



ಮಡಿಕೇರಿ ಸೆ.12 NEWS DESK : ಇಂಚರ ಶ್ರೀ ಶಕ್ತಿ ಸಂಘದ 10ನೇ ವಾರ್ಷಿಕೋತ್ಸವದ ಪ್ರಯುಕ್ತ ನಗರದ ರಾಘವೇಂದ್ರ ದೇವಾಲಯದ ಬಳಿ ಇರುವ ಅಂಗನವಾಡಿ ಕೇಂದ್ರದಲ್ಲಿ ಅಡುಗೆ ಸ್ಪರ್ಧೆಯ ಮೂಲಕ ವಿನೂತನವಾಗಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಾಂಡ ಸವಿತಾ ಕೀರ್ತನ್ ಉದ್ಘಾಟಿಸಿ ಮಾತಾಡಿ ಪೌಷ್ಟಿಕ ಆಹಾರದ ಬಗ್ಗೆ ಅರಿವು ಮೂಡಿಸಿದರು. ಪೌಷ್ಟಿಕ ಆಹಾರ ನಮ್ಮ ದೈನಂದಿನ ಜೀವನದಲ್ಲಿ ತುಂಬಾ ಮುಖ್ಯವಾಗಿದೆ.ಆರೋಗ್ಯಕರ ಜೀವನ ನಡೆಸಲು ಇಂತಹ ಆಹಾರ ತುಂಬಾ ಅವಶ್ಯಕ ಎಂದರು. ಕಾರ್ಯಕ್ರಮದಲ್ಲಿ ಇಂಚರ ಶ್ರೀ ಶಕ್ತಿ ಸಂಘದ ಪದಾಧಿಕಾರಿಗಳು, ಸಹಾಯಕಿ ಅನಿತಾ ಪಾಲ್ಗೊಂಡಿದ್ದರು. ಅಂಗನವಾಡಿ ಕಾರ್ಯಕರ್ತೆ ಗೀತಾ ಕಾರ್ಯಕ್ರಮ ನಿರೂಪಿಸಿದರು. ಇದೇ ಸಂದರ್ಭ ಮಾತೃ ವಂದನ ನೊಂದಣಿ ಕಾರ್ಯಕ್ರಮ ನಡೆಯಿತು.