ನಾಪೋಕ್ಲು ಸೆ.23 NEWS DESK : ಬೆಂಗಳೂರಿನ ಕೊಡಗು ಗೌಡ ಸಮಾಜದ ಪ್ರಾಯೋಜಕತ್ವದಲ್ಲಿ ಓಜಸ್ವಿ ಫೌಂಡೇಶನ್ ವತಿಯಿಂದ ಚೇರಂಬಾಣೆ ಅರುಣಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರೌಢಶಾಲಾ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿದ್ಧತೆ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಾಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಸಿ.ಐ.ಟಿ ಪೊನ್ನಂಪೇಟೆ ಉಪನ್ಯಾಸಕರಾದ ಕವಿತಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ವಿದ್ಯಾರ್ಥಿಗಳಲ್ಲಿ ಏಕಾಗ್ರತೆ, ಸಮಯ ಪಾಲನೆ, ಶಿಸ್ತು ಮತ್ತು ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ನಂತರ ತಮ್ಮ ಭವಿಷ್ಯವನ್ನು ಹೇಗೆ ರೂಪಿಸಿಕೊಳ್ಳಬಹುದು ಎಂಬುದರ ಬಗ್ಗೆ ಪ್ರೊಜೆಕ್ಟರ್ (ಕಿರುತೆರೆ) ಮೂಲಕ ಮನಮುಟ್ಟುವಂತೆ ಸಮಗ್ರ ಮಾಹಿತಿಯನ್ನು ನೀಡಿದರು. ಅರುಣಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಿ.ಎಸ್.ರಾಮಕೃಷ್ಣ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶೆಟ್ಟೆಜನ ಬ್ರಿಜೇಶ್, ವಿದ್ಯಾ ಸಂಸ್ಥೆಯ ಉಪನ್ಯಾಸಕರಾದ ಚನ್ನಬಸಪ್ಪ, ದಾಮೋದರ್ ನಾಯಕ್ ಮತ್ತು ಶಿಕ್ಷಕರಾದ ಪರಮೇಶ್ ಮತ್ತು ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ವರದಿ : ದುಗ್ಗಳ ಸದಾನಂದ