ಮಡಿಕೇರಿ ಸೆ.12 NEWS DESK : ತಾಳತ್ತಮನೆಯಲ್ಲಿ ಸೆ.13 ರಂದು ಉಚಿತ ರೇಬಿಸ್ (ಹುಚ್ಚು ನಾಯಿ) ಲಸಿಕಾ ಶಿಬಿರ ನಡೆಯಲಿದೆ.
ಜಿಲ್ಲಾ ಪಂಚಾಯಿತಿ, ಕೊಡಗು ಪಶು ಪಲನಾ ಹಾಗೂ ಪಶು ವೈದ್ಯಕೀಯ ಇಲಾಖೆ, ಮಡಿಕೇರಿ ನೆಹರು ಯುವ ಕೇಂದ್ರ, ಮಡಿಕೇರಿ ತಾಲೂಕು ಯುವ ಒಕ್ಕೂಟ, ತಾಳತ್ತಮನೆ ನೇತಾಜಿ ಯುವತಿ ಮಂಡಳಿ ಹಾಗೂ ನೇತಾಜಿ ಯುವಕ ಮಂಡಲದ ಸಂಯುಕ್ತಶ್ರಾಯದಲ್ಲಿ ಬೆಳಿಗ್ಗೆ 9.30 ರಿಂದ 11.30 ಗಂಟೆಯವರೆಗೆ ತಾಳತ್ತಮನೆ ಆಟದ ಮೈದಾನದಲ್ಲಿ ಶಿಬಿರ ನಡೆಯಲಿದ್ದು, ತಾಳತ್ತಮನೆಯ ಹಾಗೂ ಸುತ್ತಮುತ್ತಲಿನ ಜನರು ತಮ್ಮ ಸಾಕು ಪ್ರಾಣಿಗಳನ್ನು ತರುವಂತೆ ನೇತಾಜಿ ಯುವಕ ಮಂಡಲದ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಮನವಿ ಮಾಡಿದ್ದಾರೆ.