ಮಡಿಕೇರಿ ಸೆ.23 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಹಿರಿಯ ನಾಗರಿಕರ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯು ಅ.1 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ(ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಹತ್ತಿರ) ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಲೋಕಸಭಾ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಕೊಡಗು ಜಿಲ್ಲಾ ಪಂಚಾಯತ್ ಆಡಳಿತ ಅಧಿಕಾರಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಹಿರಿಯ ನಾಗರಿಕರ ಸಬಲೀಕರಣ ಹಾಗೂ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಕೆ.ಜಿ.ವಿಮಲ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನಟರಾಜ, ಇತರರು ಪಾಲ್ಗೊಳ್ಳಲಿದ್ದಾರೆ. ವಕೀಲರಾದ ಮೀನಾಕುಮಾರಿ ಅವರು ಉಪನ್ಯಾಸ ನೀಡಲಿದ್ದಾರೆ.