ಸೋಮವಾರಪೇಟೆ NEWS DESK ಸೆ.7 : ತಾಲೂಕಿನ ಇತಿಹಾಸ ಪ್ರಸಿದ್ಧ ದೊಡ್ಡಮಳ್ತೆ ಹೊನ್ನಮ್ಮನ ಕೆರೆ ಜಾತ್ರೋತ್ಸವ ಹಾಗು ಬಾಗಿನ ಅರ್ಪಣಾ ಕಾರ್ಯಕ್ರಮ ಭಕ್ತಾದಿಗಳ ಸಮ್ಮುಖದಲ್ಲಿ ಶ್ರದ್ಧಾ-ಭಕ್ತಿಯಿಂದ ಶುಕ್ರವಾರ ನೆರವೇರಿತು. ಬೆಳಿಗ್ಗೆ 10 ಗಂಟೆಗೆ ಸಂಪ್ರದಾಯದಂತೆ, ಶ್ರೀ ಸಿದ್ದೇಶ್ವರ, ಬಸವೇಶ್ವರ, ಸ್ವರ್ಣಗೌರಿ ಹೊನ್ನಮ್ಮ ದೇವಾಲಯ ಸಮಿತಿ ಮತ್ತು ಹೊನ್ನಮ್ಮದೇವಿ ಕುಟುಂಬಸ್ಥರು ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಬಾಗಿನವನ್ನು ಬಂಗಾರದ ಕಲ್ಲಿನ ಮೇಲಿಟ್ಟು ಪೂಜಿಸಿ, ನಂತರ ಕೆರೆಯ ನೀರಿನಲ್ಲಿ ವಿಸರ್ಜಿಸಿದರು. ಗ್ರಾಮದ ಸಮೃದ್ಧಿಗಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ನಂತರ ಶಾಸಕ ಡಾ. ಮಂತರ್ ಗೌಡ, ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಗೋಪಾಲಕೃಷ್ಣ, ಮಾಜಿ ಎಂಎಲ್ಸಿ ಎಸ್.ಜಿ.ಮೇದಪ್ಪ, ಗೌಡಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಚ್.ಆರ್. ಸುರೇಶ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ, ತಾಲ್ಲೂಕು ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಅರುಣ್ ಕೊತ್ನಳ್ಳಿ, ದೇವಾಲಯ ಸಮಿತಿಯ ಅಧ್ಯಕ್ಷ ಡಿ.ಎ. ಉದಯ, ಉಪಾಧ್ಯಕ್ಷ ಡಿ.ಬಿ. ಲೋಕೇಶ್ ಬೆಳ್ಳಿಯಪ್ಪ, ಕಾರ್ಯದರ್ಶಿ ಡಿ.ಎನ್. ಕವನ್ ಬಾಗಿನ ಅರ್ಪಿಸಿದರು. ನವದಂಪತಿಗಳು ಬಿದಿರಿನಿಂದ ಹೆಣೆದ ಮೊರದಲ್ಲಿ ಹರಿಸಿಣ, ಕುಂಕುಮ, ಬಿಚ್ಚೋಲೆ, ರವಿಕೆ ಕಣ, ಕನ್ನಡಿ, ಬಾಚಣಿಕೆ, ಬಳೆ, ಗೌರಿ ಹೂ, ತೆಂಗಿನ ಕಾಯಿ, ಫಲತಾಂಬೂಲಗಳನ್ನೊಳಗೊಂಡ ಬಾಗಿನವನ್ನು ಕೆರೆಯಲ್ಲಿ ಅರ್ಪಿಸಿ, ತಮ್ಮ ಇಷ್ಟಾರ್ಥ ಈಡೇರಿಕೆಗೆ ಹೊನ್ನಮ್ಮ ತಾಯಿಯಲ್ಲಿ ಬೇಡಿಕೊಂಡರು. ಗಣೇಶ ಚತುರ್ಥಿ ಮುನ್ನಾದಿನ ಸ್ವರ್ಣಗೌರಿ ಪೂಜೆಯಂದು ನವದಂಪತಿಗಳು ಬಂದು ಪೂಜೆ ಸಲ್ಲಿಸಿ, ಕೆರೆಗೆ ಬಾಗಿನ ಅರ್ಪಿಸುವುದು ಬಹು ಹಿಂದಿನಿಂದ ನಡೆದುಕೊಂಡು ಬಂದ ಸಂಪ್ರದಾಯವಾಗಿದೆ. ಸೋಮವಾರಪೇಟೆ ತಾಲ್ಲೂಕು ಕರ್ನಾಟಕ ಜಾನಪದ ಪರಿಷತ್‌ನ ತಾಲ್ಲೂಕು ಘಟಕದ ವತಿಯಿಂದ ಧಾರ್ಮಿಕ ಹಿನ್ನೆಲೆಯುಳ್ಳ ಶ್ರೀ ಹೊನ್ನಮ್ಮನ ಕೆರೆ ಜಾತ್ರೋತ್ಸವದಲ್ಲಿ ಕೆರೆಯಲ್ಲಿ ಭಾಗಿನ ಅರ್ಪಿಸಿ ಪೂಜೆ ಸಲ್ಲಿಸಿದರು.
Breaking News
- *ಸೋಮವಾರಪೇಟೆ : ಆರೋಗ್ಯ ತಪಾಸಣೆ ಮತ್ತು ಬೃಹತ್ ರಕ್ತದಾನ ಶಿಬಿರ*
- *ಸೋಮವಾರಪೇಟೆ : ಇಂದಿರಾ ಕ್ಯಾಂಟೀನ್ ಕಾಮಗಾರಿ ಅಪೂರ್ಣ : ಅಸಮಾಧಾನ*
- *ಡಿಜಿಟಲ್ ಸಾಕ್ಷರತೆ ಮಹಿಳೆಯರ ಬದುಕಿಗೆ ಸಹಕಾರಿಯಾಗಲಿದೆ : ಆನಂದ್ ಪ್ರಕಾಶ್ ಮೀನಾ*
- *ಸೋಮವಾರಪೇಟೆಯಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿ ಜನ್ಮ ದಿನಾಚರಣೆ*
- *ಸುಂಟಿಕೊಪ್ಪ : ಅಪ್ರಾಪ್ತರಿಗೆ ವಾಹನ ನೀಡಿದರೆ ಪೋಷಕರಿಗೆ ಶಿಕ್ಷೆ*
- *ಮಡಿಕೇರಿ : ನ.22 ರಂದು ಉದ್ಯೋಗ ಮೇಳ*
- *ನ.20 ರಂದು ಶಾಂತಳ್ಳಿಯ ವಿವಿಧೆಡೆ ವಿದ್ಯುತ್ ವ್ಯತ್ಯಯ*
- *ಮಡಿಕೇರಿ : ಗಾಂಧಿನಗರ ಅಂಗನವಾಡಿ ಕೇಂದ್ರದಲ್ಲಿ ಸೀಮಂತ ಕಾರ್ಯಕ್ರಮ : ಸಮವಸ್ತ್ರ ವಿತರಣೆ*
- *ರಾಷ್ಟ್ರೀಯ ಐಕ್ಯತಾ ದಿನ : ಮಡಿಕೇರಿಯಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ*
- *ಮಡಿಕೇರಿಯಲ್ಲಿ ವಿಶ್ವ ಪ್ರತಿಜೀವಕ ನಿರೋಧಕ ಜಾಗೃತಿ ಸಪ್ತಾಹ*