ಸುಂಟಿಕೊಪ್ಪ ಸೆ.14 NEWS DESK : ವಿಶ್ವ ಹಿಂದೂ ಪರಿಷತ್ ಮತ್ತು ಗೌರಿ ಗಣೇಶೋತ್ಸವ ಸಮಿತಿ ವತಿಯಿಂದ ರಾಮಮಂದಿರದಲ್ಲಿ ನಡೆಯುತ್ತಿರುವ 60ನೇ ವರ್ಷದ ಗೌರಿ ಗಣೇಶೋತ್ಸವದ ಅಂಗವಾಗಿ ಮಹಿಳೆಯರು ಮತ್ತು ಮಕ್ಕಳಿಗೆ ರಂಗೋಲಿ, ಮಡಿಕೆ ಒಡೆಯುವ ಸ್ಪರ್ಧೆ ನಡೆಯಿತು. ಸುಂಟಿಕೊಪ್ಪದ ಮಂಜನಾಥಯ್ಯ ಮಿನಾಕ್ಷಮ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಿಳೆಯರು ಯುವತಿಯರು, ಮಕ್ಕಳು ಉತ್ಸಾಹದಿಂದ ಪಾಲ್ಗೊಂಡಿದ್ದರು.
ರಂಗೋಲಿ ಸ್ಪರ್ಧೆಯಲ್ಲಿ ಸ್ವಾತಿ ಪ್ರಥಮ, ಲಿಖಿತ ದ್ವಿತೀಯ, ಮಡಿಕೆ ಒಡೆಯುವ ಸ್ಪರ್ಧೆಯ ಪ್ರಾಥಮಿಕ ವಿಭಾಗದಲ್ಲಿ ಮೌಲ್ಯ ಪ್ರಥಮ, ಮಹಿಳೆಯರ ವಿಭಾಗದಲ್ಲಿ ಲೀಲಾವತಿ ಪ್ರಥಮ ಬಹುಮಾನ ಪಡೆದುಕೊಂಡರು. ಸ್ಪೂನ್ ನಲ್ಲಿ ನಿಂಬೆಹಣ್ಣು ಸ್ಪರ್ಧೆಯ ಪ್ರಾಥಮಿಕ ವಿಭಾಗದಲ್ಲಿ ತನ್ವಿಕ ಪ್ರಥಮ, ಮೌಲ್ಯ ದ್ವಿತೀಯ, ವಂಶಿನಿ ತೃತೀಯ ಬಹುಮಾನ ಪಡೆದುಕೊಂಡರು. ಪ್ರೌಢಶಾಲಾ ವಿಭಾಗದಲ್ಲಿ ಲಿಖಿತ ಪ್ರಥಮ, ಡ್ಯಾನಿಲ್ ದ್ವಿತೀಯ, ಮಹಿಳೆಯರ ವಿಭಾಗದಲ್ಲಿ ಜಯಶ್ರೀ ಪ್ರಥಮ, ಶೀಲಾ ದ್ವಿತೀಯ, ಅಶ್ವಿನಿ ತೃತೀಯ ಬಹುಮಾನವನ್ನು ಪಡೆದುಕೊಂಡರು.










