ಮಡಿಕೇರಿ ಸೆ.20 NEWS DESK : ಕೆಪಿಸಿಸಿಯಿಂದ ನೂತನವಾಗಿ ಉಸ್ತುವಾರಿಯಾಗಿ ಆಯ್ಕೆಯಾಗಿರುವ ಡಿ.ಕೆ.ಭೃಜೇಶ್ ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದರು. ನಂತರ ನಡೆದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜಿಲ್ಲೆಯಲ್ಲಿ ಪಕ್ಷವನ್ನು ಬೂತ್ ಮಟ್ಟದಿಂದಲೇ ಪುನರ್ ರಚಿಸಿ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸುವುದರೊಂದಿಗೆ ಮುಂದಿನ ದಿನಗಳಲ್ಲಿ ಬರುವ ಎಲ್ಲಾ ಚುನಾವಣೆಗಳಲ್ಲೂ ಮೇಲುಗೈ ಸಾಧಿಸುವಲ್ಲಿ ಶ್ರಮ ವಹಿಸಬೇಕೆಂದು ಕರೆ ನೀಡಿದರು. ಪಕ್ಷದ ಹೈಕಮಾಂಡ್ ನಿಂದ ಕೊಡಗು ಜಿಲ್ಲಾ ಕಾಂಗ್ರೆಸ್ ಗೆ ಬೇಕಾದಂತಹ ಎಲ್ಲಾ ಸಹಕಾರವನ್ನು ನೀಡುವುದರೊಂದಿಗೆ ಪಕ್ಷದ ಸಂಘಟನೆಯಲ್ಲಿ ತಾವು ಕೂಡ ಭಾಗಿಯಾಗುವುದಾಗಿ ತಿಳಿಸಿದರು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಪಕ್ಷದ ಶಿಷ್ಟಾಚಾರವನ್ನು ಯಾರೂ ಉಲ್ಲಂಘಿಸಬಾರದು. ಪಕ್ಷದಲ್ಲಿ ಯಾವುದೇ ರೀತಿಯ ಬೆಳವಣಿಗೆ ಆದರೂ ಪಕ್ಷದ ಜಿಲ್ಲಾಧ್ಯಕ್ಷರ ಗಮನಕ್ಕೆ ತರಬೇಕೆಂದು ಮನವಿ ಮಾಡಿದರು. ಸಭೆಯಲ್ಲಿ ನೆರದಿದ್ದ ಹಲವು ಮುಖಂಡರು ಇದೇ ಸಂದರ್ಭ ತಮ್ಮ ಅನಿಸಿಕೆಗಳನ್ನು ತಿಳಿಸಿದರು. ಸಭೆಯಲ್ಲಿ ಕಾಂಗ್ರೆಸ್ ಪ್ರಮುಖ ನಾಯಕರು, ಡಿಸಿಸಿ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು, ಮುಂಚೂಣಿ ಘಟಕ/ಸೆಲ್ ಗಳ ಅಧ್ಯಕ್ಷರುಗಳು ಚುನಾಯಿತ ಜನಪ್ರತಿನಿಧಿಗಳು ಮತ್ತು ನಾಮನಿರ್ದೇಶಿತ ಪ್ರಮುಖರು. ಹಾಜರಿದ್ದರು.