Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ*
  • *ವಿಶೇಷ ಆರೋಗ್ಯ ಕಾರ್ಯಕ್ರಮ : ಯುವಜನರಲ್ಲಿ ಎಚ್‌ಐವಿ ತಡೆಗೆ ಅರಿವು ಅಗತ್ಯ: ಡಾ. ಸನತ್ ಕುಮಾರ್*
  • *ಪೊನ್ನಂಪೇಟೆಯಲ್ಲಿ ಡಿ.ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆ*
  • *ಕೋಟೆ ಆವರಣಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಭೇಟಿ :  ಅಭಿವೃದ್ಧಿ ಕಾಮಗಾರಿಗಳ ಕುರಿತು ಪರಿಶೀಲನೆ : ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಕ್ರಮ*
  • *ಕೊಡಗು ಜಿಲ್ಲಾಡಳಿತದಿಂದ ಸದ್ಭಾವನಾ ದಿನಾಚರಣೆ*
  • *ಡಿ.ದೇವರಾಜ ಅರಸು ಅವರ 111ನೇ ಜನ್ಮ ದಿನಾಚರಣೆ : ದೂರದೃಷ್ಟಿಯ ನಾಯಕ ಡಿ.ದೇವರಾಜ ಅರಸು : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಸುಂಟಿಕೊಪ್ಪ ಡಿಸಿಸಿ ಬ್ಯಾಂಕ್ ಶಾಖೆಗೆ ರೂ.1.29 ಕೋಟಿ ಲಾಭ*
  • *ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳಿಗೆ ವಿಶೇಷ ಸಮವಸ್ತ್ರ ವಿತರಣೆ*
  • *ಕುಶಾಲನಗರದಲ್ಲಿ ಆ.23ರಂದು ಗ್ಲೋಬಲ್ ಆರ್ಯವೈಶ್ಯ ಸಮಾವೇಶದ ಸಂಕಲ್ಪ ಯಾತ್ರೆ*
  • *ಭಾಗಮಂಡಲ : ಅಯ್ಯಂಗೇರಿಯ ಗೌಡ ಯುವ ಒಕ್ಕೂಟದ ವತಿಯಿಂದ ಆ.29 ಮತ್ತು 30ರಂದು ರಾಜ್ಯ ಮಟ್ಟದ ಮುಕ್ತ ಕೆಸರು ಗದ್ದೆ ಕ್ರೀಡಾಕೂಟ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*‘ಕರ್ನಾಟಕ ಸುವರ್ಣ ಸಂಭ್ರಮ ರಥಕ್ಕೆ ಮಡಿಕೇರಿಯಲ್ಲಿ ಭವ್ಯ ಸ್ವಾಗತ : ಕನ್ನಡ ನಾಡು-ನುಡಿ ಮತ್ತು ಸಂಸ್ಕೃತಿ ಬೆಳವಣಿಗೆಗೆ ಪ್ರತಿಯೊಬ್ಬರೂ ಶ್ರಮಿಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*‘ಕರ್ನಾಟಕ ಸುವರ್ಣ ಸಂಭ್ರಮ ರಥಕ್ಕೆ ಮಡಿಕೇರಿಯಲ್ಲಿ ಭವ್ಯ ಸ್ವಾಗತ : ಕನ್ನಡ ನಾಡು-ನುಡಿ ಮತ್ತು ಸಂಸ್ಕೃತಿ ಬೆಳವಣಿಗೆಗೆ ಪ್ರತಿಯೊಬ್ಬರೂ ಶ್ರಮಿಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ*

