
ಮಡಿಕೇರಿ ಸೆ.13 NEWS DESK : ಪ್ರಸಕ್ತ (2024-25) ಸಾಲಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳಿಂದ ಪರಿಶಿಷ್ಟ ಜಾತಿಯ ಜನರ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಆಯಾಯ ನಿಗಮದ ವ್ಯಾಪ್ತಿಯಲ್ಲಿ ಬರುವ ಸಮುದಾಯಗಳು ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು ವೆಬ್‍ಸೈಟ್ ವಿಳಾಸ https://sevasindhu.karnataka.gov.in ನಲ್ಲಿ ಸಲ್ಲಿಸಬೇಕು. ಸ್ವಯಂ ಉದ್ಯೋಗ ನೇರ ಸಾಲ ಯೋಜನೆ : ಅರ್ಹ ನಿರುದ್ಯೋಗಿ ಅಭ್ಯರ್ಥಿಗಳಿಗೆ ವಿವಿಧ ಆರ್ಥಿಕ ಗಳಿಕೆಯ ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಳ್ಳಲು ಸಣ್ಣ ಆದಾಯಗಳಿಸಲು ಆರ್ಥಿಕ ಚಟುವಟಿಕೆಗಳಿಗೆ ನಿಗಮಗಳಿಂದ ನೇರ ಸಾಲ (ಗರಿಷ್ಠ ವೆಚ್ಚ ರೂ.1 ಲಕ್ಷ, ಅದರಲ್ಲಿ ಶೇ.50 ಸಾಲ ಮತ್ತು ಶೇ.50 ಸಹಾಯಧನ (ಶೇ.4ರಷ್ಟು ಬಡ್ಡಿ ದರ). ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ(ಬ್ಯಾಂಕುಗಳ ಸಹಯೋಗದೊಂದಿಗೆ) : ವ್ಯಾಪಾರ ಮತ್ತು ಇತರೆ ಉದ್ಯಮಗಳಿಗೆ ಘಟಕ ವೆಚ್ಚದ ಶೇ.70 ರಷ್ಟು ಸಹಾಯಧನ ಅಥವಾ ಗರಿಷ್ಠ ರೂ.1 ಲಕ್ಷ ಮತ್ತು ಘಟಕ ವೆಚ್ಚದ ಶೇ.70 ರಷ್ಟು ಸಹಾಯಧನ ಅಥವಾ ಗರಿಷ್ಠ ರೂ.2 ಲಕ್ಷ ಸಹಾಯಧನ ನೀಡಲಾಗುತ್ತದೆ. ಉಳಿದ ಮೊತ್ತ ಬ್ಯಾಂಕ್ ಸಾಲವಾಗಿರುತ್ತದೆ.
ಸ್ವಾವಲಂಬಿ ಸಾರಥಿ : ಸರಕು ವಾಹನ/ಟ್ಯಾಕ್ಸಿ(ಹಳದಿ ಬೋರ್ಡ್) ಖರೀದಿಸುವ ಉದ್ದೇಶಕ್ಕೆ, ಘಟಕ ವೆಚ್ಚ ಶೇ.75 ರಷ್ಟು ಸಹಾಯಧನ ಅಥವಾ ಗರಿಷ್ಠ ರೂ.4 ಲಕ್ಷ
ಮೈಕ್ರೋ ಕ್ರೆಡಿಟ್ ಯೋಜನೆ(ನೋಂದಾಯಿತ ಸ್ವ-ಸಹಾಯ ಮಹಿಳಾ ಸಂಘಗಳು) ; ಮಹಿಳೆಯರಲ್ಲಿ ಗುಂಪು ಆರ್ಥಿಕ ಚಟುವಟಿಕೆಗೆ ಉತ್ತೇಜನ ನೀಡಿ ಆದಾಯ ಗಳಿಸಲು ಅನುಕೂಲವಾಗುವಂಎ ಕನಿಷ್ಠ 10 ಸದಸ್ಯರಿರುವ ಮಹಿಳಾ ಸ್ವಸಹಾಯ ಸಂಘಗಳಿಗೆ ರೂ.2.50 ಲಕ್ಷಗಳನ್ನು ಮಂಜೂರು ಮಾಡಲಾಗುವುದು. ಇದರಲ್ಲಿ ರೂ.1.50 ಲಕ್ಷ ಸಹಾಯಧನ ಮತ್ತು ರೂ.1 ಲಕ್ಷ ಸಾಲ(ಶೇ.4 ರಷ್ಟು ಬಡ್ಡಿ ದರ).
ಗಂಗಾ ಕಲ್ಯಾಣ ಯೋಜನೆ : 1.20 ಎಕರೆಯಿಂದ 5 ಎಕರೆ ಜಮೀನು ಹೊಂದಿರುವ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಕೊಳವೆ ಬಾವಿ ಕೊರೆದು ಪಂಪ್‍ಸೆಟ್ ಅಳವಡಿಸಿ ವಿದ್ಯುದ್ದೀಕರಣಗೊಳಿಸಿ ನೀರಾವರಿ ಸೌಲಭ್ಯ ಒದಗಿಸಲಾಗುವುದು ಘಟಕ ವೆಚ್ಚ ರೂ.3.75 ಲಕ್ಷ(ಇದರಲ್ಲಿ ರೂ.50 ಸಾವಿರ ಸಾಲವೂ ಸೇರಿರುತ್ತದೆ).
ಭೂ ಒಡೆತನ ಯೋಜನೆ : ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಕನಿಷ್ಠ ಒಂದು ಎಕರೆ ಭಾಗಾಯ್ತು ಅಥವಾ ಎರಡು ಎಕರೆ ಖುಷ್ಕಿ ಜಮೀನನ್ನು ಖರೀದಿಸಿ ಕೊಡಲಾಗುವುದು. ಘಟಕ ವೆಚ್ಚ ರೂ.25 ಲಕ್ಷ ರೂ/ 20 ಲಕ್ಷ ಸಹಾಯಧನ ಶೇ.50 ಸಾಲ ಶೇ.50(ಶೇ.6 ರಷ್ಟು ಬಡ್ಡಿದರ).
ಯೋಜನೆಗಳ ಹೆಚ್ಚಿನ ಮಾಹಿತಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ https://adcl.karnataka.gov.in, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ https://adijambava.karnataka.gov.in, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ https://www.kbdc.karnataka.gov.in ಮತ್ತು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮ https://kssksc.kar.nic.in/ ನಿಗಮದ ಈ ವೆಬ್‍ಸೈಟ್ ಮೂಲಕ ಪಡೆದುಕೊಳ್ಳುವುದು. ಫಲಾಪೇಕ್ಷಿಗಳು ಆನ್‍ಲೈನ್ ಮೂಲಕ ಅರ್ಜಿ ಮತ್ತು ದಾಖಲಾತಿಗಳನ್ನು ಸುವಿದಾ ತಂತ್ರಾಂಶದ ವೆಬ್‍ಸೈಟ್ ವಿಳಾಸ https://sevasindhu.karnataka.gov.in ಮೂಲಕ ಅಪ್‍ಲೋಡ್ ಮಾಡಿ ಅರ್ಜಿಯನ್ನು ಅಕ್ಟೋಬರ್, 10 ರೊಳಗೆ ಸಲ್ಲಿಸಿ ಒಂದು ಪ್ರತಿಯನ್ನು ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕೊಡಗು ಜಿಲ್ಲೆ-571201 ದೂ.ಸಂ. 08272-228857 ನ್ನು ಸಂಪರ್ಕಿಸಬಹುದು ಎಂದು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.








