ಮಡಿಕೇರಿ ಸೆ.17 NEWS DESK : ಕೊಡಗು ಗೌಡ ವಿದ್ಯಾ ಸಂಘದ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಮಾಡಲಾಗುತ್ತಿದ್ದು, ನ.25ರ ಒಳಗೆ ಅರ್ಜಿ ಸಲ್ಲಿಸುವಂತೆ ಸಂಘದ ಅಧ್ಯಕ್ಷ ಅಂಬೆಕಲ್ಲು ನವೀನ್ ಹಾಗೂ ಕಾರ್ಯದರ್ಶಿ ಪೇರಿಯನ ಕೆ.ಉದಯಕುಮಾರ್ ತಿಳಿಸಿದ್ದಾರೆ. ಪತ್ರಿಕಾ ಪ್ರಟಕಣೆ ನೀಡಿರುವ ಅವರು, 10ನೇ ತರಗತಿ ಕನ್ನಡ ಮಾಧ್ಯಮದಲ್ಲಿ ಶೇ.80 ಕ್ಕಿಂತ ಮೇಲ್ಪಟ್ಟು ಹಾಗೂ ಆಂಗ್ಲ ಮಾಧ್ಯಮದಲ್ಲಿ ಶೇ.90 ಕ್ಕಿಂತ ಮೇಲ್ಪಟ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ, ಪಿಯುಸಿ ಮತ್ತು ಪದವಿ ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದು ಉತ್ತೀರ್ಣರಾಗಿರುವ ಮತ್ತು ಸಿ.ಇ.ಟಿ ಯಲ್ಲಿ 1000 ರ‍್ಯಾಂಕ್ ಒಳಗೆ ಮತ್ತು ಎನ್.ಇ.ಇ.ಟಿ (ನೀಟ್) ಯಲ್ಲಿ ರಾಷ್ಟ್ರಮಟ್ಟದಲ್ಲಿ 5000 ರ‍್ಯಾಂಕ್ ಒಳಗೆ ಪಡೆದುಕೊಂಡಿರುವ ಗೌಡ ಜನಾಂಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ “ಪ್ರತಿಭಾ ಪುರಸ್ಕಾರ” ನೀಡಲಾಗುವುದು. ಜನಾಂಗದ ಪ್ರತಿಭಾವಂತ ವಿದ್ಯಾರ್ಥಿಗಳು ನ.25ರ ಒಳಗೆ ಅಂಕಪಟ್ಟಿಯ ಜೆರಾಕ್ಸ್ ಪ್ರತಿಯೊಡನೆ ಅರ್ಜಿಯನ್ನು ಸಂಘದ ಕಚೇರಿಗೆ ತಲುಪಿಸಬೇಕು ಎಂದು ಹೇಳಿದ್ದಾರೆ. ವೈದ್ಯಕೀಯ, ಇಂಜಿನಿಯರಿಂಗ್, ಸ್ನಾತಕೋತ್ತರ ಪದವಿಯಲ್ಲಿ ರ‍್ಯಾಂಕ್ ಪಡೆದ ಮತ್ತು ಕ್ರೀಡೆ, ಕಲೆ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಸರ್ಕಾರದ ವತಿಯಿಂದ ಕೊಡಲ್ಪಡುವ ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿ ಪಡೆದು ಉತ್ತಮ ಪ್ರದರ್ಶನ ತೋರುತ್ತಿರುವ ಗೌಡ ಜನಾಂಗದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಸನ್ಮಾನಿಸಲಾಗುವುದು. ಆಸಕ್ತರು ನ.25ರ ಒಳಗೆ ಸೂಕ್ತ ದಾಖಲೆ ಸಹಿತ ಅರ್ಜಿಯನ್ನು ಸಂಘದ ಕಚೇರಿಗೆ ತಲುಪಿಸಬೇಕು. ಹೆಚ್ಚಿನ ಮಾಹಿತಿಗೆ ಕಾರ್ಯದರ್ಶಿ 8197297516 ಮತ್ತು ವ್ಯವಸ್ಥಾಪಕರು 7892365854 ನ್ನು ಸಂಪರ್ಕಿಸಬಹುದು ಎಂದು ನವೀನ್ ಹಾಗೂ ಉದಯಕುಮಾರ್ ತಿಳಿಸಿದ್ದಾರೆ.