ಮಡಿಕೇರಿ NEWS DESK ಸೆ.11 : ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯು ನಗರದ ಅರಣ್ಯ ಭವನದಲ್ಲಿ ಬುಧವಾರ ನಡೆಯಿತು. ನಾಡಿನ ಅರಣ್ಯ ಮತ್ತು ವನ್ಯಜೀವಿ ಸಂಪತ್ತು ಸಂರಕ್ಷಿಸುವ ಸಂದರ್ಭದಲ್ಲಿ ಪ್ರಾಣತ್ಯಾಗ ಮಾಡಿದ ಅರಣ್ಯ ಇಲಾಖೆಯ ಹುತಾತ್ಮರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು. ಕೊಡಗು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್ ತ್ರಿಪಾಟಿ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಭಾಸ್ಕರ್ ಬಿ, ವಿರಾಜಪೇಟೆ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ ಎನ್.ಎಚ್., ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎ.ನೆಹರು, ಅರಣ್ಯ ಸಂಚಾರಿದಳದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸೈಯದ್ ಅಹಮದ್ ಷಾ ಹುಸೈನಿ, ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂದೀಪ್ ಪಿ.ಅಭಯಂಕರ್ ಇತರರು ಅರಣ್ಯ ಹುತಾತ್ಮ ಸ್ಮಾರಕಕ್ಕೆ ಹೂಗುಚ್ಛ ಸಮರ್ಪಿಸಿ, ಗೌರವ ಸಲ್ಲಿಸಿದರು. ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಭಾಸ್ಕರ್ ಬಿ ಅವರು ಅರಣ್ಯ ಹುತಾತ್ಮರಾದವರ ಹೆಸರನ್ನು ಇದೇ ಸಂದರ್ಭದಲ್ಲಿ ವಾಚಿಸಿದರು. ಮತ್ತಷ್ಟು ಮಾಹಿತಿ: ಭಾರತ ಸರ್ಕಾರದ ಪರಿಸರ ಜೀವಿಶಾಸ್ತç ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ನಿರ್ದೇಶನದ ಮೇರೆಗೆ ಸೆಪ್ಟೆಂಬರ್, 11 ರಂದು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ, ದೇಶದ ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗಾಗಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಮಾಡಿದ ತ್ಯಾಗ ಮತ್ತು ಬಲಿದಾನಗಳ ಸ್ಮರಣೆಗಾಗಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯನ್ನು ದೇಶದಾದ್ಯಂತ ಆಚರಿಸಲಾಗುತ್ತಿದೆ. 1730ರ ಸೆಪ್ಟೆಂಬರ್, 11 ರಂದು ಜೋಧಪುರ್‌ನ ಮಹಾರಾಜ ಅಭಯಸಿಂಗ್‌ನ ಹೊಸ ಅರಮನೆ ನಿರ್ಮಾಣಕ್ಕೆ ಕೆಜ್ರಿ ಪ್ರಾಂತ್ಯದಲ್ಲಿ ಬೆಳೆದಿದ್ದ ಮರಗಳನ್ನು ಕಡಿಯಲು ವಿರೋಧಿಸಿದ ಬಿಷ್ಣೋಯಿ ಸಮುದಾಯದ 363 ಪುರುಷ, ಮಹಿಳೆ ಮತ್ತು ಮಕ್ಕಳನ್ನು ಸೈನಿಕರಿಂದ ಹತ್ಯೆಗಯ್ಯಲಾಯಿತು. ಮರಗಳ ಸಂರಕ್ಷಣೆಗಾಗಿ ಬಲಿದಾನ ಹೊಂದಿದ ಬಷ್ಣೋಯಿಗಳ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸಲು ಭಾರತ ಸರ್ಕಾರ ಈ ದಿನವನ್ನು ರಾಷ್ಟಿçÃಯ ಅರಣ್ಯ ಹುತಾತ್ಮರ ದಿನವೆಂದು ಘೋಷಿಸಿದೆ. ಇಂತಹ ಆದರ್ಶ ವ್ಯಕ್ತಿಗಳಲ್ಲಿ ಭಾರತೀಯ ಅರಣ್ಯ ಸೇವೆಯ ಅಧಿಕಾರಿಯಾಗಿದ್ದ ದಿವಂಗತ ಪಿ.