ಮಡಿಕೇರಿ ಸೆ.10 NEWS DESK : ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಭವನ ಮತ್ತು ಕಚೇರಿಯನ್ನು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಉದ್ಘಾಟಿಸಿದರು. ನೂತನ ಪ್ರವೇಶ ದ್ವಾರವನ್ನು ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ಅಧ್ಯಕ್ಷ ಕೊಡಂದೇರ ಪಿ.ಗಣಪತಿ ಉದ್ಘಾಟಿಸಿದರು. ಸಂಘದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಮಾಜಿ ಸಭಾಧ್ಯಕ್ಷ ಕೆ.ಜಿ.ಬೋಪಯ್ಯ ಹಾಗೂ ಮತ್ತಿತರ ಗಣ್ಯರು ಹಾಜರಿದ್ದರು.
ವಾರ್ಷಿಕ ಮಹಾಸಭೆ : ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24ನೇ ಸಾಲಿನ ಸಂಘದ 7ನೇ ವಾರ್ಷಿಕ ಮಹಾಸಭೆಯು ಸೆ.17 ರಂದು ಪೆರಾಜೆ ಶ್ರೀ ಅನ್ನಪೂರ್ಣೆಶ್ವರಿ ಕಲಾ ಮಂದಿರದಲ್ಲಿ ಪೂರ್ವಾಹ್ನ 10.40ಕ್ಕೆ ಸಂಘದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಚ್.ಕೆ.ಲೋಕೇಶ್ ತಿಳಿಸಿದ್ದಾರೆ.











