ಮಡಿಕೇರಿ ಸೆ.16 NEWS DESK : ಕುಶಾಲನಗರ ತಾಲ್ಲೂಕಿನ ಗ್ರಾಮಾಂತರ ಪ್ರದೇಶದ ಕೂಡುಮಂಗಳೂರು, ಕೂಡಿಗೆ, ಹೆಬ್ಬಾಲೆ, ತೊರೆನೂರು ಹಾಗೂ ಶಿರಂಗಾಲ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಮಾನವ ಸರಪಳಿ ರಚಿಸಿ ಪ್ರಜಾಪ್ರಭುತ್ವದ ಮಹತ್ವವನ್ನು ಸಾರಲಾಯಿತು. ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಟರಾಜ್, ಸಹಾಯಕ ಕೃಷಿ ಅಧಿಕಾರಿ ವೀರಣ್ಣ ಕುಮಾರ್, ಕೂಡುಮಂಗಳೂರು ಗ್ರಾಮ ಪಂಚಾಯತ್ ಅಧ್ಯಕ್ಷ ಭಾಸ್ಕರ್ ನಾಯಕ್ , ಪಿಡಿಓ ಎಂ.ಆರ್. ಸಂತೋಷ್ ಹಾಗೂ ಸಿ.ಆರ್.ಪಿ.ಶಾಂತಕುಮಾರ್ ಅವರ ನೇತೃತ್ವದಲ್ಲಿ ಹಾಗೂ ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕೂಡಿಗೆ ಡಯಟ್ ಪ್ರಾಂಶುಪಾಲ ಎಂ.ಚಂದ್ರಕಾಂತ್, ಬಿಇಓ ಎಸ್.ಭಾಗ್ಯಮ್ಮ, ಗ್ರಾ.ಪಂ.ಅಧ್ಯಕ್ಷ ಗಿರೀಶ್, ಪಿಡಿಓ ಮಂಜುಳಾ ನೇತೃತ್ವದಲ್ಲಿ ಮಾನವ ಸರಪಳಿ ರಚಿಸಿ ಪ್ರಜಾಪ್ರಭುತ್ವದ ಮಹತ್ವವನ್ನು ಪ್ರಚುರಪಡಿಸಲಾಯಿತು. ಗ್ರಾ.ಪಂ. ಸದಸ್ಯರು ಮತ್ತು ವಿವಿಧ ಸಂಘ- ಸಂಸ್ಥೆಗಳ ಪ್ರತಿನಿಧಿಗಳು, ಶಾಲಾ ಕಾಲೇಜಿನ ಮುಖ್ಯಸ್ಥರು, ಶಿಕ್ಷಕರು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ನಾಗರಿಕರು ಜತೆಗೂಡಿ ಮಾನವ ಸರಪಳಿ ರಚಿಸಿದರು. ಕೂಡುಮಂಗಳೂರು ಗ್ರಾಮ ಪಂಚಾಯತಿ ವತಿಯಿಂದ ವೀರಭೂಮಿ ಸರ್ಕಲ್ ನಿಂದ ಕೂಡಿಗೆ ಡೈರಿವರೆಗೆ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಹಾಗೂ ಸಾರ್ವಜನಿಕರು ಮಾನವ ಸರಪಳಿ ರಚಿಸಿದರು. ಕೂಡ್ಲೂರು ಪ್ರಾಥಮಿಕ ಶಾಲೆ ಬಳಿ ಪ್ರೌಢಶಾಲಾ ಶಿಕ್ಷಕಿ ಎಸ್.ಎಂ.ಗೀತಾ, ಸಂವಿಧಾನದ ಪೀಠಿಕೆ ವಾಚಿಸಿದರು. ಕೂಡುಮಂಗಳೂರು ಗ್ರಾ.ಪಂ.ವ್ಯಾಪ್ತಿಯ ಕಾರ್ಯಕ್ರಮದಲ್ಲಿ ಕೂಡಿಗೆ ಸರ್ಕಾರಿ ಪಿಯೂ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಸಪ್ಪ, ಪ್ರಾಂಶುಪಾಲರಾದ ಮೊರಾರ್ಜಿ ವಸತಿ ಶಾಲೆಯ ಪ್ರಾಂಶುಪಾಲ ಪ್ರಕಾಶ್ , ಕೂಡ್ಲೂರು ಗ್ರಾಮ ದೇವಾಲಯ ಸಮಿತಿ ಅಧ್ಯಕ್ಷ ಜವರೇಗೌಡ, ಕೂಡಿಗೆ ಕ್ರೀಡಾಶಾಲೆಯ ಮುಖ್ಯ ಶಿಕ್ಷಕ ದೇವಕುಮಾರ್. ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಎಸ್.ಎ.ಯೋಗೇಶ್, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಎಚ್.ಎಸ್. ಸುಜಾತ, ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಎಸ್ ಡಿ ಎಂ ಸಿ ಮಾಜಿ ಅಧ್ಯಕ್ಷ ಈರಪ್ಪ, ಶಿಕ್ಷಕರಾದ ಕೆ.ಗೋಪಾಲಕೃಷ್ಣ, ದಯಾನಂದ್ ಪ್ರಕಾಶ್, ಎಸ್.ಎಂ.ಗೀತಾ, ಬಿ.ಎನ್.ಸುಜಾತ, ರೇಖಾ, ವಿವಿಧ ಶಾಲೆಗಳ ಮುಖ್ಯಸ್ಥರಾದ ಮಹೇಶ್, ಕಿರಣ್, ಚಿತ್ರ, ಸೈನಿಕ ಶಾಲೆಯ ಶಿಕ್ಷಕ ಗೋವಿಂದರಾಜು. ಗ್ರಾಮ ಪಂಚಾಯಿತಿ ಸಿಬ್ಬಂದಿ ಅವಿನಾಶ್, ಸದಸ್ಯರುಗಳು ಕೂಡಿಗೆ ಕ್ಲಸ್ಟರ್ ಸಿ ಆರ್ ಪಿ ಶಾಂತಕುಮಾರ್ , ಹಾಗೂ ಸಿಬ್ಬಂದಿ ವರ್ಗದವರು ಹಾಗೂ ಕ್ಲಸ್ಟರ್ ಶಿಕ್ಷಕರುಗಳು ಹಾಗೂ ವಿದ್ಯಾರ್ಥಿಗಳು ಕಂದಾಯ ಇಲಾಖೆಯ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು. ಕೂಡ್ಲೂರು ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿನಿ ನಿಹಾನ, ಪ್ರಜಾಪ್ರಭುತ್ವದ ಮಹತ್ವದ ಮಾಹಿತಿ ನೀಡಿದರು.










