ಮೈಸೂರು ಸೆ.20 NEWS DESK : ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಜಂಟಿಯಾಗಿ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕಾವೇರಿ ಸಭಾಂಗಣದಲ್ಲಿ ನಡೆದ “ಕರ್ನಾಟಕ ಸಾಂಸ್ಕೃತಿಕ ಮುನ್ನೋಟ: ಚಿಂತನಾ ಸಮಾವೇಶ” ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. “ಸುವರ್ಣ ಸಂಭ್ರಮ ಕರ್ನಾಟಕ-50: ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ದ ಅಂಗವಾಗಿ ಚಿಂತನಾ ಸಮಾವೇಶ ಆಯೋಜಿಸಲಾಗಿತ್ತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ಸಮಾಜ ಕಲ್ಯಾಣ ಸಚಿವರಾದ ಹೆಚ್.ಸಿ.ಮಹದೇವಪ್ಪ, ಕನಕದಾಸ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಕಾ.ತ.ಚಿಕ್ಕಣ್ಣ, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಪುಷ್ಪ ಅಮರನಾಥ್, ಮುಕ್ತ ವಿವಿ ಕುಲಪತಿಗಳಾದ ಪ್ರೊ.ಶರಣಪ್ಪ ವಿ.ಹಲ್ಸೆ, ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಧರಣೀದೇವಿ ಮಾಲಗತ್ತಿ, ವಿಧಾನ ಪರಿಷತ್ ಸದಸದಯರಾದ ಡಾ.ತಿಮ್ಮಯ್ಯ, ಅರ್ಧ ಶತಮಾನದಿಂದ ಕನ್ನಡದ ವಿವೇಕವನ್ನು ವಿಸ್ತರಿಸುತ್ತಿರುವ ಹಿರಿಯ ಸಾಹಿತಿಗಳು, ಬರಹಗಾರರು, ಲೇಖಕರು, ಪತ್ರಕರ್ತರು, ಸಾಮಾಜಿಕ ಕಾರ್ಯಕರ್ತರು, ನಾನಾ ಚಳವಳಿಗಳ ಕಾರ್ಯಕರ್ತರು, ಮುಖಂಡರುಗಳು ಚಿಂತನಾ ಸಮಾವೇಶದಲ್ಲಿ ಭಾಗವಹಿಸಿದ್ದರು. ರೈತ-ದಲಿತ-ಕಾರ್ಮಿಕ-ಮಹಿಳಾ ಮತ್ತು ಕೋಮುಸೌಹಾರ್ಧ ಹಾಗೂ ಸಂವಿಧಾನ ಉಳಿಸಿ ಚಳವಳಿಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಹಲವು ಮಹನೀಯರುಗಳು ಚಿಂತನಾ ಸಮಾವೇಶದಲ್ಲಿ ಉಪಸ್ಥಿತರಿದ್ದು ತಮ್ಮ ತಮ್ಮ ವಿಚಾರಗಳನ್ನು ಮಂಡಿಸಿದರು.