವಿದ್ಯಾರ್ಥಿಗಳು*
- *ಮಡಿಕೇರಿಯ ಹಿಂದೂಸ್ತಾನಿ ಶಾಲೆ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ : ಮಕ್ಕಳಲ್ಲಿ ದೇಶದ ಭವ್ಯ ಭವಿಷ್ಯ ಕಂಡ ನೆಹರು*
- *ಕೊಡಗು ಜಿಲ್ಲೆಯಲ್ಲಿ 13 ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೆ ಕ್ರಮ : ಸಚಿವ ಕೆ.ಜೆ.ಜಾರ್ಜ್*
- *ಹುದ್ದೆಗಳ ಭರ್ತಿಗೆ ಕ್ರಮ : ಸಚಿವ ಕೆ.ಜೆ.ಜಾರ್ಜ್ ಭರವಸೆ*