ಸೋಮವಾರಪೇಟೆ ಸೆ.4 NEWS DESK : ರೈತ ಹೋರಾಟ ಸಮಿತಿ ವತಿಯಿಂದ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು. ಸ್ಥಳೀಯ ಶಾಸಕರ ನೇತೃತ್ವದಲ್ಲಿ ಮುಖ್ಯಮಂತ್ರಿಗಳ ನಿವಾಸದಲ್ಲಿ ಭೇಟಿ ಮಾಡಿದ ಸಮಿತಿ ಸಿ ಮತ್ತು ಡಿ ತೆರವು ಗೊಳಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ನಂತರ ಅರಣ್ಯ ಭವನದಲ್ಲಿ ಅರಣ್ಯ ಸಚಿವರಿಗೆ ಮನವಿ ಸಲ್ಲಿಸಿ ಕೊಡಗು ಜಿಲ್ಲೆಯಲ್ಲಿ ಪೈಸಾರಿ ಜಮೀನುಗಳನ್ನು ಸಿ & ಡಿ ಜಮೀನುಗಳೆಂದು ಮಾಡಿ ಅರಣ್ಯ ಇಲಾಖೆಯ ಹೆಸರಿಗೆ ವರ್ಗಾಯಿಸಿದ್ದು, ಮೀಸಲು ಅರಣ್ಯ ಎಂದು ಉದ್ಯೋಷಣೆ ಮಾಡಲು ಆದೇಶ ಹೊರಡಿಸಿರುವುದನ್ನು ರದ್ದುಪಡಿಸಿ ಸಾಗುವಳಿ ಮಾಡುತ್ತಿರುವ ರೈತರಿಗೆ ಸಾಗುವಳಿ ಚೀಟಿ ನೀಡಬೇಕು, ಸಾಗುವಳಿಗೆ ಯೋಗ್ಯವಾದ ಎಲ್ಲಾ ಜಮೀನುಗಳಿಗೆ ನಮೂನೆ 50,53 ಹಾಗೂ 57ರ ಅರ್ಜಿಯನ್ನು ಮಾನ್ಯ ಮಾಡಿ ಮಂಜೂರಾತಿ ಮಾಡಿ ಹಕ್ಕುಪತ್ರ ನೀಡಬೇಕು, ಕಂದಾಯ ಇಲಾಖೆ ಹಾಗೂ ಅರಣ್ಯ ಇಲಾಖೆ ಜಂಟಿ ಸರ್ವೇ ನಡೆಸಿ ರೈತರಿಗೆ ಅನುವು ಮಾಡಿಕೊಡಬೇಕು ಎಂದು ಸಮಿತಿ ಸದಸ್ಯರು ಮನವಿ ಮಾಡಿದರು. ಈ ಸಂದರ್ಭ ರೈತ ಹೋರಾಟ ಸಮಿತಿಯ ಅಧ್ಯಕ್ಷ ಕೆ.ಬಿ.ಸುರೇಶ್, ಸಂಚಾಲಕರಾದ ಕೆ.ಎಂ.ಲೋಕೇಶ್,ಬಿ.ಜೆ. ದೀಪಕ್, ನಂದಕುಮಾರ್, ಬಗ್ಗನ ಅನಿಲ್, ಮಿಥುನ್ ಹರಗ, ನಿವೃತ್ತ ತಹಸೀಲ್ದಾರ್ ಜಯರಾಮ್, ರೈತ ಸಂಘದ ಉಪಾಧ್ಯಕ್ಷ ಹೂವಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ. ಸತೀಶ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ,ವಕೀಲರಾದ ಚಂದ್ರಮೌಳಿ, ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ ಗಿರೀಶ್ ಮಲ್ಲಪ್ಪ, ಅರುಣ್ ಕಾಳಪ್ಪ, ರಮೇಶ್ ಹಿರಿಕರ, ಚೇತನ್ ಚೌಡ್ಲು,ಧರ್ಮಪ್ಪ ಹರಗ ,ದಿವಾಕರ್ ಕೂತಿ , ಚೇತನ್, ಮೊಗಪ್ಪ ಸೇರಿದಂತೆ ಹಲವರಿದ್ದರು.