ಮಡಿಕೇರಿ ಸೆ.4 NEWS DESK : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಡಿಕೇರಿ ಶಿಶು ಅಭಿವೃದ್ಧಿ ಯೋಜನೆ ವತಿಯಿಂದ ಪೋಷಣ್ ಮಾಸಾಚರಣೆ ಅಂಗವಾಗಿ ಮೂರ್ನಾಡು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾಗೃತಿ ಶಿಬಿರ ನಡೆಯಿತು. ಕಾರ್ಯಕ್ರಮದಲ್ಲಿ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಮಾತನಾಡಿ, ಸೆಪ್ಟೆಂಬರ್ ಮಾಹೆ ಪೂರ್ಣ ಗ್ರಾ.ಪಂ ಮಟ್ಟಕ್ಕೆ ಸಂಬಂಧಪಟ್ಟಂತ ಎಲ್ಲಾ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆಯ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ನಡೆಸುವ ಬಗ್ಗೆ, ಪೌಷ್ಟಿಕ ಆಹಾರ ಸ್ಪರ್ಧೆ ಮಾಡುವ ಬಗ್ಗೆ ಸಲಹೆ ಮಾರ್ಗದರ್ಶ ನೀಡಿದರು. ಗ್ರಾ.ಪಂ ಅಧ್ಯಕ್ಷ ಕುಶನ್ ರೈ, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಚಂದ್ರಮೌಳಿ ಮಾತನಾಡಿ, ಎಲ್ಲಾ ಕಾರ್ಯಕ್ರಮಗಳಿಗೆ ಗ್ರಾಮ ಪಂಚಾಯಿತಿ ವತಿಯಿಂದ ಎಲ್ಲಾ ರೀತಿಯ ಸಹಕಾರವನ್ನು ನೀಡುವುದಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ಬಾಡಗ ಅಂಗನವಾಡಿ ಕಾರ್ಯಕರ್ತೆ ಜಯಂತಿ, ಗಾಂಧಿನಗರ ಅಂಗನವಾಡಿ ಕಾರ್ಯಕರ್ತೆ ಚೈತ್ರ ಜ್ಯೋತಿ, ಶಾಸ್ತ್ರಿ ನಗರ ಅಂಗನವಾಡಿ ಕಾರ್ಯಕರ್ತೆ ಪ್ರಮೀಳಾ, ಗೀತಾ, ಕಿಗ್ಗಾಲು ಅಂಗನವಾಡಿ ಕಾರ್ಯಕರ್ತೆ ಗೌರಿ, ವೆಂಕಟೇಶ್ವರ ಕಾಲೋನಿಯ ಕಾರ್ಯಕರ್ತೆ ಕುಸುಮ, ಐಕೋಳ ಅಂಗನವಾಡಿ ಕಾರ್ಯಕರ್ತೆ ಸಮೀರ ಹಾಗೂ ಸಮುದಾಯದ ಮುಖಂಡರು ಹಾಜರಿದ್ದರು.