ಮಡಿಕೇರಿ NEWS DESK ಸೆ.18 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ 8 ಹೋಬಳಿ ಕೇಂದ್ರದ ಶಾಲಾ ಆಟದ ಮೈದಾನವನ್ನು ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ತಲಾ 25 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ. ಕೊಡಗು ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕು ಇವರ ಸಂಯುಕ್ತ ಆಶ್ರಯದಲ್ಲಿ ಹುದಿಕೇರಿ ಜನತಾ ಪ್ರೌಢಶಾಲೆಯಲ್ಲಿ ಕೊಡಗು ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ಕ್ರೀಡಾಕೂಟಕ್ಕೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು. ಕೊಡಗು ಜಿಲ್ಲೆ ಕ್ರೀಡಾಕ್ಷೇತ್ರದಲ್ಲಿ ತನ್ನದೇ ಆದ ಹೆಸರು ಗಳಿಸಿದ್ದು, ಕ್ರೀಡಾಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುವ ನಿಟ್ಟಿನಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ 8 ಹೋಬಳಿಯ ಶಾಲಾ ಆಟದ ಮೈದಾನಗಳನ್ನು ಅಭಿವೃದ್ಧಿ ಪಡಿಸಲು ಮುಂದಾಗಲಾಗಿದೆ. ಆ ನಿಟ್ಟಿನಲ್ಲಿ ಈಗಾಗಲೇ ವಿರಾಜಪೇಟೆ ಮತ್ತು ಹುದಿಕೇರಿಯಲ್ಲಿ ಕಾಮಗಾರಿ ನಡೆದಿದೆ. ಉಳಿದ 6 ಆಟದ ಮೈದಾನದ ಕಾಮಗಾರಿಗಳು ಶೀಘ್ರ ಪೂರ್ಣಗೊಳ್ಳಲಿದೆ. ಎಂದು ಎ.ಎಸ್.ಪೊನ್ನಣ್ಣ ಅವರು ವಿವರಿಸಿದರು. ಕೊಡಗು ಜಿಲ್ಲೆ ಹಾಕಿ, ಕ್ರಿಕೆಟ್ ಹಾಗೂ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಛಾಪು ಮೂಡಿಸಿದೆ. ಆ ನಿಟ್ಟಿನಲ್ಲಿ ಕ್ರೀಡಾ ಕ್ಷೇತ್ರಕ್ಕೆ ಹೆಚ್ಚಿನ ಮೂಲಸೌಲಭ್ಯ ಕಲ್ಪಿಸಲು ಪ್ರಯತ್ನಿಸಲಾಗಿದೆ ಎಂದು ಶಾಸಕರು ಹೇಳಿದರು. ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡಾ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವುದರಿಂದ ಜೀವನದ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಲು ಸಾಧ್ಯವಾಗಲಿದೆ. ಆ ದಿಸೆಯಲ್ಲಿ ಭವಿಷ್ಯದಲ್ಲಿ ಒಳ್ಳೆಯ ಪ್ರಜೆಯಾಗಿ ರೂಪುಗೊಳ್ಳಲು ಸಹಕಾರಿಯಾಗಲಿದೆ ಎಂದು ಎ.ಎಸ್.ಪೊನ್ನಣ್ಣ ಅವರು ಅಭಿಪ್ರಾಯಪಟ್ಟರು. ಜೀವನದಲ್ಲಿ ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿದಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ. ಆ ನಿಟ್ಟಿನಲ್ಲಿ ಕ್ರೀಡೆ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದರು. ಕೊಡಗು ಜಿಲ್ಲೆಯಲ್ಲಿ ಕ್ರೀಡಾ ಪರಂಪರೆಯನ್ನು ಮತ್ತಷ್ಟು ಔನ್ನತ್ಯಕ್ಕೆ ಕೊಂಡೊಯ್ಯುವAತಾಗಬೇಕು. ಗ್ರಾಮೀಣ ಪ್ರದೇಶದಲ್ಲಿ ಇನ್ನಷ್ಟು ಕ್ರೀಡಾ ಕ್ಷೇತ್ರಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವಂತಾಗಬೇಕು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಕರೆ ನೀಡಿದರು. ಹುದಿಕೇರಿ ಸರ್ಕಾರಿ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳು ರಾಜ್ಯ ಹಾಗೂ ರಾಷ್ಟç ಮಟ್ಟದಲ್ಲಿ ರಾಜಕೀಯ, ಕ್ರೀಡೆ ಸೇರಿದಂತೆ ವಿವಿಧ ಕೇತ್ರದಲ್ಲಿ ಒಳ್ಳೆಯ ಹೆಸರು ಮಾಡಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಪೊನ್ನಣ್ಣ ಅವರು ತಿಳಿಸಿದರು. ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಬಿ.ಆರ್.ಗಾಯತ್ರಿ ಅವರು ಮಾತನಾಡಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಂಡಾಗ ವಿವಿಧ ರಂಗದಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು. ಹುದಿಕೇರಿ ಜನತಾ ಪ್ರೌಢಶಾಲೆಯ ಆಡಳಿತ ಮಂಡಳಿ ಅಧ್ಯಕ್ಷರಾದ ಎಂ.ಎA.ಅಶೋಕ್ ಅವರು ಮಾತನಾಡಿ ಆಟದ ಮೈದಾನಗಳು ಮಕ್ಕಳ ಕ್ರೀಯಾಶೀಲ ಚಟುವಟಿಕೆಗೆ ಅನುಕೂಲವಾಗಿದೆ. ಆ ನಿಟ್ಟಿನಲ್ಲಿ ಹುದಿಕೇರಿಯಲ್ಲಿ ಆಟದ ಮೈದಾನ ಅಭಿವೃದ್ಧಿಪಡಿಸಲಾಗಿದೆ ಎಂದು ಹೇಳಿದರು. ಶಾಸಕರಾದ ಪೊನ್ನಣ್ಣ ಅವರು ಕ್ರೀಡಾಕೂಟದಲ್ಲಿ ಪಾಲ್ಗೊಂಡಿರುವ ವಿದ್ಯಾರ್ಥಿಗಳನ್ನು ಪರಿಚಯ ಮಾಡಿಕೊಂಡರು. ಕ್ರೀಡಾ ಧ್ವಜಾರೋಹಣ ನೆರವೇರಿಸಿ, ಕ್ರೀಡಾ ಜ್ಯೋತಿ ಬೆಳಗಿದರು. ಕ್ರೀಡಾಪಟುಗಳಿಂದ ನಡೆದ ಪಥಸಂಚಲನದಲ್ಲಿ ಗೌರವ ವಂದನೆ ಸ್ವೀಕರಿಸಿದರು. ಹುದಿಕೇರಿಯ ಜನತಾ ಪ್ರೌಢಶಾಲೆ ವೀಕ್ಷಿಸಿದರು. ಹುದಿಕೇರಿ ಗ್ರಾ.ಪಂ.ಅಧ್ಯಕ್ಷರಾದ ಕುಪ್ಪಣಮಾಡ ನಿವ್ಯ ಕಾವೇರಮ್ಮ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ.ವಿಸ್ಮಯಿ, ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಆರ್.ರವಿ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಪೊನ್ನಚ್ಚನ ಶ್ರೀನಿವಾಸ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಪಿ.ಎ.ಪ್ರವೀಣ್, ಜಿಲ್ಲಾ ಅನುದಾನಿತ ಶಾಲಾ-ಕಾಲೇಜು ನೌಕರರ ಸಂಘದ ಅಧ್ಯಕ್ಷರಾದ ಪಿ.ಎ.ಪ್ರಭು ಕುಮಾರ್, ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಸದಾಶಿವ ಪಲ್ಲೇದ್, ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಎಚ್.ಎನ್.ಪಾರ್ವತಿ, ವಿರಾಜಪೇಟೆ ತಾಲ್ಲೂಕಿನ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಕೆ.ಪಿ.ಮಹೇಶ್, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಕೃಷ್ಣಚೈತನ್ಯ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಇ.ಸುರೇಂದ್ರ, ಅನುದಾನಿತ ಪ್ರೌಢಶಾಲಾ ಹಾಗೂ ಕಾಲೇಜು ನೌಕರರ ಸಂಘದ ಅಧ್ಯಕ್ಷರಾದ ಜಿ.ಗಿಡ್ಡಯ್ಯ, ದೈಹಿಕ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷರಾದ ಡಾ.ಸೋಮಯ್ಯ, ಎಂ.ಎಸ್.ತಮ್ಮಯ್ಯ, ಕಿರಣ್ ಪಿ.ಎಂ., ಕೆ.ಜಿ.ಅಶೋಕ್, ಟಿ.ಎಸ್.ಮಹೇಶ್, ಹುದಿಕೇರಿ ಜನತಾ ಪ್ರೌಢ ಶಾಲೆಯ ಆಡಳಿತ ಮಂಡಳಿ ಕಾರ್ಯದರ್ಶಿ ಅಜ್ಜಿಕುಟ್ಟಿರ ಜಿ.ಗಣೇಶ್, ಹುದಿಕೇರಿ ಜನತಾ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಸಿ.ಕೆ.ಮೋಹನ್ ಕುಮಾರಿ, ಹುದಿಕೇರಿ ಜನತಾ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸಿ.ವಿ.ಸುಬ್ರಮಣಿ ಇತರರು ಇದ್ದರು.
