Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸೆಸ್ಟೋಬಾಲ್ ಕ್ರೀಡೆಯಲ್ಲಿ ಚಿನ್ನದ ಪದಕ ಗೆದ್ದ ಅಲ್ಬಿನ್ ಗೆ ಸನ್ಮಾನ*
  • *ಮಡಿಕೇರಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಅರಸು ಜನ್ಮ ದಿನಾಚರಣೆ*
  • **ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**
  • *ರಾಜ್ಯಪಾಲರನ್ನು ಭೇಟಿಯಾದ ASP*
  • *ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ*
  • *ಪರಿಸರ ಸಂರಕ್ಷಣೆ ಮತ್ತು ಜನರ ಕಲ್ಯಾಣ ಎರಡೂ ಸಮಾನಾಂತರವಾಗಿ ಸಾಗುವಂತೆ ನೋಡಿಕೊಳ್ಳುವುದು ನಮ್ಮ ಆದ್ಯತೆಯಾಗಿದೆ : ಕೇಂದ್ರ ಪರಿಸರ ಸಚಿವಾಲಯದೊಂದಿಗೆ ಸಂಸದ ಯದುವೀರ್ ಒಡೆಯರ್ ಮಾತುಕತೆ*
  • *ಕರ್ನಾಟಕ ಅಂಡರ್-17 ಫುಟ್ಬಾಲ್ ತಂಡಕ್ಕೆ ಮಡಿಕೇರಿಯ ನಾಲ್ವರು ವಿದ್ಯಾರ್ಥಿಗಳು*
  • *ಶಿರಂಗಾಲ ಸರ್ಕಾರಿ ಪ್ರೌಢಶಾಲೆಗೆ ಉಚಿತ ಕಂಪ್ಯೂಟರ್ ಕೊಡುಗೆ* 
  • *ವಿರಾಜಪೇಟೆ : ನಶೆ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆ ಕೈಜೋಡಿಸಬೇಕು : ಕೋಮಲ*
  • *ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣಕ್ಕೆ ಹೋಮ-ಹವನ : ದಸಂಸ ಖಂಡನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಕೊಡಗಿನಲ್ಲಿ ಬೃಹತ್ ಮಾನವ ಸರಪಳಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಕೊಡಗಿನಲ್ಲಿ ಬೃಹತ್ ಮಾನವ ಸರಪಳಿ*

