ಮಡಿಕೇರಿ NEWS DESK ಸೆ.2 : ಕೊಡಗು ಜಿಲ್ಲೆಯ ವಿವಿಧೆಡೆ ಕಳೆದ ಒಂದು ವಾರದಿಂದ ಉತ್ತಮ ಮಳೆಯಾಗುತ್ತಿದೆ. ಮಡಿಕೇರಿ ತಾಲ್ಲೂಕಿನಲ್ಲಿ ಅಧಿಕ ಮಳೆಯಾಗುತ್ತಿದ್ದು, ಜನಜೀವನದ ಮೇಲೆ ಪರಿಣಾಮ ಬೀರಿದೆ. ಕೊಡಗು ಜಿಲ್ಲೆಯಲ್ಲಿ ಇಲ್ಲಿಯವರೆಗೆ ಕಳೆದ ವರ್ಷಕ್ಕಿಂತ ಎರಡು ಪಟ್ಟು ಅಧಿಕ ಮಳೆಯಾಗಿದೆ. ಪ್ರಸ್ತುತ ವರ್ಷ ಜನವರಿಯಿಂದ ಇಲ್ಲಿಯವರೆಗೆ 105 ಇಂಚು ಮಳೆಯಾಗಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 52 ಇಂಚು ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಈ ವರ್ಷ 150 ಇಂಚಿಗೂ ಅಧಿಕ ಮಳೆಯಾಗಿದೆ. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ ಎರಡು ಇಂಚಿಗೂ ಅಧಿಕವಾಗಿದೆ. ಕಳೆದ ವರ್ಷ ಇದೇ ದಿನ 1.10 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 3762.28 ಮಿ.ಮೀ (150 ಇಂಚಿಗೂ ಅಧಿಕ), ಕಳೆದ ವರ್ಷ ಇದೇ ಅವಧಿಯಲ್ಲಿ 2185.32 ಮಿ.ಮೀ. (88ಇಂಚು) ಮಳೆಯಾಗಿತ್ತು. ದಕ್ಷಿಣ ಕೊಡಗಿನಲ್ಲಿ ಕೊಂಚ ಮಳೆ ಇಳಿಮುಖವಾಗಿದ್ದು, ಉಳಿದೆಡೆ ಸುರಿದ ಧಾರಾಕಾರ ಮಳೆಯಿಂದ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹಾರಂಗಿ ಜಲಾಶಯದಿಂದ ಇಂದು ಬೆಳಗ್ಗೆ 12,500 ಕ್ಯುಸೆಕ್ಸ್ ಮತ್ತು ಸಂಜೆ 10 ಸಾವಿರ ಕ್ಯುಸೆಕ್ಸ್ ನೀರನ್ನು ನದಿಗೆ ಹರಿಯಬಿಡಲಾಗಿದೆ.
ಕೊಡಗು ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 25.37 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.98 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2608.20 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1279.16 ಮಿ.ಮೀ ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 13 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 2 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2367.90 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 980.76 ಮಿ.ಮೀ. ಮಳೆಯಾಗಿತ್ತು. ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 8.38 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2425.76 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1035.09 ಮಿ.ಮೀ. ಮಳೆಯಾಗಿತ್ತು. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 45.55 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2922.16 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1389.44 ಮಿ.ಮೀ. ಮಳೆಯಾಗಿತ್ತು. ಕುಶಾಲನಗರ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 14.20 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 1.80 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1562.90 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 805.20 ಮಿ.ಮೀ. ಮಳೆಯಾಗಿತ್ತು.
::: ಹಾರಂಗಿ ಜಲಾಶಯದ ನೀರಿನ ಮಟ್ಟ :::
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2858.72 ಅಡಿಗಳು. ಕಳೆದ ವರ್ಷ ಇದೇ ದಿನ 2855.63 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 3.40 ಮಿ.ಮೀ., ಇಂದಿನ ನೀರಿನ ಒಳಹರಿವು 2362 ಕ್ಯುಸೆಕ್, ಕಳೆದ ವರ್ಷ ಇದೇ ದಿನ 561 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 1316 ಕ್ಯುಸೆಕ್. ನಾಲೆಗೆ 700 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 1100 ಕ್ಯುಸೆಕ್. ನಾಲೆಗೆ 600 ಕ್ಯುಸೆಕ್.