ಮಡಿಕೇರಿ NEWS DESK ಸೆ.22 : ಸರ್ಕಾರದ ನಿರ್ದೇಶನದಂತೆ ಜಿಲ್ಲೆಯ ಎಲ್ಲಾ ಸಹಕಾರ ಬ್ಯಾಂಕ್‌ಗಳಲ್ಲಿ ಕೃಷಿಕರಿಗೆ ಸರ್ಕಾರದ ನಿರ್ದೇಶನದಂತೆ ಶೂನ್ಯ ಬಡ್ಡಿ ದರದಲ್ಲಿ 3 ರಿಂದ 5 ಲಕ್ಷ ರೂ.ವರೆಗೂ ಸಾಲ ನೀಡಲು ಮುಂದಾಗಲಾಗಿದೆ ಎಂದು ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಅಧ್ಯಕ್ಷರಾದ ಕೊಡಂದೇರ ಪಿ.ಗಣಪತಿ ಅವರು ತಿಳಿಸಿದ್ದಾರೆ. ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ “ಉನ್ನತಿ ಭವನ”ದ ದಿ:ಪಂದ್ಯAಡ.ಐ.ಬೆಳ್ಯಪ್ಪ ಸ್ಮಾರಕ ಸಭಾಂಗಣದಲ್ಲಿ ಶನಿವಾರ ನಡೆದ ಬ್ಯಾಂಕಿನ 99 ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೃಷಿಕರ ಶ್ರೇಯೋಭಿವೃದ್ಧಿಗಾಗಿ ಸರ್ಕಾರ ಹಲವು ಕಾರ್ಯಕ್ರಮ ಹಮ್ಮಿಕೊಂಡಿದೆ. ಆ ನಿಟ್ಟಿನಲ್ಲಿ ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ರೂ.ವರೆಗೂ ಸಾಲವನ್ನು ಸಹಕಾರ ಬ್ಯಾಂಕುಗಳ ಮೂಲಕ ವಿತರಿಸಲಾಗುತ್ತಿದೆ ಎಂದು ಬಾಂಡ್ ಗಣಪತಿ ಅವರು ಹೇಳಿದರು. ‘ಪ್ರಸಕ್ತ ಸಾಲಿನಲ್ಲಿ ಸರ್ಕಾರದ ಕೃಷಿ ಅಲ್ವಾವಧಿ ರೂ.5 ಲಕ್ಷಕ್ಕೆ ಏರಿಸಿದೆ. ಹಾಗೆಯೇ ಮಧ್ಯಮಾವಧಿ ಬಡ್ಡಿ ರಿಯಾಯಿತಿ ಯೋಜನೆಯಡಿ ಗರಿಷ್ಠ ಮಿತಿ ರೂ.15 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಕೊಡಗು ಜಿಲ್ಲೆಯ ಖಾಯಂ ನಿವಾಸಿಗಳ ಮಕ್ಕಳು ದೇಶ ಮತ್ತು ವಿದೇಶದಲ್ಲಿ ಉನ್ನತ ವ್ಯಾಸಂಗ ಮಾಡಲು ಬ್ಯಾಂಕಿನಲ್ಲಿ “ವಿದ್ಯಾ ಸಹಕಾರ”ವೆಂಬ ವಿದ್ಯಾಭ್ಯಾಸ ಸಾಲದ ಯೋಜನೆಯನ್ನು ಗರಿಷ್ಠ ರೂ.60 ಲಕ್ಷಗಳವರೆಗೆ ನೀಡಲಾಗುತ್ತಿದೆ ಎಂದರು.’ ಸಹಕಾರ ಬ್ಯಾಂಕ್‌ಗಳು ಸರ್ಕಾರದ ಆದೇಶವನ್ನು ಕಡ್ಡಾಯವಾಗಿ ಪ್ರಥಮ ಆದ್ಯತೆಯಲ್ಲಿ ಪಾಲಿಸಬೇಕು. ಯಾವುದೇ ಕಾರಣಕ್ಕೂ ಲೆಕ್ಕ ಪರಿಶೋಧನೆಯನ್ನು ವಿಳಂಬ ಮಾಡಬಾರದು ಎಂದು ಕೊಡಂದೇರ ಪಿ.