ಸೆಪ್ಟೆಂಬರ್ 16, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಸೆ.15 : ಪ್ರಜಾಪ್ರಭುತ್ವ ಮೌಲ್ಯವನ್ನು ಪ್ರತಿಯೊಬ್ಬರೂ ಎತ್ತಿಹಿಡಿಯುವಂತಾಗಬೇಕು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಕರೆ ನೀಡಿದ್ದಾರೆ. ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಮೊದಲ ಬಾರಿಗೆ ಜಾಗತಿಕ ಮಟ್ಟದಲ್ಲಿ ಬೀದರ್ ಜಿಲ್ಲೆಯ ಬಸವಕಲ್ಯಾಣದಿಂದ  ಚಾಮರಾಜನಗರ ವರೆಗೆ ಬೃಹತ್ ಮಾನವ ಸರಪಳಿ ಕಾರ್ಯಕ್ರಮ ಪ್ರಯುಕ್ತ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಲ್ಲಿ ಭಾನುವಾರ ನಡೆದ ಮಾನವ ಸರಪಳಿ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ರಾಷ್ಟ್ರದಲ್ಲಿ ಪ್ರಜಾಪ್ರಭುತ್ವ ಜಾರಿಯಾದ ನಂತರ ನಾಗರಿಕರ ಬದುಕು ಸುಧಾರಿಸುತ್ತಿದೆ. ಆ ದಿಸೆಯಲ್ಲಿ ಪ್ರತಿಯೊಬ್ಬರಿಗೂ ಸಮಾನವಾಗಿ ಬದುಕುವ ಹಕ್ಕನ್ನು ಸಂವಿಧಾನದಲ್ಲಿ ಕಲ್ಪಿಸಲಾಗಿದೆ ಎಂದು ಎನ್.ಎಸ್.ಭೋಸರಾಜು ಅವರು ಹೇಳಿದರು. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ‌ ಮತ್ತು ಸಹೋದರತೆ… ಈ ಅಂಶಗಳು ಪ್ರಜಾಪ್ರಭುತ್ವದ ಆಶಯಗಳಾಗಿವೆ ಎಂದು ಸಚಿವರು ತಿಳಿಸಿದರು. ಜಾತಿ, ಮತ, ಲಿಂಗ, ಧರ್ಮ ಹಾಗೂ ಯಾವುದೇ ರೀತಿಯ ಭೇದಭಾವ ಇಲ್ಲದೆ, ಸರ್ವರಿಗೂ ಸಮಾನತೆ, ಸ್ವಾತಂತ್ರ್ಯ, ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ನ್ಯಾಯ ಒದಗಿಸುವುದು ಪ್ರಜಾಪ್ರಭುತ್ವದ ಮೂಲ ಮಂತ್ರವಾಗಿದೆ ಎಂದು ಸಚಿವರು ನುಡಿದರು. ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳು, ವಿದ್ಯಾರ್ಥಿಗಳು, ಶಿಕ್ಷಕರು ಪೊಲೀಸರು ಹೀಗೆ ಹಲವರು ಮಾನವ ಸರಪಳಿ ಹಾಗೂ ರಿಲೇ  ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿರುವುದು ಶ್ಲಾಘನೀಯ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳಿಗೋಸ್ಕರ ಪ್ರಜಾಪ್ರಭುತ್ವ ಇದ್ದು, ಆ ನಿಟ್ಟಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಪ್ರತಿಯೊಬ್ಬ ವಯಸ್ಕರಿಗೂ ಮತ ಚಲಾಯಿಸುವ ಹಕ್ಕನ್ನು ನೀಡಿದ್ದಾರೆ ಎಂದು ತಿಳಿಸಿದರು. ಸ್ವಾತಂತ್ರ್ಯ ಹಾಗೂ ಪ್ರಜಾಪ್ರಭುತ್ವಕ್ಕೆ ಹಲವರು ಹೋರಾಟ ಮಾಡಿದ್ದು, ಅವರನ್ನು ಮರೆಯುವಂತಿಲ್ಲ ಎಂದು ಎ.ಎಸ್.ಪೊನ್ನಣ್ಣ ಅವರು ಹೇಳಿದರು. ಪ್ರಜಾಪ್ರಭುತ್ವದಲ್ಲಿ ಸಮಾನತೆ, ಸಹೋದರತೆ, ಭ್ರಾತೃತ್ವ ಹೀಗೆ ಹಲವು ಮೌಲ್ಯಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಂಡು ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸಬೇಕು ಎಂದು ಪೊನ್ನಣ್ಣ ಅವರು ವಿವರಿಸಿದರು. ರಾಷ್ಟ್ರದ ಸಂವಿಧಾನದಲ್ಲಿ ಮೂಲಭೂತ ಹಕ್ಕುಗಳ ಜತೆಗೆ ಕರ್ತವ್ಯಗಳನ್ನು ವಿವರಿಸಲಾಗಿದೆ. ಆ ನಿಟ್ಟಿನಲ್ಲಿ ಮೂಲಭೂತ ಹಕ್ಕುಗಳನ್ನು ಪಡೆಯುವುದರ ಜೊತೆಗೆ ಕರ್ತವ್ಯಗಳನ್ನು ಮರೆಯಬಾರದು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ವಿವರಿಸಿದರು. