Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಹೆಗ್ಗಡೆ ಸಮಾಜದ ಕ್ರೀಡಾ ಹಬ್ಬಕ್ಕೆ ಸಂಭ್ರಮದ ತೆರೆ*
  • *ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*
  • *5ನೇ ದಿನವೂ ಮುಂದುವರೆದ ವಸತಿ ರಹಿತರ ಧರಣಿ*
  • *ಕೊಡಗು : ಪತ್ರಿಕಾ ಪ್ರವಾಸ ವಾಹನಕ್ಕೆ ಚಾಲನೆ*
  • *ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ : ಜೂನ್ ಮೊದಲ ವಾರದಲ್ಲಿ ಮುಂಗಾರು ಆರಂಭ ಸಾಧ್ಯತೆ : ರಸ್ತೆ ಸೇರಿದಂತೆ ಹಲವು ಕಾಮಗಾರಿ ಪೂರ್ಣಗೊಳಿಸಿ : ಸಚಿವ ಎನ್.ಎಸ್.ಭೋಸರಾಜು*
  • *ಮಾದಾಪುರದಲ್ಲಿ ಕೊಡವ ಸಮಾಜ ಭವನ ಲೋಕಾಪ೯ಣೆ : ಪ್ರಾಮಾಣಿಕತೆಯೊಂದಿಗೆ ಸಂಸ್ಕೃತಿ ಸಂರಕ್ಷಣೆಗೆ ಕೊಡವರು ವಿಶ್ವವ್ಯಾಪಿ ಹೆಸರು ವಾಸಿ : ಬಸವರಾಜ ಬೊಮ್ಮಾಯಿ ಶ್ಲಾಘನೆ*
  • *ಮಡಿಕೇರಿಯಲ್ಲಿ ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ*
  • *ಪೊನ್ನಂಪೇಟೆಯಲ್ಲಿ ಬಿಜೆಪಿ ವಿಜಯೋತ್ಸವ*
  • *ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ‘ಶಾರ್ಟ್ ರೇಂಜ್ ರೈಫಲ್ ಫೈರಿಂಗ್ ರೇಂಜ್’ ಉದ್ಘಾಟನೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಶ್ರೀ ಭಗವಾನ್ ವಿಶ್ವಕರ್ಮ ಜಯಂತಿ ಆಚರಣೆ : ರಾಷ್ಟ್ರದ ಅಭಿವೃದ್ಧಿಯಲ್ಲಿ ವಿಶ್ವಕರ್ಮ ಸಮಾಜದವರ ಕೊಡುಗೆ ಅಪಾರ: ಡಾ.ಜೆ.ಸೋಮಣ್ಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಶ್ರೀ ಭಗವಾನ್ ವಿಶ್ವಕರ್ಮ ಜಯಂತಿ ಆಚರಣೆ : ರಾಷ್ಟ್ರದ ಅಭಿವೃದ್ಧಿಯಲ್ಲಿ ವಿಶ್ವಕರ್ಮ ಸಮಾಜದವರ ಕೊಡುಗೆ ಅಪಾರ: ಡಾ.ಜೆ.ಸೋಮಣ್ಣ*

