ಮೂರ್ನಾಡು ಸೆ.12 NEWS DESK : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕೋಡಂಬೂರಿನ ಜ್ಞಾನಜ್ಯೋತಿ ಎಜುಕೇಷಟಿನ್ ಸೊಸೈಟಿಯ ಸಂಯುಕ್ತಾಶ್ರಯದಲ್ಲಿ ಪ್ರಸಕ್ತ ಸಾಲಿನ ಮಡಿಕೇರಿ ತಾಲ್ಲೂಕು ಮಟ್ಟದ ಅಂತರ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಬಾಲಕ, ಬಾಲಕಿಯರ ಕ್ರೀಡಾಕೂಟವು ಮೂರ್ನಾಡು ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆಯಿತು. ಮಡಿಕೇರಿ ತಾಲ್ಲೂಕು ಮಟ್ಟದ ಕ್ರೀಡಾಕೂಟ ಸಮಾರಂಭವನ್ನು ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಎಸ್.ಕುಶನ್ ರೈ ಉದ್ಘಾಟಿಸಿ ಮಾತನಾಡಿ, ಕ್ರೀಡಾಪಟುಗಳಲ್ಲಿ ಕ್ರೀಡಾ ಮನೋಭಾವ ಮತ್ತು ಶಿಸ್ತು ಇರಬೇಕು ಎಂದು ಹೇಳಿದರು. ಜ್ಞಾನಜ್ಯೋತಿ ಎಜುಕೇಷನ್ ಸೊಸೈಟಿಯ ಅಧ್ಯಕ್ಷ ಮುಕ್ಕಾಟಿರ ರವಿ ಚೀಯಣ್ಣ ಕ್ರೀಡಾ ಧ್ವಜಾರೋಹಣ ನೇರವೇರಿಸಿ, ಮಾತನಾಡಿ, ಓದು ಎಷ್ಟು ಮುಖ್ಯವೊ ಅಷ್ಟೆ ಕ್ರೀಡೆಯು ವಿದ್ಯಾರ್ಥಿಗಳಿಗೆ ಮುಖ್ಯವಾಗಿದೆ. ಕ್ರೀಡೆಯಲ್ಲಿಯೂ ಉತ್ತಮ ಭವಿಷ್ಯವನ್ನು ಕಂಡುಕೊಳ್ಳಬಹುದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಜ್ಞಾನಜ್ಯೋತಿ ಎಜುಕೇಷನ್ ಸೊಸೈಟಿಯ ನಿವೃತ್ತ ಮುಖ್ಯೋಪಾಧ್ಯಾಯಿನಿ ಶೀಲಾ ಅಬ್ದುಲ್ಲಾ, ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಬಿ.ಸಿ.ದೊಡ್ಡೇಗೌಡ ಮತ್ತು ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಬಿ.ಆರ್.ಗಾಯಿತ್ರಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಪೊನ್ನಚ್ಚನ ಶ್ರೀನಿವಾಸ್, ಗ್ರೇಡ್-2ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾ ಹಾಗೂ ಮಡಿಕೇರಿ ತಾಲ್ಲೂಕಿನ ಅಧ್ಯಕ್ಷ ಬಿ.ಟಿ.ಪೂರ್ಣೇಶ್, ಕರ್ನಾಟಕ ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘದ ಮಡಿಕೇರಿ ತಾಲ್ಲೂಕು ಅಧ್ಯಕ್ಷ ಮೋಹನ್ ಪೆರಾಜೆ, ಮಡಿಕೇರಿ ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಅಧ್ಯಕ್ಷ ಕೆ.ಜಿ. ಅಶೋಕ್, ಸರ್ಕಾರಿ ಪ್ರೌಢ ಶಾಲಾ ಗ್ರೇಡ್-1 ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಮಡಿಕೇರಿ ತಾಲ್ಲೂಕು ಸಂಘದ ಅಧ್ಯಕ್ಷ ಪಿ.ಎಂ.ಕಿರಣ್, ಮಡಿಕೇರಿ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಕೆ.ಪಿ.ಗುರುರಾಜ್, ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಬಡುವಂಡ ಬೆಲ್ಲುಚಿಣ್ಣಪ್ಪ, ಕಾರ್ಯದರ್ಶಿ ಬಡುವಂಡ ಬೋಪಣ್ಣ, ಖಜಾಂಚಿ ಎನ್.ಒ.ಮ್ಯಾಥ್ಯು, ನಿರ್ದೇಶಕರಾದ ಮಾಳೇಟಿರ ನವೀನ್ ಕಾರ್ಯಪ್ಪ, ಡಾ. ಜೆ.ಎ.ಕುಂಞಅಬ್ದುಲ್ಲಾ, ಬಡುವಂಡ ವಿಜಯ, ಅವರೆಮಾದಂಡ ಸುಗುಣ ಸುಬ್ಬಯ್ಯ ಮತ್ತು ಶಾಲಾ ಮುಖ್ಯ ಶಿಕ್ಷಕಿ ಶಿಲ್ಪ ಪೆÇನ್ನಮ್ಮ ಹಾಜರಿದ್ದರು. ಸಮಾರಂಭದ ಮೊದಲು ಮೂರ್ನಾಡು, ಮಡಿಕೇರಿ, ನಾಪೋಕ್ಲು ಮತ್ತು ಭಾಗಮಂಡಲ ವಲಯದ ಕ್ರೀಡಾಪಟುಗಳಿಂದ ಪಥಸಂಚಲನ ವೀಕ್ಷಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಬಿ.ಸಿ.ದೊಡ್ಡೇಗೌಡ ಮತ್ತು ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಬಿ.ಆರ್. ಗಾಯಿತ್ರಿ ಗೌರವ ವಂದನೆ ಸ್ವೀಕರಿಸಿದರು. ನಾಲ್ಕು ವಲಯದ ಕ್ರೀಡಾಪಟುಗಳು ವಿವಿಧ ಮೇಲಾಟಗಳಲ್ಲಿ ಪಾಲ್ಗೊಂಡು ಪಾರಿತೋಷಕ ಮತ್ತು ಪ್ರಶಸ್ತಿ ಪತ್ರಗಳನ್ನು ಪಡೆದುಕೊಂಡರು. ಜ್ಞಾನ ಜ್ಯೋತಿ ಶಾಲಾ ಶಿಕ್ಷಕಿ ಬಿ.ಎನ್. ಕವಿತ ಕಾರ್ಯಕ್ರಮ ನಿರೂಪಿಸಿ, ಡಾ.ಬಿ.ಸಿ.ದೊಡ್ಡೇಗೌಡ ಸ್ವಾಗತಿಸಿ, ಕೆ.ಬಿ.ಅಶೋಕ್ ವಂದಿಸಿದರು.
ವರದಿ: ಟಿ.ಸಿ.ನಾಗರಾಜ್, ಮೂರ್ನಾಡು