
ಮಡಿಕೇರಿ ಸೆ.2 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೊಡಗು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಮಡಿಕೇರಿಯ ಜನರಲ್ ತಿಮ್ಮಯ್ಯ ಶಾಲೆಯ ವಿದ್ಯಾರ್ಥಿ ರಾಝಿನ್ ರುಶ್ಧಿ ಸಿಂಗಲ್ಸ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಟ್ರೋಫಿಯನ್ನು ಗೆದ್ದುಕೊಂಡಿದ್ದಾನೆ. ಮಡಿಕೇರಿಯ ರಿಯಾಝ್ ಬುಶ್ರಾ ದಂಪತಿಗಳ ಪುತ್ರನಾದ ರಾಝಿನ್ ರುಶ್ಧಿ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಹಲವು ಪ್ರಶಸ್ತಿಗಳನ್ನು ಗೆದ್ದುಕೊಂಡಿದ್ದಾನೆ.