ಸೆಪ್ಟೆಂಬರ್ 17, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.17 NEWS DESK : ಸೋಮನಾಥಪುರ ದೇವಾಲಯ ಸೇರಿದಂತೆ ವಿವಿಧ ದೇವಾಲಯ ಹಾಗೂ ಮೂರ್ತಿ/ ಪ್ರತಿಮೆಗಳ ಕೆತ್ತನೆಯಲ್ಲಿ ವಿಶ್ವಕರ್ಮ ಸಮಾಜದವರ ಕೊಡುಗೆ ಅಪಾರ ಎಂದು ಸಾಹಿತಿ ಡಾ.ಜೆ.ಸೋಮಣ್ಣ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ನಡೆದ ಶ್ರೀ ಭಗವಾನ್ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸಂಸ್ಕೃತಿ, ಆಚಾರ-ವಿಚಾರದಲ್ಲಿ ಹಾಗೂ ಕುಲಕಸುಬುನಲ್ಲಿ ವಿಶ್ವಕರ್ಮ ಸಮಾಜದವರು ತಮ್ಮದೇ ಆದ ಛಾಪು ಮೂಡಿಸಿದ್ದಾರೆ ಎಂದು ಸೋಮಣ್ಣ ಹೇಳಿದರು. ಎಂಜಿನಿಯರ್‍ಗಳ ರೀತಿಯಲ್ಲಿ ವಿಶ್ವಕರ್ಮರು ಮರ, ಚಿನ್ನ ಕೆತ್ತನೆ, ಕಬ್ಬಿಣ ಕೆಲಸ ಹೀಗೆ ಹಲವು ರೀತಿಯ ವೃತ್ತಿ ಕೌಶಲ್ಯದಲ್ಲಿ ತೊಡಗಿಸಿಕೊಂಡು ಕಾಯಕವೇ ಕೈಲಾಸ ಎಂಬಂತೆ ವೃತ್ತಿಯನ್ನೇ ಕುಲಕಸುಬನ್ನಾಗಿ ಮಾಡಿಕೊಂಡು ಮುನ್ನಡೆಯುತ್ತಾರೆ ಎಂದು ಸೋಮಣ್ಣ ನುಡಿದರು. ಪ್ರಾಚೀನ ಕಾಲದಲ್ಲಿ ದೇವಾನುದೇವತೆಗಳ ಸೃಷ್ಠಿಕರ್ತರು ವಿಶ್ವಕರ್ಮರಾಗಿದ್ದಾರೆ. ಸಿಂಧೂ ಬಯಲಿನ ನಾಗರಿಕತೆಯಂತೆ ದೇಶದಲ್ಲಿ ಹಲವು ಅಭಿವೃದ್ಧಿಗೆ ವಿಶ್ವಕರ್ಮರ ಕೊಡುಗೆ ಅಪಾರವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು. ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ, ಯಾವುದೇ ಗೃಹ ನಿರ್ಮಾಣ ಸೇರಿದಂತೆ ಹಲವು ಕಟ್ಟಡ ಕೆಲಸಗಳು, ಮರಗೆಲಸ, ಉಳುಮೆ ಮಾಡುವ ಕೆಲಸದ ಉಪಕರಣಗಳನ್ನು ವಿಶ್ವಕರ್ಮರು ತಯಾರು ಮಾಡುತ್ತಾರೆ. ಆ ನಿಟ್ಟಿನಲ್ಲಿ ದೇಶಕ್ಕೆ ವಿಶ್ವಕರ್ಮ ಸಮಾಜದವರ ಕೊಡುಗೆ ಅಪಾರವಾಗಿದೆ ಎಂದರು. ರಾಷ್ಟ್ರದ ಅಭಿವೃದ್ಧಿ ಹಾಗೂ ಕೈಗಾರಿಕೆಗಳ ಬೆಳವಣಿಗೆಯಲ್ಲಿ ವಿಶ್ವಕರ್ಮ ಸಮಾಜದವರು ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ವಿವರಿಸಿದರು. ವಿಶ್ವಕರ್ಮ ಒಕ್ಕೂಟದ ಜಿಲ್ಲಾಧ್ಯಕ್ಷg ಎಸ್.ಜೆ.ದೇವದಾಸ್ ಮಾತನಾಡಿ, ವಿಶ್ವಕರ್ಮ ಸಮಾಜಕ್ಕಾಗಿ ಸಮುದಾಯ ಭವನ ನಿರ್ಮಾಣಕ್ಕೆ ಜಾಗ ಒದಗಿಸುವಂತೆ ಹಲವು ವರ್ಷಗಳಿಂದ ಮನವಿ ಮಾಡುತ್ತಾ ಬರಲಾಗಿದೆ. ಆ ನಿಟ್ಟಿನಲ್ಲಿ ಈ ವರ್ಷವಾದರೂ ಈಡೇರಿಸುವಂತಾಗಬೇಕು ಎಂದು ಕೋರಿದರು. ವಿಶ್ವಕರ್ಮ ಸಮಾಜದ ಅಭಿವೃದ್ಧಿಗೆ ನಿವೇಶನ ಒದಗಿಸಿದಲ್ಲಿ ಭವನ ನಿರ್ಮಾಣಕ್ಕೆ ಪ್ರಯತ್ನಿಸಲಾಗುವುದು. ಆ ನಿಟ್ಟಿನಲ್ಲಿ ಈಗಾಗಲೇ ಗುರುತಿಸಲಾಗಿರುವ ಜಾಗವನ್ನು ವಿಶ್ವಕರ್ಮ ಸಮಾಜಕ್ಕೆ ಒದಗಿಸುವಂತಾಗಬೇಕು ಎಂದು ದೇವದಾಸ್ ಮನವಿ ಮಾಡಿದರು. ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಕೋರನ ಸರಸ್ವತಿ ಅವರು ಮಾತನಾಡಿ ಸಮಾಜದಲ್ಲಿ ಕುಲ ಕಸುಬುಗಳನ್ನು ಗೌರವಿಸಬೇಕು. ಕರಕುಶಲ ಕರ್ಮಿಗಳು ಅನಾದಿಕಾಲದಿಂದಲೂ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಸಿ.ರಂಗಧಾಮಪ್ಪ ಅವರು ಮಾತನಾಡಿ ಎಲ್ಲಿ ಕ್ರಿಯಾ ಚೈತನ್ಯ ಇರುತ್ತದೆ. ಅಲ್ಲಿ ಕೆಲಸವನ್ನು ಕಾಣಬಹುದು. ಆ ನಿಟ್ಟಿನಲ್ಲಿ ಕಬ್ಬಿಣ, ಮರ, ಚಿನ್ನ, ಹೀಗೆ ಪಂಚ ರೀತಿಯ ಕಾರ್ಯ ಕೈಗೊಂಡು ಕಾಯಕ ವೃತ್ತಿಯಲ್ಲಿ ದೇವರನ್ನು ಕಾಣುತ್ತಾರೆ ಎಂದರು. ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೆಗೌಡ ಮಾತನಾಡಿ ವಿಶ್ವಕರ್ಮ ಸಂಸ್ಕೃತಿ ಯು ಸಮಾಜದಲ್ಲಿ ವಿಶಿಷ್ಟ್ಯತೆ ಹೊಂದಿದೆ. ವಿಶ್ವಕರ್ಮ ದೇವರ ರೂಪ ಎಂದರೆ ತಪ್ಪಾಗಲಾರದು ಎಂದು ತಿಳಿಸಿದರು. ವಿಶ್ವಕರ್ಮ ಸಮಾಜ ಸೇವಾ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷರಾದ ಜಿ.ಜಗದೀಶ್ ಆಚಾರ್ಯ, ಪ್ರಮುಖರಾದ ಪ್ರಕಾಶ್ ಆಚಾರ್ಯ, ಅಶೋಕ್ ಆಚಾರ್, ನಾಗರಾಜ ಆಚಾರ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ವಿಶಾಲ್ ಕುಮಾರ್, ಇತರರು ಇದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ ಸ್ವಾಗತಿಸಿದರು. ಬಿ.ಸಿ.ಶಂಕರಯ್ಯ ನಾಡಗೀತೆ ಹಾಡಿದರು. ಮಣಜೂರು ಮಂಜುನಾಥ್ ನಿರೂಪಿಸಿ, ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಹೆಗ್ಗಡೆ ಸಮಾಜದ ಕ್ರೀಡಾ ಹಬ್ಬಕ್ಕೆ ಸಂಭ್ರಮದ ತೆರೆ*

