ಸುಂಟಿಕೊಪ್ಪ ಸೆ.10 NEWS DESK : ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಸಮಿತಿ ಸಭೆಯು ಕುಶಾಲನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಮಿತಿಯ ಅಧ್ಯಕ್ಷ ಅಬ್ದುಲ್ ರಜಾಕ್, ನೂತನ ಸಮಿತಿ ಅಲ್ಪಸಂಖ್ಯಾತ ಸಮುದಾಯಗಳಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನ ಒದಗಿಸಿಕೊಡುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು. ಮುಂದಿನ ದಿನಗಳಲ್ಲಿ ಸಭೆಯೊಂದನ್ನು ಏರ್ಪಡಿಸುವ ಮೂಲಕ ಶಾಸಕರ ಹಾಗೂ ಬ್ಲಾಕ್ ಅಧ್ಯಕ್ಷರ ಸಮ್ಮುಖದಲ್ಲಿ ನೂತನವಾಗಿ ಆಯ್ಕೆ ಮಾಡಲಾಡಲಾದ ಪದಾಧಿಕಾರಿಗಳಿಗೆ ಆದೇಶ ಪತ್ರವನ್ನು ನೀಡಲಾಗುವುದು ಎಂದರು. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಸಮಿತಿಯ ಅಧ್ಯಕ್ಷ ಪಿ.ಎ.ಹನೀಫ್ ಮಾತನಾಡಿ ನೂತನವಾಗಿ ಆಯ್ಕೆಯಾಗಿರುವ ಸದಸ್ಯರು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕಾಯಕದಲ್ಲಿ ತೊಡಗಿಸಿಕೊಳ್ಳಬೇಕು ಅಲ್ಲದೇ ಪಕ್ಷದ ಸಂಘಟನೆಗೆ ಒತ್ತು ನೀಡಬೇಕೆಂದು ಕರೆ ನೀಡಿದರು. ಇದೇ ಸಂದರ್ಭ ಸಮತಿಯ ಪ್ರಧಾನ ಕಾರ್ಯದರ್ಶಿ ಸಯ್ಯದ್ ಭಾವ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಶಾಂತಪ್ಪನ್ ಹಾಗೂ ಸಮಿತಿಗೆ ನೂತನ ಸಮಿತಿಗೆ ಆಯ್ಕೆಯಾದ ಪದಾಧಿಕಾರಿಗಳು ಹಾಜರಿದ್ದರು.










