ಮಡಿಕೇರಿ ಸೆ.9 NEWS DESK : ಕೊಡಗು ಜಿಲ್ಲೆಯಾದ್ಯಂತ ಮಾತೆ ಮರಿಯಮ್ಮನವರ ಜನ್ಮದಿನಾಚರಣೆಯನ್ನು ಕ್ರಿಶ್ಚಿಯನ್ ಬಾಂಧವರು ಸಂಭ್ರಮದಿಂದ ಆಚರಿಸಿದರು. ಜಿಲ್ಲೆಯ ವಿವಿಧ ಚರ್ಚ್‍ಗಳಲ್ಲಿ ಈ ಸಂಬಂಧ ವಿಶೇಷ ಪ್ರಾರ್ಥನೆ, ಬಲಿಪೂಜೆಗಳು ನಡೆದವು. ಕಳೆದ ಒಂದು ವಾರದಿಂದ ಪ್ರಾರ್ಥನೆಗಳ ಮೂಲಕ ವಿಶೇಷ ಸಿದ್ಧತೆಯಲ್ಲಿ ತೊಡಗಿಕೊಂಡಿದ್ದ ಜನಾಂಗ ಬಾಂಧವರು ಸಡಗರ ಸಂಭ್ರಮದಿಂದ ಆಚರಿಸಿದರು. ಮಡಿಕೇರಿಯ ಸಂತ ಮೈಕಲರ ದೇವಾಲಯದಲ್ಲಿ ಹಬ್ಬದ ಆಡಂಬರದ ಗಾಯನ, ಬಲಿಪೂಜೆ ನಡೆಯಿತು. ಫಾ.ದೀಪಕ್ ಬಲಿಪೂಜೆ ನೆರವೇರಿಸಿ ದಿನದ ಮಹತ್ವದ ಸಂದೇಶ ನೀಡಿದರು. ಬಲಿಪೂಜೆ ಬಳಿಕ ಮಾತೆ ಮರಿಯಮ್ಮನವರ ಪಲ್ಲಕ್ಕಿಯೊಂದಿಗೆ ಮೆರವಣಿಗೆ ನಡೆಯಿತು. ಭಕ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಬಳಿಕ ಮಾತೆ ಮಾರಿಯಮ್ಮನವರ ಪ್ರತಿಮೆಗೆ ಪುಷ್ಪಾರ್ಚನೆ ಮೂಲಕ ಆರಾಧಿಸಲಾಯಿತು. ಸುಂಟಿಕೊಪ್ಪದ ಸಂತ ಅಂತೋಣಿ ದೇವಾಲಯದಲ್ಲಿ ದಿವ್ಯ ಅಡಂಬರ ಬಲಿಪೂಜೆ ಹಾಗೂ ವಿಶೇಷ ಪ್ರಾರ್ಥನೆಯನ್ನು ಧರ್ಮಗುರುಗಳಾದ ಫಾಧರ್ ವಿಜಯಕುಮಾರ್ ನೇರವೇರಿಸಿದರು. ದೇವಾಲಯದಿಂದ ಮಾತೆ ಮರಿಯಮ್ಮನವರ ಮೂರ್ತಿಯನ್ನು ಮೆರವಣಿಗೆಯ ಮೂಲಕ ಸಂತ ಮೇರಿ ಶಾಲಾ ಆವರಣದಲ್ಲಿ ಇರಿಸಿ ಪುಷ್ಪನಮನ ಸಲ್ಲಿಸಲಾಯಿತು. ಹೆಚ್ಚಿನ ಸಂಖ್ಯೆಯಲ್ಲಿ ಕ್ರೈಸ್ತ ಬಾಂಧವರು ಪಾಲ್ಗೊಂಡಿದ್ದರು. 7ನೇ ಹೊಸಕೋಟೆ ಸಂತ ಸೆಬಾಸ್ಟೀನ್ ದೇವಾಲಯದ ಧರ್ಮಗುರುಗಳಾದ ಸೆಬಾಸ್ಟೀನ್ (ಸುನಿಲ್),ರೇ.ಪಾ.ಸುನಿಲ್ ಪೂವತ್ತಂಗಲ್ ಕನ್ಯಾಮಾತೆ ಮರಿಯಮ್ಮನವರ ಜನ್ಮ ದಿನೋತ್ಸವದ ಅಂಗವಾಗಿ ದೇವಾಲಯದಲ್ಲಿ ದಿವ್ಯ ಅಡಂಬರ ಬಲಿಪೂಜೆಯನ್ನು ಸಮರ್ಪಿಸಿ ನಂತರ ಕ್ರೈಸ್ತ ಬಾಂದವರು ಮನೆ ಮನೆಗಳಿಂದ ಒಗೂಡಿಸಿ ತಂದಿದ ಬಗೆ ಬಗೆಯ ಪುಷ್ಪಗಳನ್ನು ಎಲ್ಲಾರೂ ಕನ್ಯಾಮಾತೆ ಮಯರಿಮ್ಮನವರಿಗೆ ಸಮರ್ಪಿಸಿದರು. ಮಾದಾಪುರ ಸಮೀಪದ ಪವಿತ್ರ ಕುಟುಂಬದ ದೇವಾಲಯದಲ್ಲೂ ಕನ್ಯಾಮಾತೆ ಮರಿಯಮ್ಮನವರ ಜನ್ಮ ದಿನೋತ್ಸವದ ಅಂಗವಾಗಿ ದೇವಾಲಯದಲ್ಲಿ ದಿವ್ಯ ಅಡಂಬರ ಬಲಿಪೂಜೆಯನ್ನು ರೇ.