ಮಡಿಕೇರಿ NEWS DESK ಸೆ.21 : ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಬಾಚರಣಿಯಂಡ ಸುಮನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘದ ಸಭಾಂಗಣದಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಸುಮನ್ ಅವರು, ಸಂಘವು ಪ್ರಸ್ತುತ ಸಾಲಿನಲ್ಲಿ ಕೆಸಿಸಿ ಫಸಲು ಸಾಲ, ಆಭರಣ ಸಾಲ, ಗೊಬ್ಬರ ಖರೀದಿ ಸಾಲ ಇನ್ನಿತರ ಸಾಲಗಳು ಸೇರಿ ಒಟ್ಟು 13 ಕೋಟಿ ರೂ. ಸಾಲ ವಿತರಣೆ ಮಾಡಿದ್ದು, ವರ್ಷಾಂತ್ಯಕ್ಕೆ 5.29 ಕೋಟಿ ರೂ. ಠೇವಣಿ ಸಂಗ್ರಹಿಸಲಾಗಿದೆ ಎಂದು ತಿಳಿಸಿದರು. ಸಂಘವು ಆಡಿಟ್ A ವರ್ಗೀಕರಣದಲ್ಲಿ ಮುಂದುವರೆದಿದ್ದು, 2023-24 ನೇ ಸಾಲಿನಲ್ಲಿ ನಿವ್ವಳ ರೂ.28.62 ಲಕ್ಷ ಲಾಭ ಗಳಿಸಿದ್ದು, ಸಂಘದ ಸದಸ್ಯರುಗಳಿಗೆ ಶೇ.13 ಡಿವಿಡೆಂಟ್ ಹಂಚಿಕೆ ಮಾಡಲು ನಿರ್ಧರಿಸಲಾಗಿದೆ ಎಂದರು.
ಸAಘದ ಸದಸ್ಯರುಗಳು ಸಂಘದ ಅಭಿವೃದ್ಧಿಗಾಗಿ ಹಲವು ಸಲಹೆ ಸೂಚನೆಗಳನ್ನು ನೀಡಿದರು. 10ನೇ ತರಗತಿ ಮತ್ತು ಪಿಯುಸಿಯಲ್ಲಿ ಅಧಿಕ ಅಂಕ ಗಳಿಸಿದ ಸಂಘದ ಸದಸ್ಯರ ಮಕ್ಕಳ ವಿದ್ಯಾಭಾಸಕ್ಕೆ ಸಂಘದ ವತಿಯಿಂದ ಪ್ರೋತ್ಸಾಹ ಧನ ವಿತರಿಸಲಾಯಿತು. ಸಂಘದ ಉಪಾಧ್ಯಕ್ಷ ಪೋಡೊನೋಲನ ಶ್ರೀನಿವಾಸ್ ಸ್ವಾಗತಿಸಿ, ನಿರ್ದೇಶಕ ಕೂರನ ಕಿಶೋರ್ ಕುಮಾರ್ ವಂದಿಸಿದರು. ನಿರ್ದೇಶಕರಾದ ವೀಣಾ ಸೋಮಯ್ಯ ಪ್ರಾರ್ಥಿಸಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎ.ಬಿ.ಜ್ಯೋತಿ, ನಿರ್ದೇಶಕರುಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.