ಮಡಿಕೇರಿ ಸೆ.11 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲ್ಲೂಕು ಕಸಾಪ ಮತ್ತು ಮೂರ್ನಾಡು ಪದವಿ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಸೆ.14 ರಂದು ಕನ್ನಡ ಸಾಹಿತ್ಯ ಪರಿಷತ್ತಿನ ಮೂರ್ನಾಡು ಹೋಬಳಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ ವಿಷಯ ಸಂಕಲನ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಮೂರ್ನಾಡು ಪದವಿ ಪೂರ್ವ ಕಾಲೇಜಿನ ಕಾವೇರಿ ಸಭಾಂಗಣದಲ್ಲಿ ಪೂರ್ವಾಹ್ನ 10.30 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಕಾಲೇಜಿನ ಅಧ್ಯಕ್ಷ ಡಾ.ಚೌರೀರ ಜಗತ್ ತಿಮ್ಮಯ್ಯ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕಸಾಪ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ವಹಿಸಲಿದ್ದಾರೆ. ನಿಯೋಜಿತ ಹೋಬಳಿ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ್, ಪುಸ್ತಕ ಬಿಡುಗಡೆ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಪಿ.ಎಂ.ದೇವಕ್ಕಿ, ಸಾಹಿತಿ ಗೌರಮ್ಮ ಮಾದಮಯ್ಯ ವಿಷಯ ಸಂಕಲನ ಲೇಖಕರು, ಮಡಿಕೇರಿ ಗ್ರಾಮಾಂತರ ವೃತ್ತ ನಿರೀಕ್ಷ ಪಿ.ಅನೂಪ್ ಮಾದಪ್ಪ “ಸಂಚಾರ ನಿಯಮ ಹಾಗೂ ಕಾನೂನು” ವಿಷಯದ ಕುರಿತು ಉಪನ್ಯಾಸ ನೀಡಲಿದ್ದು, ಕೊಡಗು ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಪ್ರಮಾಣ ವಚನ ಬೋಧನೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಡಿಕೇರಿ ತಾಲ್ಲೂಕು ಕಸಾಪ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್, ಕಸಾಪ ಮೂರ್ನಾಡು ಹೋಬಳಿ ನಿಕಟಪೂರ್ವ ಅಧ್ಯಕ್ಷ ಕೆ.ಕೆ.ಸುಕುಮಾರ್, ಮಾಜಿ ಅಧ್ಯಕ್ಷ ಡಾ.ಮೇಚೀರ ಸುಭಾಷ್ ನಾಣಯ್ಯ, ಅತಿಥಿಗಳಾಗಿ ಮೂರ್ನಾಡು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಧಿಕಾರಿ ಡಾ. ಎಸ್.ಪಿ.ವಿಜಯ್ ಕುಮಾರ್ ಪಾಲ್ಗೊಳ್ಳಲಿದ್ದಾರೆ.