ಮಡಿಕೇರಿ NEWS DESK ಸೆ.13 : ಕೊಡಗು ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ ಮೋರ್ಚಾದ ಸದಸ್ಯತ್ವ ಅಭಿಯಾನ ಮತ್ತು ಕಾರ್ಯಕಾರಿಣಿ ಸಭೆ ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಮೋರ್ಚಾದ ಜಿಲ್ಲಾಧ್ಯಕ್ಷ ಅಪ್ರು ರವೀಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸದಸ್ಯತ್ವ ಅಭಿಯಾನದೊಂದಿಗೆ ಪಕ್ಷ ಸಂಘಟನೆಯ ಕುರಿತು ಚರ್ಚಿಸಿ, ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಸಂಯೋಜಕರಾಗಿ ವಸಂತ್ ಕುಮಾರ್ ಸಿದ್ದಾಪುರ, ಸಹ ಸಂಯೋಜಕರಾಗಿ ಸುರೇಶ್ ಬಿ.ಜೆ, ಕಾರ್ಯಕಾರಿಣಿ ಸದಸ್ಯರಾಗಿ ಅಕ್ಷಿತ್ ಪೂಜಾರಿ, ಪ್ರದೀಪ್ ಪೆರಾಜೆ ಹಾಗೂ ಸಾಮಾಜಿಕ ಜಾಲತಾಣದ ಮುಖ್ಯಸ್ಥರನ್ನಾಗಿ ವಿಠಲ್ ಪೂಜಾರಿ ಹಾಕತ್ತೂರು ಅವರನ್ನು ಆಯ್ಕೆ ಮಾಡಲಾಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಅಪ್ರು ರವೀಂದ್ರ ಅವರು ಪಕ್ಷದ ಬಲವರ್ಧನೆಗೆ ಎಲ್ಲರೂ ಕೈಜೋಡಿಸಬೇಕು, ಸದಸ್ಯತ್ವವನ್ನು ಹೆಚ್ಚು ಮಾಡಬೇಕು ಎಂದು ಕರೆ ನೀಡಿದರು. ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಹಾಗೂ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಅವರು ಮಾತನಾಡಿದರು. ಸಭೆಯಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ಉಪಾಧ್ಯಕ್ಷ ವಿಠಲ್ ಪೂಜಾರಿ, ಕಾರ್ಯದರ್ಶಿ ನಾರಾಯಣ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ವಿ.ಕೆ.ಲೋಕೇಶ್, ಮಹೇಶ್ ಜೈನಿ, ವಕ್ತಾರ ಬಿ.ಕೆ.ಅರುಣ್ ಕುಮಾರ್, ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ವಿನೋದ್ ಪೂಜಾರಿ, ರಘು, ಮಡಿಕೇರಿ ನಗರಾಧ್ಯಕ್ಷ ಉಮೇಶ್ ಸುಬ್ರಮಣಿ, ಜಿಲ್ಲಾ ಪದಾಧಿಕಾರಿಗಳು, ಸರ್ವ ಕಾರ್ಯಕಾರಿಣಿ ಸದಸ್ಯರು, ನಾಲ್ಕು ಮಂಡಲಗಳ ಅಧ್ಯಕ್ಷರು ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು. ಭವ್ಯ ನಿರೂಪಿಸಿ, ಸುದೇಶ್ ಪುಲೇರಿ ಸ್ವಾಗತಿಸಿ, ವಿನೋದ್ ಪೂಜಾರಿ ವಂದಿಸಿದರು.











