ಮಡಿಕೇರಿ ಸೆ.5 NEWS DESK : ಪ್ರಸಕ್ತ(2024-25) ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ssp.postmatric.karnataka.gov.in ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ವೆಬ್ಸೈಟ್ನಲ್ಲಿ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಯ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ(ಆದಾಯ ಮಿತಿ 2.50 ಲಕ್ಷ), ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಆಧಾರ್ ಕಾರ್ಡ್ ಪ್ರತಿ(ಕಡ್ಡಾಯವಾಗಿ ಆಧಾರ್ ಸೀಡಿಂಗ್ ಮತ್ತು ಎನ್ಪಿಸಿಐ ಮ್ಯಾಪಿಂಗ್ ಮಾಡಿಸಿರಬೇಕು), ಚಾಲ್ತಿಯಲ್ಲಿರುವ ಆಧಾರ್ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ(ಕಡ್ಡಾಯ), ಹಿಂದಿನ ವರ್ಷದ ಅಂಕಪಟ್ಟಿ ಪ್ರತಿ, ಇತ್ತೀಚಿನ ಭಾವಚಿತ್ರ, ಅಧ್ಯಯನ ಪ್ರಮಾಣ ಪತ್ರ (ಮೆಟ್ರಿಕ್ ನಂತರದ ಕೋರ್ಸ್ಗಳಿಗೆ), ಶುಲ್ಕ ರಶೀದಿ(ಮೆಟ್ರಿಕ್ ನಂತರದ ಕೋರ್ಸುಗಳಿಗೆ), ತಂದೆ, ತಾಯಿ, ಪೋಷಕರ ಆಧಾರ್ ಪ್ರತಿ, ಆದಾಯ ಮತಿತಿ 2.50 ಲಕ್ಷಕಿಂತ ಒಳಗಿರುವ ಸಿಇಟಿ ಮೂಲ ಎಂಬಿಬಿಎಸ್, ಬಿಡಿಎಸ್, ಬಿ.ಇ, ಬಿಟೆಕ್, ಬಿಆರ್ಕ್ ಕೋರ್ಸುಗಳಿಗೆ ಆಯ್ಕೆಯಾಗುವ ವಿದ್ಯಾರ್ಥಿಗಳು ಮಾತ್ರ ಸರ್ಕಾರಿ, ಅನುದಾನಿತ, ಅನುದಾನ ರಹಿತ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾನಿಲಯದ ಕಾಲೇಜು, ಸಂಸ್ಥೆಗಳಲ್ಲಿ ಪ್ರವೇಶ ಪಡೆದಿದ್ದಲ್ಲಿ, ಅಂತಹ ವಿದ್ಯಾರ್ಥಿಗಳು ಶೇ.100 ರಷ್ಟು ಆಯಾಯ ಸಂಸ್ಥೆಗಳಿಗೆ ನಿಗಧಿ ಪಡಿಸಿದ ಶುಲ್ಕ ಪಡೆಯಲು ಅರ್ಹರಿದ್ದಾರೆ. ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ssp.postmatric.karnataka.gov.in ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 080-44554455 ಮತ್ತು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ ಅವರ ಕಚೇರಿ ದೂ.ಸಂ. 9480843156/ 08276-281115 ನ್ನು ಸಂಪರ್ಕಿಸಬಹುದು ಎಂದು ಸೋಮವಾರಪೇಟೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.