ಮಡಿಕೇರಿ ಸೆ.3 NEWS DESK : ಕತ್ತಲೆಕಾಡು, ಜೇನುಕೊಲ್ಲಿ ಗ್ರಾಮದ ಶ್ರೀ ವಿನಾಯಕ ಸೇವಾ ಟ್ರಸ್ಟ್ ನ ಲೋಗೋ ಬಿಡುಗಡೆಗೊಂಡಿತು. ಟ್ರಸ್ಟ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಡಿಕೇರಿಯ ಶ್ರೀ ರಾಮಾಂಜನೇಯ ಭಜನಾ ತಂಡದ ಮುಖ್ಯಸ್ಥ ಕುಮಾರ್ ಲಾಂಛನ ಬಿಡುಗಡೆ ಮಾಡಿದರು.
ಟ್ರಸ್ಟ್ ಪ್ರಮುಖರು ಮಾತನಾಡಿ, 18ನೇ ವರ್ಷದ ಗೌರಿ ಗಣೇಶೋತ್ಸವವನ್ನು ಮೂರು ದಿನ ಕಾಲ ಆಚರಿಸಲಾಗುತ್ತದೆ. ಸೆ.7ರಂದು ಭಾರತ್ ಮತಾ ಪೂಜೆ, ಧ್ವಜಾರೋಹಣದೊಂದಿಗೆ ಗಣೇಶ ಪ್ರತಿಷ್ಠಾಪನೆ, 8 ರಂದು ಬೆಳಗ್ಗೆ 10 ಗಂಟೆಗೆ ಸತ್ಯನಾರಾಯಣ ಪೂಜೆ, 9ಕ್ಕೆ ಮಧ್ಯಾಹ್ನ ಮಹಾಪೂಜೆ ಬಳಿಕ ಮೆರವಣಿಗೆ ನಡೆಸಿ ವಿಸರ್ಜನೆ ಮಾಡಲಾಗುವುದೆಂದು ತಿಳಿಸಿದರು. ಟ್ರಸ್ಟ್ ಅಧ್ಯಕ್ಷ ಹೊನ್ನಪ್ಪ ಆಚಾರ್ಯ, ಉಪಾಧ್ಯಕ್ಷ ಚಂದ್ರಶೇಖರ ರೈ, ಕಾರ್ಯದರ್ಶಿ ಬ್ರಿಜೇಶ್ ಖಜಾಂಚಿ ನವೀನ್, ಗಣೇಶೋತ್ಸವ ಸಮಿತಿ ಅಧ್ಯಕ್ಷ ಅಶೋಕ, ಸಹ ಖಜಾಂಚಿ ಜಯಪ್ರಕಾಶ್, ಮಹಿಳಾ ಘಟಕದ ಪುಷ್ಪಾವತಿ, ಸುಶೀಲ, ವಿದ್ಯಾರ್ಥಿ ಘಟಕದ ಸದಸ್ಯರು, ಸಾರ್ವಜನಿಕರು ಹಾಜರಿದ್ದರು.