ಮಡಿಕೇರಿ ಸೆ.18 NEWS DESK : ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್ ಪ್ರಗತಿಯ ಪಥದಲ್ಲಿ ಮುನ್ನಡೆಯುತ್ತಿದ್ದು, 2023-24ನೇ ಸಾಲಿನಲ್ಲಿ 33.09 ಲಕ್ಷ ನಿವ್ವಳ ಲಾಭ ಗಳಿಸಿದ್ದು, ಸಂಘದ ಮಹಾಸಭೆ ಸೆ.21 ರಂದು ನಗರದ ಕೊಡವ ಸಮಾಜದಲ್ಲಿ ನಡೆಯಲಿದೆಯೆಂದು ಸಂಘದ ಅಧ್ಯಕ್ಷರಾದ ಜಿ.ಎಂ.ಸತೀಶ್ ಪೈ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಂಕಿನಿಂದ ಗ್ರಾಹಕರುಗಳಿಗೆ 2847.48 ಲಕ್ಷ ರೂ. ವಿವಿಧ ರೂಪದ ಸಾಲಗಳನ್ನು ವಿತರಿಸಿದೆ. ಇದರಲ್ಲಿ ಜಾಮೀನು ಸಾಲವಾಗಿ 579.98 ಲಕ್ಷ, ಮನೆ ಆಧಾರ ಸಾಲ 959.04 ಲಕ್ಷ, ಚಿನ್ನಾಭರಣ ಈಡಿನ ಸಾಲವಾಗಿ 1,048 ಲಕ್ಷ ಸಾಲ ನೀಡಲಾಗಿದೆ. ಬ್ಯಾಂಕ್ ಪ್ರಸಕ್ತ ಸಾಲಿನಲ್ಲಿ ಒಟ್ಟು 481.23 ಲಕ್ಷ ವಹಿವಾಟು ನಡೆಸಿದೆ. ಸಾಲ ವಸೂಲಾತಿಯ ಪ್ರಮಾಣ ಶೇ.95.50 ರಷ್ಟು ಇರುವುದಾಗಿ ತಿಳಿಸಿದರು. ಬ್ಯಾಂಕಿನ ಜನರಲ್ ತಿಮ್ಮಯ್ಯ ರಸ್ತೆಯಲ್ಲಿನ ಶಾಖೆಯಲ್ಲಿ 106.15 ಲಕ್ಷ ಒಟ್ಟು ವ್ಯವಹಾರ ನಡೆಸಲಾಗಿದ್ದು, 16.50 ಲಕ್ಷ ಲಾಭ ಗಳಿಸಿದೆ ಹಾಗೂ 620.67 ಲಕ್ಷ ರೂ.ಗಳನ್ನು ವಿವಿಧ ರೂಪದ ಸಾಲವಾಗಿ ವಿತರಿಸಲಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ಕೆ.ಆರ್.ನಾಗೇಶ್, ನಿರ್ದೇಶಕರಾದ ಬಿ.ಕೆ.ಜಗದೀಶ್, ಸಿ.ಕೆ.ಬಾಲಕೃಷ್ಣ, ಎಸ್.ಸಿ.ಸತೀಶ್ ಹಾಗೂ ಬಿ.ಎಂ.ರಾಜೇಶ್ ಉಪಸ್ಥಿತರಿದ್ದರು.