


ಮಡಿಕೇರಿ NEWS DESK ಸೆ.14 : ನಗರದ ಅಶೋಕಪುರ ಗಣೇಶ ಉತ್ಸವ ಸಮಿತಿಯ ವತಿಯಿಂದ ಗಣೇಶ ಮೂರ್ತಿ ವಿಸರ್ಜನೆ ಅಂಗವಾಗಿ ವಿವಿಧ ಕಾರ್ಯಕ್ರಮ ಆಯೋಜಿಸಿದೆ. 50ನೇ ವರ್ಷದ ಸಂಭ್ರಮಾಚರಣೆ ಹಿನ್ನೆಲೆ ಸೆ.15 ರಂದು ಬೆಳಿಗ್ಗೆ ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ಅಶೋಕಪುರದ ನಿವಾಸಿಗಳಿಗೆ ಆಟೋಟ ಸ್ಪರ್ಧೆ, ಸೆ.16 ರಂದು ಅಂಬೇಡ್ಕರ್ ಭವನದಲ್ಲಿ ನಾಗರಹೊಳೆಯ ನಾಣಚ್ಚಿ ಹಾಡಿ ಕಲಾತಂಡದಿಂದ ನೃತ್ಯ ಕಾರ್ಯಕ್ರಮ, ಸೆ.17 ರಂದು ಸಭಾ ಕಾರ್ಯಕ್ರಮ ಹಾಗೂ ಅಶೋಕ ಪುರದ ನಿವಾಸಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಗಣೇಶೋತ್ಸವ ಸಮಿತಿ ಅಧ್ಯಕ್ಷ ಎಂ.ಜಿ. ಸುನಿಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








