ಸಿದ್ದಾಪುರ ಸೆ.11 NEWS DESK : ಪುಲಿಯೇರಿ ಗ್ರಾಮದ ಇಂಜಿಲಗೆರೆಯಲ್ಲಿ ಶ್ರೀ ವಿನಾಯಕ ಮಿತ್ರ ಮಂಡಳಿ ವತಿಯಿಂದ ದ್ವಿತೀಯ ವರ್ಷದ ಗೌರಿ-ಗಣೇಶ ವಿಸರ್ಜನೋತ್ಸವವು ಸಂಭ್ರಮದಿಂದ ನಡೆಯಿತು. ಉತ್ಸವದ ಅಂಗವಾಗಿ ಮಹಾಪೂಜೆ, ಮಹಾ ಮಂಗಳಾರತಿ ನಡೆಯಿತು. ನೆರದಿದ್ದ ಭಕ್ತಾದಿಗಳಿಗೆ ಪ್ರಸಾದ ವಿತರಣೆ ಹಾಗೂ ಅನ್ನದಾನ ನೆರವೇರಿತು. ನಂತರ ಗೌರಿ ಗಣೇಶ ಮೂರ್ತಿಯನ್ನು ಅಲಂಕೃತ ಮಂಟಪದಲ್ಲಿ ಕುಳ್ಳಿರಿಸಿ ವಾದ್ಯ ಮೇಳದೊಂದಿಗೆ ಇಂಜಿಲಗೆರೆ ಹಾಗೂ ಪುಲಿಯೇರಿ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ಸಾಗಿ ಬಳಿಕ ಗ್ರಾಮದ ಕೆರೆಯಲ್ಲಿ ವಿಸರ್ಜಿಸಲಾಯಿತು. ಈ ಸಂದರ್ಭ ವಿನಾಯಕ ಮಿತ್ರ ಮಂಡಳಿಯ ಪದಾಧಿಕಾರಿಗಳಾದ ರತೀಶ್, ಶಶಿಕುಮಾರ್, ಸುದೀಶ್, ಮನೀಶ್, ರಜೀಶ್ ನೂತನ್ ಮತ್ತು ಶರತ್ ಸೇರಿದಂತೆ ಸುತ್ತಮುತ್ತಲ ಗ್ರಾಮದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಸೌಹಾರ್ದತೆಗೆ ಸಾಕ್ಷಿಯಾದ ಇಂಜಲಗೆರೆ : : ಗೌರಿ-ಗಣೇಶ ವಿಸರ್ಜನೋತ್ಸವ ಸಂದರ್ಭ ಹಿಂಜಲಗೆರೆ ಕಲ್ಲುಕೋರೆ ಬಳಿಯ ಬದ್ರಿಯಾ ಮಸೀದಿ ಕಮಿಟಿ ವತಿಯಿಂದ ಭಕ್ತಾದಿಗಳಿಗೆ ಬಾದಾಮಿ ಹಾಲು ಬಿಸ್ಕೆಟ್ ಗಳನ್ನು ವಿತರಿಸಿ ಪರಸ್ಪರ ಸೌಹಾರ್ದತೆ ಮೆರೆದರು.