ಬೆಂಗಳೂರು NEWS DESK ಸೆ.23 : ಸಂಚಾರಿ ನಿಯಮಗಳನ್ನು ಶಿಸ್ತಿನಿಂದ ಪಾಲಿಸಿದರೆ ಬಹುತೇಕ ಅಪಘಾತಗಳು ಸಂಭವಿಸುವುದೇ ಇಲ್ಲ. ಕುಡಿದು ವಾಹನ ಓಡಿಸುವುದನ್ನು ನೂರಕ್ಕೆ ನೂರರಷ್ಟು ನಿಲ್ಲಿಸಿ. ನಿಮ್ಮ ಕುಟುಂಬಗಳನ್ನು ಅನಾಥ ಮಾಡಬೇಡಿ ಎಂದು ಯುವ ಸಮೂಹಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ವಿಧಾನಸೌಧದ ಬಳಿ ನೂತನ ಆಂಬ್ಯುಲೆನ್ಸ್ ಗಳಿಗೆ ಹಸಿರು ನಿಶಾನೆ ತೋರಿ ಅವರು ಮಾತನಡಿದರು. ಮೊಬೈಲ್ ಮಾತಾಡಿಕೊಂಡು ವಾಹನ ಓಡಿಸಿದರೆ ಅಪಘಾತಗಳಾಗದೆ ಇರುತ್ತದಾ ಎಂದು ಪ್ರಶ್ನಿಸಿದ ಸಿಎಂ, ನಿಮ್ಮ ಜೀವಕ್ಕೆ ನೀವೇ ಜವಾಬ್ದಾರಿ. ನಿಮ್ಮ ಕುಟುಂಬಕ್ಕೆ ನೀವೇ ಜವಾಬ್ದಾರಿ. ಆದ್ದರಿಂದ ಸಂಚಾರಿ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ ಎಂದರು. ::: ಲೈಸೆನ್ಸ್ ರದ್ದು ::: ಸಂಚಾರಿ ನಿಯಮ ಪಾಲಿಸದೆ ವಾಹನ ಓಡಿಸುವವರ, ಕುಡಿದು ವಾಹನ ಚಲಾಯಿಸುವರ ಚಾಲನಾ ಪರವಾನಗಿಯನ್ನು ರದ್ದು ಮಾಡಿ ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭ ಸಾರಿಗೆ ಸಚಿವರಿಗೆ ಸೂಚನೆ ನೀಡಿದರು. ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಗ್ಯಾರಂಟಿ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ.ರೇವಣ್ಣ ಸೇರಿ ಹಲವು ಮುಖಂಡರು ಮತ್ತು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.