ಚಂದ್ರಶೇಖರ್ ಮತ್ತು ತಂಡದವರು ನಾಡಗೀತೆ ಹಾಡಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಜಿ.ಆರ್.ಗಾಯತ್ರಿ ಸ್ವಾಗತಿಸಿದರು. ಆಲಿಮಾ ನಿರೂಪಿಸಿದರು. ಪಿ.ಎ.ಪ್ರವೀಣ್ ವಂದಿಸಿದರು.
Breaking News
- *ಕೊಡಗು ಜಿಲ್ಲೆಯಲ್ಲಿ 13 ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೆ ಕ್ರಮ : ಸಚಿವ ಕೆ.ಜೆ.ಜಾರ್ಜ್*
- *ಹುದ್ದೆಗಳ ಭರ್ತಿಗೆ ಕ್ರಮ : ಸಚಿವ ಕೆ.ಜೆ.ಜಾರ್ಜ್ ಭರವಸೆ*
- *ಕುಶಾಲನಗರ ಗಣಪತಿ ದೇವಾಲಯಕ್ಕೆ ಉದ್ಯಮಿಗಳು ಹಾಗೂ ಟಿಬೆಟಿಯನ್ ಕುಟುಂಬದಿಂದ ಬೆಳ್ಳಿ ಕವಚ ಮತ್ತು ಪೂಜಾ ಸಾಮಾಗ್ರಿ ವಿತರಣೆ*
- *ವಿರಾಜಪೇಟೆ : ಡಿಜಿಟಲ್ ಗ್ರಂಥಾಲಯದ ಮೂಲಕ ಜ್ಞಾನದ ಸಶಕ್ತೀಕರಣ ಉಪನ್ಯಾಸ ಕಾರ್ಯಕ್ರಮ*
- *ಅತಿ ಹೆಚ್ಚು ಅಂಕ ಪಡೆದವರಿಗೆ ಸನ್ಮಾನ : ಶಿಕ್ಷಣ ನೀಡಿದ ಸರ್ಕಾರಿ ಶಾಲೆಗೆ ಆದಾಯದ ಒಂದು ಭಾಗ ಮೀಸಲಿಡಿ : ಹೆಚ್.ಎಲ್.ದಿವಾಕರ್ ಕರೆ*
- *ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ನೂತನ ಪದಾಧಿಕಾರಿಗಳ ನೇಮಕ : ಜಿಲ್ಲಾಧ್ಯಕ್ಷರಾಗಿ ಡಾ.ಯಾಲದಾಳು ಮನೋಜ್ ಬೋಪಯ್ಯ ಆಯ್ಕೆ*
- *ವಾರ ಭವಿಷ್ಯ : ಯಾರಿಗೆ ಈ ವಾರ ಶುಭ… : ನ.18 ರಿಂದ 24ರ ವರೆಗೆ*
- *ಬಿ.ಡಿ.ಮಂಜುನಾಥ್ “ಕೊಡಗು ಸಹಕಾರ ರತ್ನ” ಪ್ರಶಸ್ತಿಗೆ ಭಾಜನ : ನ.20 ರಂದು ಸಹಕಾರ ಸಪ್ತಾಹ ಸಮಾರೋಪ, ಪ್ರಶಸ್ತಿ ಪ್ರದಾನ*
- *ಭಾಗಮಂಡಲದಲ್ಲಿ ಕಾವೇರಿ ಆರತಿ*
- *ಬೊಳ್ಳಮ್ಮಗೆ ಬೆಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್ಡಿ ಪದವಿ*