ಮಡಿಕೇರಿ ಸೆ.21 NEWS DESK : ಕೊಡಗು ಜಿ.ಪಂ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಛೇರಿ, ಸೋಮವಾರಪೇಟೆ ತಾ. ಸಮೂಹ ಸಂಪನ್ಮೂಲ ಕೇಂದ್ರ, ನಂಜರಾಯಪಟ್ಟಣದ ಸಂಯುಕ್ತಾಶ್ರಯದಲ್ಲಿ ಬಸನಳ್ಳಿಯ ಸರ್ಕಾರಿ ವಾಲ್ಮೀಕಿ ಶಾಲೆಯಲ್ಲಿ 2024-25ನೇ ಸಾಲಿನ “ನಂಜರಾಯಪಟ್ಟಣ ಕಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ಮುಖ್ಯ ಶಿಕ್ಷಕ ರವಿ, ಪ್ರತಿಭಾ ಕಾರಂಜಿ ವಿನೂತನ ಕಾರ್ಯಕ್ರಮವಾಗಿದ್ದು, ಕ್ಲಸ್ಟರ್, ಬ್ಲಾಕ್ ಮತ್ತು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಸಾಂಸ್ಕೃತಿಕ ಮತ್ತು ಸಾಹಿತ್ಯ ಸ್ಪರ್ಧೆಗಳನ್ನು ನಡೆಸಲಾಗುತ್ತದೆ. ಇದು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳಿಗೆ ಸಾಮಾನ್ಯ ವೇದಿಕೆಯನ್ನು ಒದಗಿಸುತ್ತದೆ ಎಂದು ಹೇಳಿದರು. ಗುಡ್ಡೆಹೊಸೂರು ಗ್ರಾ.ಪಂ ಅಧ್ಯಕ್ಷೆ ರುಕ್ಮಿಣಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಪಟ್ಟು ಮಾದಪ್ಪ, ಸದಸ್ಯರಾದ ಉಮಾ ಹಾಗೂ ಸೌಮ್ಯ, ಸಿ ಒ ಸಿ ಸಿ ನಿರ್ದೇಶಕ ವಸಂತ್, ಪ್ರಾಥಮಿಕ ಶಾಲಾ ಶಕ್ಷಕರ ಸಂಘದ ಪದಾಧಿಕಾರಿ ಸುರೇಶ್, ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲರಾದ ಶ್ರೀದೇವಿ, ಮೊರಾರ್ಜಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಸುಮಿತ್ರಾ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಸತ್ಯನಾರಾಯಣ, ಗುಡ್ಡೆಹೊಸೂರು ಜಿ.ಎಂ.ಪಿ ಶಾಲೆ ಮುಖ್ಯಶಿಕ್ಷಕ ಸಣ್ಣಸ್ವಾಮಿ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಮಂಜೇಶ್, ಸರ್ಕಾರಿ ವಾಲ್ಮೀಕಿ ಶಾಲೆಯ ಮುಖ್ಯ ಶಿಕ್ಷಕ ರವಿ, ಕಾರ್ಯಕ್ರಮದ ಆಯೋಜಕರಾದ ವೈಶಾಲಿ, ಶಾಲಾ ಶಿಕ್ಷಕ ಶಿಕ್ಷಕರು ಹಾಗೂ ಶಾಲಾ ಮಕ್ಕಳು, ಸಿಬ್ಬಂದಿಗಳು ಹಾಜರಿದ್ದರು.