ನಾಪೋಕ್ಲು ಸೆ.9 NEWS DESK : ಶಿಕ್ಷಕ ಮತ್ತು ವಿದ್ಯಾರ್ಥಿಗಳ ನಡುವಿನ ಬಾಂಧವ್ಯ ಪ್ರಮುಖವಾದದ್ದು, ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯ ಎಂದು ನಿವೃತ್ತ ಪ್ರಾಂಶುಪಾಲ ಕಲ್ಯಾಟಂಡ ಪೂಣಚ್ಚ ಹೇಳಿದರು. ನಾಪೋಕ್ಲುವಿನ ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ (ಶಿಕ್ಷಕರ ದಿನಾಚರಣೆ) ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪ್ರಾಂಶುಪಾಲರಾದ ಬಿ.ಎಂ.ಶಾರದಾ ಡಾ.ರಾಧಾಕೃಷ್ಣನ್ ಅವರ ಜೀವನದ ಕುರಿತು ಹಾಗೂ ಶಿಕ್ಷಕಿ ಚಂದ್ರಕಲಾ ಗುರು ಎಂದರೆ ಯಾರು ಎಂಬ ಬಗ್ಗೆ ಮಾತನಾಡಿದರು. ವಿದ್ಯಾಸಂಸ್ಥೆಯ ಅಧ್ಯಕ್ಷ ಕಲಿಯಂಡ ಹ್ಯಾರಿ ಮಂದಣ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕ ವೃಂದದವರಿಗೆ ವಿವಿಧ ಸ್ಪರ್ಧೆ ನಡೆಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ನಿರ್ದೇಶಕರಾದ ನಾಯಕಂಡ ದೀಪಕ್ ಚಂಗಪ್ಪ, ಬಿದ್ದಾಟಂಡ ಮುತ್ತಣ್ಣ, ಶಿಕ್ಷಕ ವೃಂದ ಹಾಜರಿದ್ದರು. ವಿದ್ಯಾರ್ಥಿನಿ ಬಿ.ಎನ್.ವಿಶಾಲಾಕ್ಷಿ ಸ್ವಾಗತಿಸಿದರು. ಕೃಪಾ ಡಿ.ಪಿ. ವಂದಿಸಿದರು.
ವರದಿ : ದುಗ್ಗಳ ಸದಾನಂದ.