ಸೆಪ್ಟೆಂಬರ್ 9, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.9 NEWS DESK : ರಾಜ್ಯವು ‘ಕರ್ನಾಟಕ’ವೆಂದು ನಾಮಕರಣಗೊಂಡು 5 ದಶಕಗಳು ಪೂರೈಸಿದ ಹಿನ್ನೆಲೆ ರಾಜ್ಯ ಸರ್ಕಾರ ಚಾಲನೆ ನೀಡಿರುವ ‘ಕರ್ನಾಟಕ ಸುವರ್ಣ ಸಂಭ್ರಮ ರಥ’ಕ್ಕೆ ಮಡಿಕೇರಿಯಲ್ಲಿ ಜಿಲ್ಲಾಡಳಿತ, ಕಸಾಪ ಹಾಗೂ ವಿವಿಧ ಸಂಘಟನೆಗಳಿಂದ ಭವ್ಯ ಸ್ವಾಗತ ಕೋರಲಾಯಿತು. ನಗರದ ಜನರಲ್ ತಿಮ್ಮಯ್ಯ ವೃತ್ತದಿಂದ ಮಂಗೇರಿರ ಮುತ್ತಣ್ಣ ವೃತ್ತದ ಮೂಲಕ ಸ್ಕ್ವಾಡರ್ನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತಕ್ಕೆ ಆಗಿಮಿಸಿದ ರಥಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಪುಷ್ಪರ್ಚನೆ ಮಾಡಿ ಸ್ವಾಗತಿಸಿದರು. ನಂತರ ಮಾತನಾಡಿದ ಅವರು, ಕನ್ನಡ ನಾಡು ನುಡಿ, ಕನ್ನಡ ಭಾಷೆಗೆ ಇರುವ ಇತಿಹಾಸವನ್ನು ನೆನಪಿಸಿಕೊಳ್ಳಲು ಇದೊಂದು ಸುವರ್ಣ ಅವಕಾಶವಾಗಿದೆ ಎಂದು ಹೇಳಿದರು. ಕನ್ನಡ ನಾಡು-ನುಡಿ ಮತ್ತು ಸಂಸ್ಕೃತಿ ಬೆಳವಣಿಗೆಗೆ ಪ್ರತಿಯೊಬ್ಬರೂ ಶ್ರಮಿಸಬೇಕು. ‘ಕರ್ನಾಟಕ ರಾಜ್ಯವೆಂದು ನಾಮಕರಣವಾಗಿದೆ 50 ವರ್ಷ ಪೂರ್ಣಗೊಂಡ ಹಿನ್ನೆಲೆ ಸುವರ್ಣ ಸಂಭ್ರಮ ರಥಯಾತ್ರೆಯನ್ನು ರಾಜ್ಯದ್ಯಾಂತ ಹಮ್ಮಿಕೊಳ್ಳಲಾಗಿದೆ ಎಂದರು. ಸುವರ್ಣ ಸಂಭ್ರಮ 50 ರ ರಥ ಯಾತ್ರೆಯು ಗೋಣಿಕೊಪ್ಪ-ಪೊನ್ನಂಪೇಟೆ-ವಿರಾಜಪೇಟೆ ಮೂಲಕ ಮಡಿಕೇರಿಗೆ ಆಗಮಿಸಿದೆ. ಸೆಪೆಂಬರ್, 10 ರಂದು ಸೋಮವಾರಪೇಟೆ ಮತ್ತು ಕುಶಾಲನಗರಕ್ಕೆ ತೆರಳಲಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಹೇಳಿದರು. ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ಕರ್ನಾಟಕ ನಾಮಕರಣವಾಗಿ 50 ವರ್ಷ ಪೂರ್ಣಗೊಂಡ ಹಿನ್ನೆಲೆ 50 ರ ಸಂಭ್ರಮ ಪ್ರಯುಕ್ತ ನೆನಪಿಸುವುದರ ಜೊತೆಗೆ ಕನ್ನಡಿಗರಲ್ಲಿ ಜಾಗೃತಿ ಮೂಡಿಸಲು ಸುವರ್ಣ ಕರ್ನಾಟಕ ರಥ ಜ್ಯೋತಿಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದರು. ಕನ್ನಡ ನಾಡು-ನುಡಿ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು. ರಾಜ್ಯದ ಗಡಿ ಕೊಡಗು ಜಿಲ್ಲೆಗೂ ಕರ್ನಾಟಕ ಸುವರ್ಣ ಸಂಭ್ರಮ ರಥ ಆಗಮಿಸಿರುವುದು ಎಲ್ಲರಲ್ಲಿಯೂ ಉತ್ಸಾಹ ಮತ್ತು ಸಂಭ್ರಮ ತಂದಿದೆ ಎಂದು ಹೇಳಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕರ್ನಾಟಕ ನಾಮಕರಣದ ಸುವರ್ಣ ಮಹೋತ್ಸವದ ಅಂಗವಾಗಿ ‘ಸುವರ್ಣ ಸಂಭ್ರಮ-50’ ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಎಂಬ ಶೀರ್ಷಿಕೆಯಡಿ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಕರ್ನಾಟಕ ಸಂಭ್ರಮ 50 ಪ್ರಯುಕ್ತ ಕನ್ನಡ ಜ್ಯೋತಿ ರಥಯಾತ್ರೆಯು ರಾಜ್ಯದ 31 ಜಿಲ್ಲೆಗಳಲ್ಲಿ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಸಂಚರಿಸಿದ್ದು, ಕೊಡಗು ಜಿಲ್ಲೆಯ ನಂತರ ಹಾಸನ, ಚಿಕ್ಕಮಗಳೂರು, ದಕ್ಷಿಣಕನ್ನಡ, ಉಡುಪಿ, ಉತ್ತರಕನ್ನಡ ಜಿಲ್ಲೆಗಳಲ್ಲಿ ಸಂಚರಿಸಲಿದೆ. ಸ್ವಾಗತ ಹಾಗೂ ಮೆರವಣಿಗೆ ಸಂದರ್ಭದಲ್ಲಿ ತಹಶೀಲ್ದಾರ್ ಪ್ರವೀಣ್ ಕುಮಾರ್, ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಮುನೀರ್ ಅಹ್ಮದ್, ರೇವತಿ ರಮೇಶ್, ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್, ಸರ್ವೋದಯ ಸಮಿತಿ ಜಿಲ್ಲಾಧ್ಯಕ್ಷರಾದ ಅಂಬೆಕಲ್ಲು ಕುಶಾಲಪ್ಪ, ಜಾನಪದ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷರಾದ ಬಿ.ಜಿ.ಅನಂತಶಯನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ, ಮಣಜೂರು ಮಂಜುನಾಥ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್, ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ,ಕಸಾಪ ಸದಸ್ಯರಾದ ಚುಮ್ಮಿ ದೇವಯ್ಯ, ಜಾನ್ ಸುಂಟಿಕೊಪ್ಪ, ಬೆಪ್ಪುರನ ಬೋಪಯ್ಯ, ಸಿದ್ದರಾಜು ಬೆಳ್ಳಯ್ಯ, ಅಂಬೆಕಲ್ಲು ನವೀನ್, ಟಿ.ಎಂ.ಮುದ್ದಯ್ಯ, ಜಿ.ಆರ್.ರಾಜು, ಕಸಾಪ ಪದಾಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಗಳು, ಕನ್ನಡಾಭಿಮಾನಿಗಳು ಇತರರು ಇದ್ದರು.
ಮೆರವಣಿಗೆ ಸಂದರ್ಭದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ರಮೇಶ್ ಮತ್ತು ತಂಡದವರು ಗಿರಿಜನ ನೃತ್ಯ ಪ್ರದರ್ಶಿಸಿ ಗಮನ ಸೆಳೆದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ*

