ನಾಪೋಕ್ಲು ಸೆ.20 NEWS DESK : ಮನೆ ಸಂಸಾರವನ್ನು ನಿಭಾಯಿಸಿಕೊಂಡು ಸಮಾಜದಲ್ಲಿ ಸಾಧನೆ ಮಾಡುವುದು ಸುಲಭದ ಮಾತಲ್ಲ. ಮಹಿಳೆಯರು ಸಮಾಜದಲ್ಲೂ ಗುರುತರವಾದ ಜವಾಬ್ದಾರಿಯನ್ನು ನಿರ್ವಹಿಸಬೇಕು ಎಂದು ನಾಪೋಕ್ಲು ಗ್ರಾ.ಪಂ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಹೇಳಿದರು. ನಾಪೋಕ್ಲುವಿನ ಮಹಿಳಾ ಸಮಾಜದ ಕಟ್ಟಡದಲ್ಲಿ ನಡೆದ ನಂ. 393ನೇ ನಾಪೋಕ್ಲು ಸಹಕಾರ ಮಹಿಳಾ ಸಮಾಜದ 2023-24ರ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಮಹಿಳೆಯರು ಸಂಘಟಿತರಾಗೀ ಸ್ವಾಭಿಮಾನವನ್ನು ಬೆಳೆಸಿಕೊಳ್ಳಬೇಕು ಎಂದ ಅವರು, ಸಮಾಜದಲ್ಲಿ ಮುಂದೆ ಬರಬೇಕಾದರೆ ಸಮಸ್ಯೆಗಳನ್ನು ಧೈರ್ಯದಿಂದ ಎದುರಿಸಿ ಧ್ವನಿ ಎತ್ತಬೇಕು ಎಂದರು. ಗ್ರಾ.ಪಂ ಉಪಾಧ್ಯಕ್ಷೆ ಕುಲ್ಲೇಟಿರ ಹೇಮಾ ಅರುಣ್ ಬೇಬ ಮಾತನಾಡಿ, ಸಮಾಜದ ಹಿರಿಯ ಮಹಿಳೆಯರು ಜ್ಞಾನ ವೃದ್ಧಿಸುವ ಕೆಲಸವನ್ನು ಮಾಡಿದ್ದಾರೆ. ಸಮಾಜದಿಂದ ಉತ್ತಮ ಕಾರ್ಯಗಳಾಗುತ್ತಿವೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಹಿಳಾ ಸಮಾಜದ ಅಧ್ಯಕ್ಷ ಕುಂಚೆಟ್ಟಿರ ರೇಷ್ಮಾ ಉತ್ತಪ್ಪ, ಸಮಾಜದ ಅಭಿವೃದ್ಧಿಗೆ ಎಲ್ಲರ ಸಲಹೆ ಸಹಕಾರ ಅಗತ್ಯ. ಈ ನಿಟ್ಟಿನಲ್ಲಿ ಎಲ್ಲರೂ ಸಹಕರಿಸುವಂತೆ ಮನವಿ ಮಾಡಿ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಈ ಸಂದರ್ಭ ಉಪಾಧ್ಯಕ್ಷೆ ಬೊಪ್ಪಂಡ ಶೈಲಾ ಬೋಪಯ್ಯ, ನಿರ್ದೇಶಕರಾದ ಬಿದ್ದಾಟಂಡ ಗಿರಿಜಾ ಬೋಪಣ್ಣ, ಮುಂಡಂಡ ಸುಶೀಲ ಸೋಮಣ್ಣ, ಕೇಟೋಳಿರ ಶಾರದಾ ಪಳಂಗಪ್ಪ, ಬೊಪ್ಪಂಡ ಬೊಳ್ಳಮ್ಮ ನಾಣಯ್ಯ, ಕುಂಡ್ಯೋಳಂಡ ಕವಿತಾ ಮುತ್ತಣ್ಣ, ಅಪ್ಪಾರಂಡ ಡೇಸಿ ತಿಮ್ಮಯ್ಯ, ಪುಲ್ಲೆರ ಪದ್ಮಿನಿ ಭೀಮಯ್ಯ, ಕಾರ್ಯದರ್ಶಿ ರಾಜೇಶ್ವರಿ ಲೋಕೇಶ್ ಹಾಗೂ ಸಮಾಜದ ಸದಸ್ಯರು ಉಪಸ್ಥಿತರಿದ್ದರು.
ವರದಿ :ದುಗ್ಗಳ ಸದಾನಂದ.