ಮಡಿಕೇರಿ ಸೆ.5 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಇವರ ಸಂಯುಕ್ತಾಶ್ರಯದಲ್ಲಿ ನಗರದ ಕೊಡಗು ಗೌಡ ಸಮಾಜದಲ್ಲಿ ಶಿಕ್ಷಕರ ದಿನಾಚರಣೆ ನಡೆಯಿತು. ಕಾರ್ಯಕ್ರಮವನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಅತ್ಯುತ್ತಮ ಶಿಕ್ಷಕರನ್ನು ಸನ್ಮಾನಿಸಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭ ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಮೈಸೂರು ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿವೃತ್ತ ಪ್ರಾಧ್ಯಾಪಕರಾದ ಪ್ರೊ.ನೀಲಗಿರಿ ಎಂ.ತಳವಾರ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಐಶ್ವರ್ಯ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಂದರ್ರಾಜ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಪಿ.ಕೆ.ಶ್ರೀನಿವಾಸ್, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಹ ಕಾರ್ಯದರ್ಶಿ ಎಚ್.ಎಸ್.ಚೇತನ್ ಇತರರು ಪಾಲ್ಗೊಂಡಿದ್ದರು.
ಪ್ರಶಸ್ತಿ ಪ್ರದಾನ :: ಕಿರಿಯ ಪ್ರಾಥಮಿಕ ಶಾಲಾ ವಿಭಾಗದ ಶಿಕ್ಷಕರ ಹೆಸರು: ಸೋಮವಾರಪೇಟೆ ತಾಲ್ಲುಕು ಕುಶಾಲನಗರ ಜೇನುಕಲ್ಲು ಬೆಟ್ಟ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎಂ.ಎನ್.ರಾಮೇಗೌಡ, ವಿರಾಜಪೇಟೆ ತಾಲ್ಲೂಕಿನ ಪೊನ್ನಂಪೇಟೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎ.ಎಸ್.ವಾಸುವರ್ಮ, ಮಡಿಕೇರಿ ತಾಲ್ಲೂಕಿನ ಚೇರಂಡೇಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕೆ.ಜಿ.ಚೈತ್ರ.
ಹಿರಿಯ ಪ್ರಾಥಮಿಕ ಶಾಲಾ ವಿಭಾಗ: ಸೋಮವಾರಪೇಟೆ ತಾಲ್ಲೂಕಿನ ಗೋಣಿಮರೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೆಚ್.ಆರ್.ಸುನೀತ, ವಿರಾಜಪೇಟೆ ತಾಲ್ಲೂಕಿನ ಕೆದಮುಳ್ಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೆ.ಎಸ್.ಜಾನ್ಸಿ, ಮಡಿಕೇರಿ ಕೆ.ಪಿ.ಬಾಣೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪಿ.ಕೆ.ಗಂಗಮ್ಮ.
ಪ್ರೌಢಶಾಲಾ ವಿಭಾಗ: ಸೋಮವಾರಪೇಟೆ ತಾಲ್ಲೂಕಿನ ಗೌಡಳ್ಳಿಯ ಗೌಡಳ್ಳಿ ಪ್ರೌಢಶಾಲೆಯ ಎಸ್.ಎನ್.ಪೂವಯ್ಯ, ವಿರಾಜಪೇಟೆ ತಾಲ್ಲೂಕಿನ ಚೆನ್ನಯ್ಯನಕೋಟೆ ಸರ್ಕಾರಿ ಪ್ರೌಢಶಾಳೆಯ ಕೆ.ಡಿ.ಕವಿತ, ಮಡಿಕೇರಿ ತಾಲ್ಲೂಕಿನ ಚೇರಂಬಾಣೆ ಅರುಣ ಅನುದಾನಿತ ಪ್ರೌಢಶಾಲೆಯ ಸಿ.ಆರ್.ಲೋಕೇಶ್, ಮಡಿಕೇರಿ ತಾಲ್ಲೂಕಿನ ಭಾಗಮಂಡಲ ಜ್ಞಾನೋದಯ ಶಾಲೆಯ ಶ್ವೇತನ್ ಚಂಗಪ್ಪ, ವಿರಾಜಪೇಟೆ ತಾಲ್ಲೂಕಿನ ಶ್ರೀಮಂಗಲ ಜೆ.ಸಿ.ಶಾಲೆಯ ಎನ್.ಬಿ.ಸತೀಶ್, ಸೋಮವಾರಪೇಟೆ ತಾಲ್ಲೂಕಿನ ಕೊಡ್ಲಿಪೇಟೆ ಶ್ರೀ ಸದಾಶಿವ ಸ್ವಾಮೀಜಿ ಶಾಲೆಯ ಕೆ.ಎಸ್.ತನುಜ.
ಅನುದಾನರಹಿತ ಶಾಲೆಗಳ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತರು: ಮಡಿಕೇರಿ ತಾಲ್ಲೂಕಿನ ಶ್ರೀರಾಜೇಶ್ವರಿ ವಿದ್ಯಾಲಯದ ಬಿ.ಎ.ಪಾರ್ವತಿ, ವಿರಾಜಪೇಟೆ ತಾಲ್ಲೂಕಿನ ಪ್ರಗತಿ ಶಾಲೆಯ ಎ.ಎನ್.ರೇಖಾ, ಸೋಮವಾರಪೇಟೆ ತಾಲ್ಲೂಕಿನ ಚೌಡ್ಲು ಸಾಂದಿಪನ ಶಾಲೆಯ ವಸಂತ ಕುಮಾರಿ ಅವರನ್ನು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.