ಆಗಷ್ಟ್ 20, 2026

*ವಿಶೇಷ ಆರೋಗ್ಯ ಕಾರ್ಯಕ್ರಮ : ಯುವಜನರಲ್ಲಿ ಎಚ್‌ಐವಿ ತಡೆಗೆ ಅರಿವು ಅಗತ್ಯ: ಡಾ. ಸನತ್ ಕುಮಾರ್*

ಆಗಷ್ಟ್ 20, 2026

*ಪೊನ್ನಂಪೇಟೆಯಲ್ಲಿ ಡಿ.ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆ*

ಆಗಷ್ಟ್ 20, 2026

*ವಿಶೇಷ ಆರೋಗ್ಯ ಕಾರ್ಯಕ್ರಮ : ಯುವಜನರಲ್ಲಿ ಎಚ್‌ಐವಿ ತಡೆಗೆ ಅರಿವು ಅಗತ್ಯ: ಡಾ. ಸನತ್ ಕುಮಾರ್*

ಆಗಷ್ಟ್ 20, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಆ.20 NEWS DESK : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣ…

*ಪೊನ್ನಂಪೇಟೆಯಲ್ಲಿ ಡಿ.ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆ*

ಆಗಷ್ಟ್ 20, 2026

*ಕೋಟೆ ಆವರಣಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಭೇಟಿ :  ಅಭಿವೃದ್ಧಿ ಕಾಮಗಾರಿಗಳ ಕುರಿತು ಪರಿಶೀಲನೆ : ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಕ್ರಮ*

ಆಗಷ್ಟ್ 20, 2026

*ಕೊಡಗು ಜಿಲ್ಲಾಡಳಿತದಿಂದ ಸದ್ಭಾವನಾ ದಿನಾಚರಣೆ*

ಆಗಷ್ಟ್ 20, 2026

*ಡಿ.ದೇವರಾಜ ಅರಸು ಅವರ 111ನೇ ಜನ್ಮ ದಿನಾಚರಣೆ : ದೂರದೃಷ್ಟಿಯ ನಾಯಕ ಡಿ.ದೇವರಾಜ ಅರಸು : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಆಗಷ್ಟ್ 20, 2026

*ಸುಂಟಿಕೊಪ್ಪ ಡಿಸಿಸಿ ಬ್ಯಾಂಕ್ ಶಾಖೆಗೆ ರೂ.1.29 ಕೋಟಿ ಲಾಭ*

ಆಗಷ್ಟ್ 20, 2026

*ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳಿಗೆ ವಿಶೇಷ ಸಮವಸ್ತ್ರ ವಿತರಣೆ*

ಆಗಷ್ಟ್ 20, 2026

*ಕುಶಾಲನಗರದಲ್ಲಿ ಆ.23ರಂದು ಗ್ಲೋಬಲ್ ಆರ್ಯವೈಶ್ಯ ಸಮಾವೇಶದ ಸಂಕಲ್ಪ ಯಾತ್ರೆ*

ಆಗಷ್ಟ್ 20, 2026

*ಭಾಗಮಂಡಲ : ಅಯ್ಯಂಗೇರಿಯ ಗೌಡ ಯುವ ಒಕ್ಕೂಟದ ವತಿಯಿಂದ ಆ.29 ಮತ್ತು 30ರಂದು ರಾಜ್ಯ ಮಟ್ಟದ ಮುಕ್ತ ಕೆಸರು ಗದ್ದೆ ಕ್ರೀಡಾಕೂಟ*

ಆಗಷ್ಟ್ 20, 2026

*ಮಾಸಿಕ ಶ್ರದ್ಧಾಂಜಲಿ : ದೇವಟ್ ಪರಂಬ್ ನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ದೇವಟ್ ಪರಂಬ್ ದುರಂತ ನರಮೇಧವನ್ನು ವಿಶ್ವಸಂಸ್ಥೆಯ ಹೊಲೊಕಾಸ್ಟ್ ಸ್ಮರಣಾರ್ಥ ಪಟ್ಟಿಗೆ ಸೇರಿಸಲು ಒತ್ತಾಯ*

ಆಗಷ್ಟ್ 20, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.