ಗಣಪತಿ ಅವರು ಒತ್ತಿ ಹೇಳಿದರು. ಜಿಲ್ಲೆಯಲ್ಲಿ 73 ವಿವಿಧ ರೀತಿಯ ಸಹಕಾರ ಸಂಘಗಳು ಇದ್ದು, ಆಯಾಯ ಆರ್ಥಿಕ ವರ್ಷದಲ್ಲಿ ಲೆಕ್ಕಪರಿಶೋಧನೆ ಮಾಡಿಸಿಕೊಳ್ಳಬೇಕು. ಈ ಸಂಬAಧ ವರದಿಯನ್ನು ಪ್ರತೀ ವರ್ಷ ಡಿಸಿಸಿ ಬ್ಯಾಂಕ್‌ಗೆ ಸಲ್ಲಿಸುವಂತೆ ಇದೇ ಸಂದರ್ಭದಲ್ಲಿ ತಿಳಿಸಿದರು. ಸಹಕಾರ ಕ್ಷೇತ್ರದಲ್ಲಿ ಕೃಷಿಕರ ಪಾತ್ರ ಮಹತ್ವದ್ದಾಗಿದೆ. ಆ ನಿಟ್ಟಿನಲ್ಲಿ ಸಹಕಾರ ಕ್ಷೇತ್ರದ ಅಭಿವೃದ್ಧಿ ಮತ್ತು ಬೆಳವಣಿಗೆಗೆ ಎಲ್ಲರೂ ಕೈಜೋಡಿಸಬೇಕು. ಸಹಕಾರ ಬ್ಯಾಂಕ್‌ಗಳು ಉಳಿದಲ್ಲಿ ಕೃಷಿಕರ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಅವರು ನುಡಿದರು. ಸಹಕಾರ ಕ್ಷೇತ್ರವನ್ನು ಮತ್ತಷ್ಟು ಸ್ವಾವಲಂಭಿಯನ್ನಾಗಿ ಮಾಡುವ ಜವಾಬ್ದಾರಿ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳ ಎಲ್ಲರಲ್ಲಿಯೂ ಇದೆ. ಸಹಕಾರ ಕ್ಷೇತ್ರ ಬಲಪಡಿಸಲು ಎಲ್ಲರ ಸಹಕಾರ ಅಗತ್ಯ ಎಂದು ವಿವರಿಸಿದರು. ಡಿಸಿಸಿ ಬ್ಯಾಂಕ್ ಪ್ರತೀ ವರ್ಷ ಪ್ರಗತಿ ಪಥದತ್ತ ಸಾಗುತ್ತಿದ್ದು, ಬ್ಯಾಂಕಿನ ಏಳಿಗೆಗೆ ಪ್ರತಿಯೊಬ್ಬರೂ ಕೈಜೋಡಿಸಿದ್ದಾರೆ ಎಂದು ಅವರು ಶ್ಲಾಘಿಸಿದರು. ಸಹಕಾರ ಸಂಘಗಳ ಕಾಯ್ದೆ ತಿದ್ದುಪಡಿಗೆ ಇದೇ ಸಂದರ್ಭದಲ್ಲಿ ಅತೃಪ್ತಿ ವ್ಯಕ್ತಪಡಿಸಿದ ಬಾಂಡ್ ಗಣಪತಿ ಅವರು ಆಡಳಿತ ಮಂಡಳಿಗೆ ನಾಮ ನಿರ್ದೇಶನ ಸದಸ್ಯರನ್ನು ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನಾಗಿ ಪರಿಗಣಿಸುವುದು ಸರಿಯಲ್ಲ. ಈ ಬಗ್ಗೆ ಚಿಂತಿಸಬೇಕಿದೆ ಇದೇ ಸಂದರ್ಭದಲ್ಲಿ ತಿಳಿಸಿದರು.
ಬಡ್ಡಿ ರಿಯಾಯಿತಿ ಬಿಲ್ಲುಗಳನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಲು 2024 ರ ಆಗಸ್ಟ್, 22 ರಂದು ಬ್ಯಾಂಕಿನ ವತಿಯಿಂದ ತರಬೇತಿ ನೀಡಿದ್ದು, ಇ-ಮೇಲ್ ಮೂಲಕ ಎಲ್ಲಾ ಸಹಕಾರ ಸಂಘಗಳು ಕಾಲಮಿತಿಯೊಳಗೆ ಅಪ್‌ಲೋಡ್ ಮಾಡುವಂತಾಗಬೇಕು ಎಂದು ಕೋರಿದರು. 2023-24ನೇ ಸಾಲಿನ ಲೆಕ್ಕ ಪರಿಶೋಧನೆ(ಆಡಿಟ್)ನಲ್ಲಿ ಇದೇ ಮೊದಲ ಬಾರಿಗೆ ಶೇ.93 ರಷ್ಟು ಅಂಕ ಪಡೆದು. ಬ್ಯಾಂಕು ಕಳೆದ ಹಲವು ವರ್ಷಗಳಿಂದ ಆಡಿಟ್‌ನಲ್ಲಿ “ಎ” ವರ್ಗೀಕರಣ ಇರುತ್ತದೆ. ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕಿನಿAದ, 2022-23 ನೇ ಸಾಲಿಗೆ ಅತ್ಯುತ್ತಮ ಕಾರ್ಯ ನಿರ್ವಹಣೆಗೆ ನಮ್ಮ ಬ್ಯಾಂಕಿಗೆ 2024 ರ ಸೆಪ್ಟೆಂಬರ್, 13 ರಂದು ನಡೆದ ಅಪೆಕ್ಸ್ ಬ್ಯಾಂಕಿನ ವಾರ್ಷಿಕ ಮಹಾ ಸಭೆಯಲ್ಲಿ “ಅತ್ಯುತ್ತಮ ಸಾಧನಾ ತೃತೀಯ ಪ್ರಶಸ್ತಿ ದೊರೆತಿದೆ ಎಂದು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು. ‘ಸದಸ್ಯತ್ವ ಮತ್ತು ಪಾಲು ಬಂಡವಾಳ ಮಾರ್ಚ್ ಅಂತ್ಯಕ್ಕೆ ಒಟ್ಟು 287 ಸಹಕಾರ ಸಂಘಗಳು ಬ್ಯಾಂಕಿನ ಸದಸ್ಯತ್ವವನ್ನು ಪಡೆದಿದ್ದು, “ಬಿ” ವರ್ಗದ ಸದಸ್ಯ ಸಂಘಗಳಿAದ ರೂ.31.44 ಕೋಟಿ ಪಾಲು ಬಂಡವಾಳ ಹಾಗೂ ದೊಡ್ಡ ಮೊತ್ತದ ಸಾಲ ಪಡೆಯುವ “ಸಿ” ವರ್ಗದ ಸದಸ್ಯರಿಂದ ರೂ. 0.03 ಕೋಟಿ ಒಟ್ಟು 31.47 ಕೋಟಿ ಷೇರು ಬಂಡವಾಳ ಸಂಗ್ರಹಿಸಿದ್ದು, ಕಳೆದ ಸಾಲಿಗೆ ಹೋಲಿಸಿದಾಗ ರೂ.3.04 ಕೋಟಿ ಪಾಲು ಬಂಡವಾಳದಲ್ಲಿ ಹೆಚ್ಚಳವಾಗಿದೆ ಎಂದು ಬಾಂಡ್ ಗಣಪತಿ ಅವರು ವಿವರಿಸಿದರು.’ ವಿವಿಧ ಸಹಕಾರ ಬ್ಯಾಂಕುಗಳ ಅಧ್ಯಕ್ಷರಾದ ನಂದ ಸುಬ್ಬಯ್ಯ, ಎಂ.ಬಿ.ದೇವಯ್ಯ, ರವಿಬಸಪ್ಪ, ನಾಗೇಶ್ ಕುಂದಲ್ಪಾಡಿ, ಕೃಷ್ಣ ಗಣಪತಿ ಇತರರು ಸಹಕಾರ ಸಂಘಗಳ ಬೆಳವಣಿಗೆ ಮತ್ತು ಅಭಿವೃದ್ಧಿ ಸಂಬಂಧಿಸಿದಂತೆ ಹಲವು ವಿಷಯ ಪ್ರಸ್ತಾಪಿಸಿದರು. ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾದ ಕೇಟೋಳಿರ ಎಸ್.ಪೂವಯ್ಯ, ನಿರ್ದೇಶಕರಾದ ಹೊಟ್ಟೆಂಗಡ ಎಂ.ರಮೇಶ್, ಹೊಸೂರು ಜೆ.ಸತೀಶ್ ಕುಮಾರ್, ಕೆ.ಅರುಣ್ ಭೀಮಯ್ಯ, ಕಾಂಗೀರ ಎನ್.ಸತೀಶ್, ಪೂಳಂಡ ಪಿ.ಪೆಮ್ಮಯ್ಯ, ಎಚ್.ಕೆ.ಮಾದಪ್ಪ, ಎಸ್.ಸಿ.ಶರತ್‌ಶೇಖರ್, ಎನ್.ಎಂ.ಉತ್ತಪ್ಪ, ಶರವಣ ಕುಮಾರ್ ಟಿ.ಆರ್., ಗುಮ್ಮಟ್ಟೀರ ಎಸ್.ಕಿಲನ್ ಗಣಪತಿ, ಜಲಜಾ ಶೇಖರ್, ಎಂ.ಕೆ.ಬೆಳ್ಳಿಯಪ್ಪ, ವೃತ್ತಿಪರ ನಿರ್ದೇಶಕರಾದ ಎ.ಗೋಪಾಲಕೃಷ್ಣ, ಮುಂಡಂಡ ಸಿ.ನಾಣಯ್ಯ ಸಹಕಾರ ಸಂಘಗಳ ಉಪ ನಿಬಂಧಕರಾದ ಜಿ.ಆರ್.ವಿಜಯ್ ಕುಮಾರ್, ಬ್ಯಾಂಕಿನ ಸಿಇಒ ಪ್ರವೀಣ್ ಬಿ ನಾಯಕ್, , ಪ್ರಧಾನ ವ್ಯವಸ್ಥಾಪಕಿ ಬೋಜಮ್ಮ ಜಿ.ಎಂ ಇತರರು ಇದ್ದರು.