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಮಾತನಾಡಿ ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಪ್ರಯುಕ್ತ ಪ್ರಜಾಪ್ರಭುತ್ವ ಮೌಲ್ಯವನ್ನು ತಿಳಿಸುವಲ್ಲಿ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಮಾನವ ಸರಪಳಿ ಒಂದು ಉತ್ತಮ ಕಾರ್ಯಕ್ರಮ ಆಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.        ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ರಚಿಸುವ ಮೂಲಕ  ರಾಷ್ಟ್ರದ ಪ್ರತಿಯೊಬ್ಬರಿಗೂ ಸಮಾನತೆ ಕಲ್ಪಿಸಿದ್ದಾರೆ. ಇವರ ಪ್ರಯತ್ನದಿಂದ ನಾವುಗಳು ಇಂದು ಜನರ ಪ್ರತಿನಿಧಿಯಾಗಿ ಪಾಲ್ಗೊಳ್ಳಲು ಅವಕಾಶವಾಗಿದೆ ಎಂದು ಡಾ.ಮಂತರ್ ಗೌಡ ಅವರು ಅಭಿಪ್ರಾಯ ಪಟ್ಟರು. ಸಮಾಜದಲ್ಲಿ ಬಡವ-ಬಲ್ಲಿದ, ಮೇಲು-ಕೀಳು ಎಂಬ ಭಾವನೆ ಇಲ್ಲದೆ, ಎಲ್ಲರೂ ಸಮಾನರು ಎಂಬುದು ಪ್ರತಿಯೊಬ್ಬರಲ್ಲಿಯೂ ಇರಬೇಕು. ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಸಹ ಇತರರಂತೆ ಬದುಕು ಕಟ್ಟಿಕೊಂಡಾಗ ಪ್ರಜಾಪ್ರಭುತ್ವದ ಆಶಯಕ್ಕೆ ಮೌಲ್ಯ ದೊರೆಯಲಿದೆ ಎಂದು ಡಾ.ಮಂತರ್ ಗೌಡ ಅವರು ಪ್ರತಿಪಾದಿಸಿದರು.   ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಸಂವಿಧಾನ ಪೀಠಿಕೆ ವಾಚಿಸಿದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್, ಸಮಾಜ ಕಲ್ಯಾಣ ಇಲಾಖಾಯ ಜಿಲ್ಲಾ ನೋಡಲ್ ಅಧಿಕಾರಿ ರಾಜೇಶ್ ಗೌಡ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್, ಸ್ಕೌಟ್ಸ್ ಮತ್ತು ಗೈಡ್ ನ ಜಿಲ್ಲಾ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿ ಮ್ಯಾಥ್ಯೂ, ಪ್ರಮುಖರಾದ ಎಚ್.ಎಲ್.ದಿವಾಕರ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇತರರು ಇದ್ದರು. ಮಾನವ ಸರಪಳಿ ಸಂದರ್ಭದಲ್ಲಿ ಗಣ್ಯರು ಸಾಲಾಗಿ ನಿಂತು ಕೈ ಮೇಲೆ ಮಾಡುವ ಮೂಲಕ ಜೈ ಹಿಂದ್ ಜೈ ಕರ್ನಾಟಕ ಘೋಷ ವಾಕ್ಯ ಮೊಳಗಿಸಿದರು. ರೇವತಿ ಮತ್ತು ತಂಡದವರು ನಾಡಗೀತೆ ಹಾಡಿದರು‌. ಭಾನುವಾರ ನಡೆದ ಮಾನವ ಸರಪಳಿ ಸಂದರ್ಭದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು ಪಾಲ್ಗೊಂಡಿದ್ದರು. ಕಲಾವಿದ ಈ.ರಾಜು ತಂಡದವರು ಗೀತಗಾಯನ ನಡೆಸಿಕೊಟ್ಟರು, ಬಸವನಹಳ್ಳಿ ಮೊರಾರ್ಜಿ ವಸತಿ ಶಾಲೆಯ ಆದಿವಾಸಿ ವಿದ್ಯಾರ್ಥಿಗಳು ಗಿರಿಜನ ನೃತ್ಯ ಪ್ರದರ್ಶಿಸಿದರು, ಡೊಳ್ಳು ಕುಣಿತ ಹಾಗೂ ಲಂಬಾಣಿ ನೃತ್ಯ ಪ್ರದರ್ಶನ ಗಮನ ಸೆಳೆಯಿತು. ವಿದ್ಯಾರ್ಥಿಗಳಿಬ್ಬರು ಅಂಬೇಡ್ಕರ್ ಅವರ ವೇಷದಲ್ಲಿ ಕಾಣಿಸಿಕೊಂಡಿದ್ದು ವಿಶೇಷವಾಗಿತ್ತು. ಪೊಲೀಸ್ ಇಲಾಖೆಯಿಂದ ಬೈಕ್ ಮೂಲಕ  ರಿಲೇ ನಡೆಸಿದ್ದು, ಗಮನ ಸೆಳೆಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸೆಸ್ಟೋಬಾಲ್ ಕ್ರೀಡೆಯಲ್ಲಿ ಚಿನ್ನದ ಪದಕ ಗೆದ್ದ ಅಲ್ಬಿನ್ ಗೆ ಸನ್ಮಾನ*

