ಮಡಿಕೇರಿ ಸೆ.21 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು 2022 ಮತ್ತು 2023 ನೇ ವರ್ಷದ ‘ಗೌರವ ಪ್ರಶಸ್ತಿ’ ಗೆ ಅರ್ಜಿ ಆಹ್ವಾನಿಸಲಾಗಿದೆ. ಅರೆಭಾಷೆ ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಅಧ್ಯಯನ ಮುಂತಾದ ಕ್ಷೇತ್ರದಲ್ಲಿ ಅನನ್ಯ ಸೇವೆ ಸಲ್ಲಿಸಿದ ಮಹನೀಯರನ್ನು 2022 ಮತ್ತು 2023 ನೇ ವರ್ಷದ ಪ್ರಶಸ್ತಿಗೆ ಪರಿಗಣಿಸಲಾಗುತ್ತದೆ. ಪ್ರತಿ ವರ್ಷ ಪ್ರತಿಯೊಂದು ಕ್ಷೇತ್ರಕ್ಕೆ ಒಬ್ಬರಂತೆ 3 ಜನ ಸಾಧಕರನ್ನು ಗೌರವ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ. ಅರ್ಜಿಗಳನ್ನು ಸ್ವತ: ಸಾಧಕರೇ ಸಲ್ಲಿಸಬಹುದು ಅಥವಾ ಸಾಧಕರ ಅಭಿಮಾನಿಗಳು ಶಿಫಾರಸ್ಸುಮಾಡಿ ಅರ್ಜಿ ಸಲ್ಲಿಸಬಹುದು. ಪ್ರಶಸ್ತಿಗೆ ಅರ್ಹರಾಗಿರುವವರ ಕುರಿತಾಗಿ ಹೆಚ್ಚಿನ ಅಥವಾ ವಿಶೇಷ ಮಾಹಿತಿ ಇದ್ದಲ್ಲಿ ಅಕಾಡೆಮಿಗೆ ಒದಗಿಸಬಹುದು. ಅರ್ಜಿ ಸಲ್ಲಿಸುವವರು ವ್ಯಕ್ತಿ ಪರಿಚಯದ ಜೊತೆ ಎಲ್ಲಾ ಮಾಹಿತಿಯನ್ನು ಅಕಾಡೆಮಿಯ ನಿಗದಿತ ಅರ್ಜಿ ನಮೂನೆಯಲ್ಲಿಯೇ ಕಳುಹಿಸಬೇಕು. ಇದಕ್ಕೆ ಸಂಬಂಧಿಸಿ ನಿಗದಿತ ಅರ್ಜಿ ನಮೂನೆಯನ್ನು ಅಕಾಡೆಮಿಯ ಕಚೇರಿಯಿಂದ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಇತ್ತೀಚಿನ ಭಾವಚಿತ್ರ ಹಾಗೂ ದಾಖಲೆಗಳ ಪ್ರತಿಯೊಂದಿಗೆ ಅಕ್ಟೋಬರ್ 10 ರೊಳಗೆ ತಲುಪುವಂತೆ ಅಂಚೆ ಮೂಲಕ ಅಥವಾ ಖುದ್ದಾಗಿ ಸಲ್ಲಿಸಬಹುದು. ಪ್ರಶಸ್ತಿಗೆ ಅರ್ಜಿ ಸಲ್ಲಿಸುವವರು ಲಕೋಟೆಯ ಮೇಲೆ “ಗೌರವ ಪ್ರಶಸ್ತಿ 2022 ಮತ್ತು 2023 ಯೋಜನೆ” ಎಂದು ಬರೆದು ಅರ್ಜಿ ವಿವರಗಳನ್ನು ಅಧ್ಯಕ್ಷರು/ ರಿಜಿಸ್ಟ್ರಾರ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಕಾಫಿ-ಕೃಪ ಕಟ್ಟಡ, 1ನೇ ಮಹಡಿ, ರಾಜಾಸೀಟ್ ರಸ್ತೆ, ಮಡಿಕೇರಿ – 571 201 ಈ ವಿಳಾಸಕ್ಕೆ ಕಳುಹಿಸಿಕೊಡುವುದು. ಅರ್ಜಿ ಸಲ್ಲಿಸಲು ಅ.10 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಯನ್ನು ಅಧ್ಯಕ್ಷರು, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಕಾಫಿ ಕೃಪಾ ಕಟ್ಟಡ, ಮಡಿಕೇರಿ ದೂ: 08272-223055, ಮೊಬೈಲ್ ಸಂಖ್ಯೆ 6362522677 ಇಲ್ಲಿಂದ ಪಡೆದುಕೊಳ್ಳಬಹುದು ಎಂದು ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಕೋರಿದ್ದಾರೆ.