ಮೇ 5, 2026

*ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*

ಮೇ 5, 2026

*5ನೇ ದಿನವೂ ಮುಂದುವರೆದ ವಸತಿ ರಹಿತರ ಧರಣಿ*

ಮೇ 5, 2026

*ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*

ಮೇ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮೇ 6 NEWS DESK : ಪೆರುಂಬಾಡಿಯ ಶಂಸುಲ್ ಉಲಮಾ ಎಜುಕೇಶನಲ್ ಅಕಾಡೆಮಿಯ ಎಸ್ಇಎ ಕಾಲೇಜು ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆಯಲ್ಲಿ…

*5ನೇ ದಿನವೂ ಮುಂದುವರೆದ ವಸತಿ ರಹಿತರ ಧರಣಿ*

ಮೇ 5, 2026

*ಕೊಡಗು : ಪತ್ರಿಕಾ ಪ್ರವಾಸ ವಾಹನಕ್ಕೆ ಚಾಲನೆ*

ಮೇ 5, 2026

*ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ : ಜೂನ್ ಮೊದಲ ವಾರದಲ್ಲಿ ಮುಂಗಾರು ಆರಂಭ ಸಾಧ್ಯತೆ : ರಸ್ತೆ ಸೇರಿದಂತೆ ಹಲವು ಕಾಮಗಾರಿ ಪೂರ್ಣಗೊಳಿಸಿ : ಸಚಿವ ಎನ್.ಎಸ್.ಭೋಸರಾಜು*

ಮೇ 5, 2026

*ಮಾದಾಪುರದಲ್ಲಿ ಕೊಡವ ಸಮಾಜ ಭವನ ಲೋಕಾಪ೯ಣೆ : ಪ್ರಾಮಾಣಿಕತೆಯೊಂದಿಗೆ ಸಂಸ್ಕೃತಿ ಸಂರಕ್ಷಣೆಗೆ ಕೊಡವರು ವಿಶ್ವವ್ಯಾಪಿ ಹೆಸರು ವಾಸಿ : ಬಸವರಾಜ ಬೊಮ್ಮಾಯಿ ಶ್ಲಾಘನೆ*

ಮೇ 5, 2026

*ಮಡಿಕೇರಿಯಲ್ಲಿ ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ*

ಮೇ 5, 2026

*ಪೊನ್ನಂಪೇಟೆಯಲ್ಲಿ ಬಿಜೆಪಿ ವಿಜಯೋತ್ಸವ*

ಮೇ 5, 2026

*ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ‘ಶಾರ್ಟ್ ರೇಂಜ್ ರೈಫಲ್ ಫೈರಿಂಗ್ ರೇಂಜ್’ ಉದ್ಘಾಟನೆ*

ಮೇ 5, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವ*

ಮೇ 5, 2026

*ಬಾಳೆಲೆ-ನಲ್ಲೂರು : ಮೇ 5 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.