ಆಗಷ್ಟ್ 20, 2026

*ಮಡಿಕೇರಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಅರಸು ಜನ್ಮ ದಿನಾಚರಣೆ*

ಆಗಷ್ಟ್ 20, 2026

**ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**

ಆಗಷ್ಟ್ 20, 2026

*ಮಡಿಕೇರಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಅರಸು ಜನ್ಮ ದಿನಾಚರಣೆ*

ಆಗಷ್ಟ್ 20, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.20 : ಯುವಶಕ್ತಿಗೆ ಸ್ಫೂರ್ತಿಯಾಗಿದ್ದ ದೇಶದ ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಅವರ ನಿಲುವು ಸ್ಪಷ್ಟವಾಗಿತ್ತು.…

**ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**

ಆಗಷ್ಟ್ 20, 2026

*ರಾಜ್ಯಪಾಲರನ್ನು ಭೇಟಿಯಾದ ASP*

ಆಗಷ್ಟ್ 20, 2026

*ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ*

ಆಗಷ್ಟ್ 20, 2026

*ಪರಿಸರ ಸಂರಕ್ಷಣೆ ಮತ್ತು ಜನರ ಕಲ್ಯಾಣ ಎರಡೂ ಸಮಾನಾಂತರವಾಗಿ ಸಾಗುವಂತೆ ನೋಡಿಕೊಳ್ಳುವುದು ನಮ್ಮ ಆದ್ಯತೆಯಾಗಿದೆ : ಕೇಂದ್ರ ಪರಿಸರ ಸಚಿವಾಲಯದೊಂದಿಗೆ ಸಂಸದ ಯದುವೀರ್ ಒಡೆಯರ್ ಮಾತುಕತೆ*

ಆಗಷ್ಟ್ 20, 2026

*ಕರ್ನಾಟಕ ಅಂಡರ್-17 ಫುಟ್ಬಾಲ್ ತಂಡಕ್ಕೆ ಮಡಿಕೇರಿಯ ನಾಲ್ವರು ವಿದ್ಯಾರ್ಥಿಗಳು*

ಆಗಷ್ಟ್ 19, 2026

*ಶಿರಂಗಾಲ ಸರ್ಕಾರಿ ಪ್ರೌಢಶಾಲೆಗೆ ಉಚಿತ ಕಂಪ್ಯೂಟರ್ ಕೊಡುಗೆ* 

ಆಗಷ್ಟ್ 19, 2026

*ವಿರಾಜಪೇಟೆ : ನಶೆ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆ ಕೈಜೋಡಿಸಬೇಕು : ಕೋಮಲ*

ಆಗಷ್ಟ್ 19, 2026

*ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣಕ್ಕೆ ಹೋಮ-ಹವನ : ದಸಂಸ ಖಂಡನೆ*

ಆಗಷ್ಟ್ 19, 2026

*ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಕಾಮಗಾರಿ ವೀಕ್ಷಣೆ*

ಆಗಷ್ಟ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.