ಕುಶಾಲನಗರ, ಸೆ.9 NEWS DESK : ಕೊಡಗು ಜಿಲ್ಲೆಯಲ್ಲಿ ಗೌರಿ- ಗಣೇಶ ಹಬ್ಬದ ಸಂದರ್ಭದಲ್ಲಿ ಶಾಲಾ ಮಕ್ಕಳಿಂದ ತಯಾರಾಗುತ್ತಿರುವ ಪರಿಸರ ಸ್ನೇಹಿ ಅರಿಶಿಣ ಮತ್ತು ಜೇಡಿಮಣ್ಣಿನ ಗಣೇಶ ಮೂರ್ತಿ ತಯಾರಿಕೆಗೆ ಉತ್ತಮ ಸ್ಪಂದನೆ ದೊರೆತಿದೆ. ಕೊಡಗು ಜಿಲ್ಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆಯ
ವತಿಯಿಂದ ಶಾಲಾ-ಕಾಲೇಜಿನ ಇಕೋ ಕ್ಲಬ್/ಎನ್.ಎಸ್.ಎಸ್.ಘಟಕಗಳ ಮೂಲಕ ಮಕ್ಕಳು ಸಮುದಾಯದಲ್ಲಿ ರಾಸಾಯನಿಕ ಬಣ್ಣ ಮತ್ತು ಪಿ.ಓ.ಪಿ.ರಹಿತ ಪರಿಸರ ಸ್ನೇಹಿ ಅರಿಶಿಣ ಮತ್ತು ಜೇಡಿಮಣ್ಣಿನಿಂದ ಗಣೇಶ ಮೂರ್ತಿ ತಯಾರಿಕೆಯ ಪರಿಸರ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.
ಕೊಡಗು ಜಿಲ್ಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ವತಿಯಿಂದ ಶಾಲಾ-ಕಾಲೇಜಿನ ಇಕೋ ಕ್ಲಬ್/ಎನ್.ಎಸ್.ಎಸ್.ಘಟಕಗಳು, ಮೂಲಕ ಮಕ್ಕಳು & ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆಯ ಸಹಯೋಗದೊಂದಿಗೆ ವಿದ್ಯಾರ್ಥಿಗಳು ಹಾಗೂ ಸಮುದಾಯದಲ್ಲಿ ಬಣ್ಣ & ಪಿ.ಓ.ಪಿ.ರಹಿತ ಪರಿಸರ ಸ್ನೇಹಿ ಅರಿಶಿಣ ಗಣೇಶ ಮೂರ್ತಿ ತಯಾರಿಕೆಯ ಪರಿಸರ ಜಾಗೃತಿ ಅಭಿಯಾನ ಹಮ್ಮಿಕೊಂಡಿದೆ.
ಮಕ್ಕಳಿಂದ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆ: ಜಿಲ್ಲೆಯಲ್ಲಿ ಕೈಗೊಂಡ ಪರಿಸರ ಸ್ನೇಹಿ ಗಣೇಶೋತ್ಸವ ಸಂದರ್ಭದಲ್ಲಿ ವಿವಿಧ ಪಟ್ಟಣ, ಗ್ರಾಮಗಳಲ್ಲಿ ಶಾಲಾ ಮಕ್ಕಳು ಸ್ವತಃ ತಾವೇ ಜೇಡಿಮಣ್ಣಿನಿಂದ ಪರಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸುವ ಮೂಲಕ ಜನರ ಗಮನ ಸೆಳೆದಿದ್ದಾರೆ.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಕಛೇರಿಯ ಪರಿಸರ ಅಧಿಕಾರಿ ಎಂ.ಜಿ.ರಘುರಾಮ್ ತಿಳಿಸಿದ್ದಾರೆ.