ನಾಪೋಕ್ಲು ಸೆ.5 NEWS DESK : ಮೈಸೂರು ದೇವಧನ್ ಫೌಂಡೇಶನ್ ಹಾಗೂ ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಇಂಟರಾಕ್ಟ್ ಸಂಘ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ವಿಚಾರ ಸಂಕಿರಣ ನಡೆಯಿತು. ಫೌಂಡೇಶನ್ ನ ಪ್ರಮುಖರಾದ ಬಲ್ಲಚಂಡ ಧನ್ಯ ಪೊನ್ನಮ್ಮ, ಕೋಟೆರ ದೇವಯ್ಯ ಹಾಗೂ ತಂಡದಿಂದ ವಿದ್ಯಾರ್ಥಿಗಳಿಗೆ ಏಕಾಗ್ರತೆ, ಖಿನ್ನತೆ ಹಾಗೂ ಆಕ್ರಮಣಕಾರಿ ವರ್ತನೆಯ ಬಗ್ಗೆ ಮಾಹಿತಿ ನೀಡಿ ವಿದ್ಯಾರ್ಥಿಗಳು ಯಾವುದೇ ಸಂದರ್ಭದಲ್ಲಿ ಖಿನ್ನತೆಗೆ ಒಳಗಾಗಬಾರದು. ಉತ್ತಮ ಗುಣ ನಡತೆಗಳನ್ನು ರೂಪಿಸಿಕೊಳ್ಳಬೇಕು. ಮುಂದಿನ ಭವಿಷ್ಯವನ್ನು ರೂಪಿಸಿಕೊಳ್ಳಲು ಈಗಿನಿಂದಲೇ ಯೋಜನೆ ಹಾಕಿಕೊಳ್ಳಬೇಕು ಎಂದ ಮಾರ್ಗದರ್ಶನ ನೀಡಿದರು. ಈ ಸಂದರ್ಭ ಸಂಘದ ಸಂಚಾಲಕಿ ಕೆ.ಎಸ್. ಶೋಭ, ಸ್ಮಿತಾ , ಸಂಘದ ಸದಸ್ಯರು, ವಿದ್ಯಾರ್ಥಿಗಳು ಶಿಕ್ಷಕರು ಪಾಲ್ಗೊಂಡಿದ್ದರು.