ಶ್ರೀನಿವಾಸ್ ಅವರು ಒಬ್ಬರು. ಕಾಡಿಗಾಗಿ ಜನನ, ಕಾಡಿಗಾಗಿ ಜೀವನ, ಕಾಡಿಗಾಗಿ ಮರಣ ಎಂಬುದನ್ನೇ ತತ್ವಗಳನ್ನಾಗಿ ಇಟ್ಟುಕೊಂಡಿದ್ದ ದಿವಂಗತ ಪಿ.ಶ್ರೀನಿವಾಸ್ ಅವರು ದಂತಜೋರ ಮತ್ತು ಕುಖ್ಯಾತ ಶ್ರೀಗಂಧ ಕಳ್ಳಸಾಗಾಣಿಕೆದಾರ ವೀರಪ್ಪನ್‌ನ ನಯವಂಚನೆ ಚಕ್ರವ್ಯೂಹದಲ್ಲಿ ಸಿಲುಕಿ 1991ರ ನವೆಂಬರ್, 10 ರಂದು ವಿಧಿವಶರಾದರು. ದಿವಂಗತ ಪಿ.ಶ್ರೀನಿವಾಸ್ ಅವರ ಕಾರ್ಯದಕ್ಷತೆಯನ್ನು ಮೆಚ್ಚಿ ಭಾರತ ಸರ್ಕಾರವು ಅವರಿಗೆ ‘ಕೀರ್ತಿಚಕ್ರ’ ಶೌರ್ಯ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಿ ಗೌರವಿಸಿದೆ. ಇದೇ ರೀತಿ ತಮ್ಮ ಜೀವದ ಹಂಗನ್ನು ತೊರೆದು ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಗಾಗಿ ಇಲ್ಲಿಯವರೆಗೆ 61 ಅರಣ್ಯ ಅಧಿಕಾರಿ/ ಸಿಬ್ಬಂದಿಗಳು ಹುತಾತ್ಮರಾಗಿರುತ್ತಾರೆ. ಕಳೆದ ಒಂದು ವರ್ಷದಲ್ಲಿ ಅರಣ್ಯ ಮತ್ತು ವನ್ಯಜೀವಿ ರಕ್ಷಣೆಯಲ್ಲಿ ತೊಡಗಿರುವಾಗ 4 ಸಿಬ್ಬಂದಿಗಳು ತಮ್ಮ ಪ್ರಾಣ ತ್ಯಾಗ ಮಾಡಿರುತ್ತಾರೆ. 2023 ರ ಸೆಪ್ಟೆಂಬರ್, 04 ರಂದು ಮಡಿಕೇರಿ ವಿಭಾಗದ ಹೊರಗುತ್ತಿಗೆ ನೌಕರರಾದ ಎಂ.ವೈ.ಗಿರೀಶ್ ಅವರು ಸಿಬ್ಬಂದಿಗಳ ಜೊತೆ ಕಾಡಾನೆಯನ್ನು ಕಾಡಿಗೆ ಹಿಮ್ಮೆಟ್ಟಿಸಲು ಹೋದಾಗ ಈ ಕಾಡಾನೆಯು ದಿಕ್ಕನ್ನು ಬದಲಿಸಿ ಸಿಬ್ಬಂದಿಯವರಿಂದ ಕಡೆಗೆ ದಾಳಿ ಮಾಡಲು ಮುಂದಾಗುತ್ತಿದ್ದಂತೆ ಸಿಬ್ಬಂದಿಯವರೆಲ್ಲರೂ ಕಾಡಾನೆ ದಾಳಿಯಿಂದ ತಪ್ಪಿಸಿಕೊಂಡು ಓಡಿದ್ದು, ಇವರು ತಪ್ಪಿಸಿಕೊಳ್ಳಲು ಸಾಧ್ಯವಾಗದೇ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟಿರುತ್ತಾರೆ. ಅರಣ್ಯ ಇಲಾಖೆಯಲ್ಲಿ ಕ್ಲಿಷ್ಟಕರ ಸನ್ನಿವೇಶಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರಣ್ಯ ರಕ್ಷಕ, ಅರಣ್ಯ ವೀಕ್ಷಕ/ ಕಾವಲುಗಾರ, ಉಪ ವಲಯ ಅರಣ್ಯಾಧಿಕಾರಿ ಹಾಗೂ ವಲಯ ಅರಣ್ಯಾಧಿಕಾರಿಗಳಿಗೆ ಮಾತ್ರ ಅನ್ವಯವಾಗುವಂತೆ ಕರ್ತವ್ಯದಲ್ಲಿರುವಾಗ ಮರಣ ಹೊಂದಿದರೆ ನೀಡಲಾಗುತ್ತಿದ್ದ ಪರಿಹಾರವನ್ನು ಘನ ಸರ್ಕಾರ ರೂ.20 ಲಕ್ಷಗಳಿಂದ ರೂ. 30 ಲಕ್ಷಗಳಿಗೆ ಕಳೆದ ಸಾಲಿನಿಂದ ಪರಿಷ್ಕರಿಸಿರುತ್ತದೆ. ಈ ಹುತಾತ್ಮರ ದಿನಾಚರಣೆಯನ್ನು ರಾಜ್ಯದ ಕೇಂದ್ರ ಸ್ಥಾನದಲ್ಲಿಯೇ ಅಲ್ಲದೇ ಎಲ್ಲಾ ಅರಣ್ಯ ವಿಭಾಗಗಳ ಕೇಂದ್ರ ಸ್ಥಾನಗಳಲ್ಲಿಯೂ ಆಚರಿಸಲಾಗುತ್ತಿದೆ.