
ನಾಪೋಕ್ಲು ಫೆ.14 NEWS DESK : ಮೂರ್ನಾಡುವಿನಲ್ಲಿ ನಡೆದ ಮಡಿಕೇರಿ ತಾಲ್ಲೂಕು ಮಟ್ಟದ ಪ್ರೌಢಶಾಲಾ ಅಥ್ಲೆಟಿಕ್ಸ್ ಸ್ಪರ್ಧೆಯ ಭಾರದ ಗುಂಡು ಎಸೆತ ಸ್ಪರ್ಧೆಯಲ್ಲಿ ಕಕ್ಕಬ್ಬೆ ಶಾಲೆಯ ವಿದ್ಯಾರ್ಥಿನಿ ಪಿ.ಕೆ.ಫಜ್ಞ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಕೂಡಿಗೆಯ ಟರ್ಫ್ ಮೈದಾನದಲ್ಲಿ ನಡೆದ ಬಾಲಕಿಯರ ತಾಲ್ಲೂಕು ಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಶಾಲೆ ಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.
ವರದಿ : ದುಗ್ಗಳ ಸದಾನಂದ.








