ನಾಪೋಕ್ಲು ಸೆ.20 NEWS DESK : ಚೇರಂಬಾಣೆ ಕ್ಲಸ್ಟರ್ ನ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಚೇರಂಬಾಣೆ ಅರುಣಾ ಪದವಿ ಪೂರ್ವ ಕಾಲೇಜಿನಲ್ಲಿ ಗ್ರಾ.ಪಂ ಅಧ್ಯಕ್ಷೆ ಮಿಲನ ಮುತ್ತಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕ್ಷೇತ್ರ ಸಂಪನ್ಮೂಲ ವ್ಯಕ್ತಿ ವೀಣಾ ರೈ ಪ್ರಾಸ್ತವಿಕ ಮಾತನಾಡಿ, ಪ್ರತಿಭಾ ಕಾರಂಜಿಯೂ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಮಕ್ಕಳಿಗಾಗಿ ಇಲಾಖೆಯೂ ರೂಪಿಸಿದ ಒಂದು ವಿನೂತನ ಕಾರ್ಯಕ್ರಮ. ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಲು ಒಂದು ಉತ್ತಮ ವೇದಿಕೆಯಾಗಿದೆ ಎಂದು ಹೇಳಿದರು. ವಿವಿಧ ಸ್ಪರ್ಧೆಯಲ್ಲಿ ಸುಮಾರು 200 ವಿದ್ಯಾರ್ಥಿಗಳು ಭಾಗವಹಿಸಿದ್ದು, 47 ವಿದ್ಯಾರ್ಥಿಗಳು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾದರು. ಕಾರ್ಯಕ್ರಮವನ್ನು ಪಿ.ಎಸ್.ಸುಬ್ಬಯ್ಯ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಪಾಕ ದೇವಸ್ಥಾನದ ಅಧ್ಯಕ್ಷರ ಎಂ.ಎನ್.ಮಾದಪ್ಪ, ವಾಹನ ಮಾಲೀಕರ ಸಂಘದ ಅಧ್ಯಕ್ಷ ರವಿ, ಮಸೀದಿ ಅಧ್ಯಕ್ಷ ಹಸೈನಾರ್, ಗ್ರಾ.ಪಂ ಸದಸ್ಯ ಬಶೀರ್, ನಿವೃತ್ತ ಹಿರಿಯ ಶಿಕ್ಷಕಿ ಬಡ್ಡಿರ ನಳಿನಿ, ಕಾಲೇಜಿನ ಪ್ರಶುಪಾಲ ಡಿ.ಪಿ.ರಾಮಕೃಷ್ಣ, ಪ್ರೌಢ ಶಾಲೆ ಮುಖ್ಯೋಪಾಧ್ಯಾಯ ಲೋಕೇಶ್, ಸೇರಿದರಿದಂತೆ ಕ್ಲಸ್ಟರ್ ನ ಎಲ್ಲಾ ಶಾಲೆಯ ಶಿಕ್ಷಕ ವೃಂದದ, ಪೋಷಕರು ಹಾಜರಿದ್ದರು. ಶಿಕ್ಷಕರಾದ ಪರಮೇಶ್ ನಿರೂಪಿಸಿದರು, ಮುಖ್ಯಾಪಾಧ್ಯಾಯರಾದ ಲೋಕೇಶ್ ಸ್ವಾಗತಿಸಿ, ವಂದಿಸಿದರು.
ವರದಿ : ದುಗ್ಗಳ ಸದಾನಂದ.