ಪಾ.ಸೂಸೈ ನೆರವೇರಿಸಿದರು. ನಂತರ ಕ್ರೈಸ್ತ ಬಾಂದವರು ಮನೆ ಮನೆಗಳಿಂದ ತಂದಿದ್ದ ಬಗೆ ಬಗೆಯ ಪುಷ್ಪಗಳನ್ನು ಎಲ್ಲಾರೂ ಕನ್ಯಾಮಾತೆ ಮಯರಿಮ್ಮನವರಿಗೆ ಸಮರ್ಪಿಸಿದರು.
Breaking News
- *ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ : ಮಾ.11ಕ್ಕೆ ವಿಚಾರಣೆ ಮುಂದೂಡಿಕೆ*
- *ಜ.25 ರಂದು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ*
- *ಜ.30 ರಂದು ಹುತಾತ್ಮರ ದಿನಾಚರಣೆ : ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ*
- *ಹೈದರಾಬಾದ್ನಲ್ಲಿ ಗಮನ ಸೆಳೆದ ಕುಡಿಯರ ಉರುಟಿಕೊಟ್ಟ್ ಪಾಟ್ ನೃತ್ಯ*
- *ಮಡಿಕೇರಿ : ಜ.28 ರಂದು ಕುಂದುರುಮೊಟ್ಟೆ ದಸರಾ ಉತ್ಸವ ಸಮಿತಿಯ ಸುವರ್ಣ ಮಹೋತ್ಸವ ಸ್ಮರಣ ಸಂಚಿಕೆ “ದಶಮಿ” ಬಿಡುಗಡೆ*
- *ಮಡಿಕೇರಿಯ ಡಾ.ಅಂಬೇಡ್ಕರ್ ಭವನವನ್ನು ದಲಿತ ಸಂಘರ್ಷ ಸಮಿತಿಯ ವಶಕ್ಕೆ ನೀಡಿ*
- *‘ಸಂವಿಧಾನ್ ಸಮ್ಮಾನ್ ಅಭಿಯಾನ್’ : ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನ ವಿರೋಧಿಯಾಗಿ ನಡೆದುಕೊಂಡವರ ಬಣ್ಣ ಬಯಲು*
- *ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ ಕಾರ್ಯಕ್ರಮ ಉದ್ಘಾಟನೆ : ಮಂಡ್ಯದಲ್ಲಿ ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
- *ಭಾಗಮಂಡಲದಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ : ಗೌರವ ಸಮರ್ಪಣೆ*
- *ಬಲ್ಲಮಾವಟಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ : ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ : ಡಾ.ಶೈಲಜಾ ಸಲಹೆ*