ಮಡಿಕೇರಿ ಸೆ.10 NEWS DESK : ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಆಂಬುಲೆನ್ಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಆಂಬುಲೆನ್ಸ್ ಚಾಲಕನ ಕಾಲಿಗೆ ಗಂಭೀರ ಗಾಯಗೊಂಡಿರುವ ಘಟನೆ ಮೇಕೇರಿ ಸಮೀಪದ ಬಿಳಿಗೇರಿಯಲ್ಲಿ ನಡೆದಿದೆ. ಆಂಬುಲೆನ್ಸ್ ನಲ್ಲಿ ಇದ್ದ ಮಹಿಳೆಯನ್ನು ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.











